SBI PO Prelims Exam Result: ಎಸ್‌ಬಿಐ ನೇಮಕಾತಿಯ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟ

By Suvarna NewsFirst Published Dec 15, 2021, 4:24 PM IST
Highlights
  • ಎಸ್‌ಬಿಐ ಪ್ರೊಬೆಷನರಿ ಅಧಿಕಾರಿ ನೇಮಕಾತಿಯ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟ
  • ಒಟ್ಟು 2056 ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿಗೆ ಕರೆ ನೀಡಿದ್ದ ಎಸ್‌ಬಿಐ
  • ನವೆಂಬರ್ ನಲ್ಲಿ ನಡೆದಿದ್ದ ಪರೀಕ್ಷೆಯ ಫಲಿತಾಂಶ ಪ್ರಕಟ
     

ಬೆಂಗಳೂರು(ಡಿ.15): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State bank of india) ನೇಮಕಾತಿಯ ಪ್ರೊಬೆಷನರಿ ಅಧಿಕಾರಿ (Probationary Officer) ಹುದ್ದೆಗಳ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಎಸ್‌ಬಿಐ (SBI) ಪಿಓ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಮತ್ತು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ ಗೆ   sbi.co.in. ಹೋಗಿ ಪರಿಶೀಲನೆ ಮಾಡಬಹುದು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಟ್ಟು 2056 ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 5,2021 ರಿಂದ ಅಕ್ಟೋಬರ್ 25,2021ರೊಳಗೆ ಅರ್ಜಿ ಆಹ್ವಾನಿಸಿತ್ತು. 

ಸುಮಾರು 10 ಲಕ್ಷ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು.  ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮ್ಸ್ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಎಸ್‌ಬಿಐ ತಿಳಿಸಿತ್ತು. ಮೊದಲ ಹಂತದ ಪ್ರಿಲಿಮಿನರಿ ಪರೀಕ್ಷೆಯು ನವೆಂಬರ್ 20,21 ಮತ್ತು 27,2021 ರಂದು ನಡೆಸಲಾಗಿತ್ತು, ಇದೀಗ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಬಹುದಾಗಿದ್ದು, ಮುಖ್ಯ ಪರೀಕ್ಷೆಯು ಜನವರಿಯಲ್ಲಿ ನಡೆಯಲಿದೆ. ಎಸ್‌ಬಿಐ ಪಿಒ ಫಲಿತಾಂಶವನ್ನು ಪರಿಶೀಲಿಸಲು ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವುದು ಅಗತ್ಯವಿದೆ. ನೇರ ಲಿಂಕ್‌ನೊಂದಿಗೆ ಫಲಿತಾಂಶವನ್ನು ಹೇಗೆ ಪರಿಶೀಲಿಸುವುದು ಎಂಬುದರ ಕುರಿತು ಕೆಳಗೆ ತಿಳಿಸಿರುವ ಪ್ರಕ್ರಿಯೆಯ ಮೂಲಕ ತಿಳಿದುಕೊಳ್ಳಿ.

ಎಸ್‌ಬಿಐ ಪಿಓ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ವೀಕ್ಷಿಸುವ ರೀತಿ:
ಹಂತ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಿ. 
ಹಂತ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಎಸ್‌ಬಿಐ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಹಂತ 3: ತಕ್ಷಣ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ರಿಜಿಸ್ಟ್ರೇಶನ್ ನಂ/ರೋಲ್ ನಂ ಮತ್ತು ಪಾಸ್‌ವರ್ಡ್ ನಮೂದಿಸಿ 
ಹಂತ 4: ಇದಾದ ಬಳಿಕ ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

SBI CBO RECRUITMENT 2022: SBI ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,960/- ರಿಂದ 63,840/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್‌ಆರ್‌ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ಪಡೆಯುತ್ತಾರೆ.

NVS Recruitment 2021: ನವೋದಯ ವಿದ್ಯಾಲಯ ಸಮಿತಿಯಲ್ಲಿ ಉದ್ಯೋಗವಕಾಶ, ಇಂದೇ ಅರ್ಜಿ

ಎಸ್‌ಬಿಐನಲ್ಲಿ ತಿಂಗಳಿಗೆ 63,840ರೂ ಸಂಬಳದ ಉದ್ಯೋಗ, ಅರ್ಹರು ಇಂದೇ ಅರ್ಜಿ ಸಲ್ಲಿಸಿ: ಭಾರತೀಯ ಸ್ಟೇಟ್ ಬ್ಯಾಂಕ್‌ ನಲ್ಲಿ (State Bank of India) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನಾಂಕವಾಗಿದೆ. ಒಟ್ಟು 1226 ಸರ್ಕಲ್ ಬೇಸ್ಡ್​ ಆಫೀಸರ್ (Circle Based Officer) ಹುದ್ದೆಗಳು ಖಾಲಿ ಇದ್ದು, ಅರ್ಹ ಪದವೀಧರರು ಇದಕ್ಕೆ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 9ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಉದ್ಯೋಗ ಪಡೆಯಲು ಇಚ್ಚಿಸುವವರು ಹೆಚ್ಚಿನ ಮಾಹಿತಿಗಾಗಿ ಎಸ್​ಬಿಐನ ಅಧಿಕೃತ ವೆಬ್​ಸೈಟ್​ sbi.co.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

click me!