ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ SBI ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 25,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.
ಬೆಂಗಳೂರು, (ಸೆ.7): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 477 ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಅರ್ಜಿ ಆಹ್ವಾನಿಸಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 25 ಸೆಪ್ಟೆಂಬರ್ 2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
undefined
ಶೈಕ್ಷಣಿಕ ವಿದ್ಯಾರ್ಹತೆ : ಹುದ್ದೆಗಳಿಗನುಸಾರ ಬಿ.ಇ,ಬಿ.ಟೆಕ್,ಪದವಿ,ಎಂ.ಎಸ್ಸಿ ಮತ್ತು ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಜಾಬ್ಸ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಯೋಮಿತಿ: ಜೂನ್ 30,2019ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಟ 30,35,38 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ ವಿವರ: ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳು ವೇತನದ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ನೋಡಿ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಹುದ್ದೆಗಳ ಬಗೆಗಿನ ಅಧಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ