ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗದ ಸುವರ್ಣ ಅವಕಾಶ. ಬರೊಬ್ಬರಿ 8000 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರು, (ಜ.03): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 8000 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪೈಕಿ ಬೆಂಗಳೂರಿನಲ್ಲಿ 475 ಹುದ್ದೆಗಳಿವೆ.
ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 26, 2020ರೊಳಗ ಅರ್ಜಿ ಸಲ್ಲಿಸಲು ಕೋರಲಾಗಿದೆ.
undefined
6662 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ: ಗುಜರಾತ್ 550, ಅಮರಾವತಿ 150, ಬೆಂಗಳೂರು 475, ಚೆನ್ನೈ 393, ಕೇರಳ 394, ಮಹಾರಾಷ್ಟ್ರ 865 ಸೇರಿದಂತೆ 8 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ವಿದ್ಯಾರ್ಹತೆ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.
ಗ್ರೇಡ್ A & B ಶ್ರೇಣಿಯ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ವಯೋಮಿತಿ: ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. OBC/2A/2B/3A/3B ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5, ವಿಕಲಚೇತನರಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆ ಪ್ರಕ್ರಿಯೆ: ಪ್ರಾಥಮಿಕ ಮತ್ತು ಮುಖ್ಯ ಪರೀಕ್ಷೆ ಮೂಲಕ (ಆ ರಾಜ್ಯದ ಪ್ರಾದೇಶಿಕ ಭಾಷಾ ಪರೀಕ್ಷೆ) ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ (ಯಾವುದೇ ಶುಲ್ಕವಿಲ್ಲ) ನೀಡಲಾಗಿದೆ .
ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ