ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ನೇಮಕಾತಿ: ಅರ್ಜಿ ಹಾಕಿ..!

By Suvarna News  |  First Published Oct 2, 2020, 3:18 PM IST

ಬ್ಯಾಂಕ್‌ನಲ್ಲಿ ಕೆಲಸ ಮಾಡಲು ಇಚ್ಚಿಸುವ ಹಾಗೂ ವಿದ್ಯಾರ್ಹತೆ ಹೊಂದಿರುವವರಿಗೊಂದು ಎಸ್‌ಬಿಐ ಸುವರ್ಣಾವಕಾಶವನ್ನು ನೀಡಿದೆ. 


ಬೆಂಗಳೂರು, (ಅ.02): ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಮತ್ತು ಮ್ಯಾನೇಜರ್‌ನ ಒಟ್ಟು 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ  ಇದೇ ಅಕ್ಟೋಬರ್ 8ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Tap to resize

Latest Videos

undefined

ಜಾಬ್ಸ್‌ ನೇಮಕಾತಿ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪದವಿ, ಎಂಬಿಎ-ಪಿಜಿಡಿಎಂ

ವಯೋಮಿತಿ: ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯಸ್ಸು ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ:  ಸಾಮಾನ್ಯ, ಓಬಿಸಿ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 750 ರೂಪಾಯಿ ಆನ್‌ಲೈನ್ ಮೂಲಕ ಪಾವತಿಸಬೇಕು. ಪ.ಜಾ, ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. 

ಆಯ್ಕೆ ಪ್ರಕ್ರಿಯೆ: ಅರ್ಜಿಯ ನಂತರ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಇಲ್ಲಿ ಸೆಲೆಕ್ಟ್ ಆದವರನ್ನು ಸಂದರ್ಶನ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಎಸ್‌ಬಿಐನ ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಬಹುದು.

click me!