RBI Recruitment 2022 : ಮ್ಯಾನೇಜರ್ ಹುದ್ದೆಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ

By Suvarna News  |  First Published Mar 30, 2022, 3:29 PM IST

ಭಾರತೀಯ ರಿಸರ್ವ್ ಬ್ಯಾಂಕ್  ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.   ಎಪ್ರಿಲ್ 18 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
 


ಬೆಂಗಳೂರು (ಮಾ.30): ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India -RBI)  ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾಷಾಂತರ ವಿಭಾಗ ಮತ್ತು ಪ್ರೋಟೋಕಾಲ್ ಹಾಗೂ ಭದ್ರತೆ ವಿಭಾಗದಲ್ಲಿ ಒಟ್ಟು 6 ಸಹಾಯಕ ವ್ಯವಸ್ಥಾಪಕ     (Assistant Manager)​ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು  ಎಪ್ರಿಲ್ 18ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ www.rbi.org.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ opportunities.rbi.org.in.

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ  ಹುದ್ದೆಗನುಸಾರವಾಗಿ ಹಿಂದಿ ಭಾಷಾಂತರದಲ್ಲಿ ದ್ವಿತೀಯ ದರ್ಜೆಯ ಸ್ನಾತಕೋತ್ತರ ಪದವಿಯನ್ನು ಪೂರೈಸಿರಬೇಕು. ಮತ್ತು ಪದವಿ ಮಟ್ಟದಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ  ಓದಿರಬೇಕು. ಅಥವಾ ಇಂಗ್ಲಿಷ್ ಮತ್ತು ಹಿಂದಿ  ಭಾಷಾಂತರ ಎರಡರಲ್ಲೂ ಸ್ನಾತಕೋತ್ತರ ಪದವಿ ಮಾಡಿರಬೇಕು. 

Latest Videos

undefined

ಪ್ರೋಟೋಕಾಲ್ ಮತ್ತು ಭದ್ರತೆ ವಿಭಾಗಕ್ಕೆ ಅರ್ಜಿ ಸಲ್ಲಿಸಲು ಇಚ್ಚಿಸುವವರು ಸೇನೆ/ನೌಕಾಪಡೆ/ವಾಯುಸೇನೆಯಲ್ಲಿ ಕನಿಷ್ಠ ಐದು ವರ್ಷಗಳ ಕಮಿಷನ್ಡ್ ಸೇವೆಯನ್ನು ಹೊಂದಿರುವ ಅಧಿಕಾರಿಯಾಗಿರಬೇಕು.

KRIDL RECRUITMENT 2022: ವಿವಿಧ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ

ವಯೋಮಿತಿ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ಕನಿಷ್ಠ 21 ಮತ್ತು ಗರಿಷ್ಠ 40 ವರ್ಷಗಳ ವಯೋಮಿತಿ ಹೊಂದಿರಬೇಕು.

ಅರ್ಜಿ ಶುಲ್ಕ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ₹600, SC/ST/PwBD ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು. 

ಆಯ್ಕೆ ಪ್ರಕ್ರಿಯೆ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶ'ನದ  ಮೂಲಕ ಆಯ್ಕೆ ಮಾಡಲಾಗುವುದು. ಮೇ 21 ರಂದು ಪರೀಕ್ಷೆ ನಡೆಯಲಿದೆ. 

AICTE RECRUITMENT 2022: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ವಿವಿಧ ಹುದ್ದೆಗಳ ನೇಮಕಾತಿ 

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ನೇಮಕಾತಿ: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ  (Karnataka State Cooperative Apex Bank ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 79 ಬ್ಯಾಂಕ್ ಸಹಾಯಕ ( Bank Assistant) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 16 ಕೊನೆಯ ದಿನವಾಗಿದೆ. 

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಅಪೆಕ್ಸ್  ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಪದವಿ, ಸ್ನಾತಕೋತ್ತರ ಪದವಿ ಮಾಡಿರಬೇಕು.

ವಯೋಮಿತಿ: ಕರ್ನಾಟಕ ಅಪೆಕ್ಸ್  ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷದ ಒಳಗಿರಬೇಕು. ಸರಕಾರದ ನಿಯಮಗಳ ಅನುಸಾರ 2A, 2B, 3A, 3B ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, SC, ST  ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

 

click me!