SBI ನೇಮಕಾತಿ: ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ

By Suvarna News  |  First Published Jan 24, 2020, 3:06 PM IST

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2020ನೇ ಸಾಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ  ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಬೇಕಾದ ಮಾಹಿತಿ ಈ ಕೆಳಗಿನಂತಿದೆ.


ನವದೆಹಲಿ, (ಜ.24): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 45 ಡೆಪ್ಯುಟಿ ಮ್ಯಾನೇಜರ್  (ಕಾನೂನು)ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 12, 2020ರೊಳಗೆ ಅರ್ಜಿ ಕೋರಲಾಗಿದೆ. 

Tap to resize

Latest Videos

undefined

ಕರ್ನಾಟಕ ಅಂಚೆ ವೃತ್ತದಲ್ಲಿ ವಿವಿಧ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:  ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯಗಳಿಂದ  ಕಾನೂನು ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಕ್ಟೋಬರ್ 31,2019ಕ್ಕೆ ಅನ್ವಯವಾಗುಂವತೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. 

ವೇತನ ಶ್ರೇಣಿ: ತಿಂಗಳಿಗೆ 31,705  ರಿಂದ 45,950 ರೂ. ವೇತನವನ್ನು ನಿಗದಿಪಡಿಸಲಾಗಿದೆ.

ಗ್ರಾಮಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೇ ನೇರ ನೇಮಕಾತಿ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

ಅರ್ಜಿ ಶುಲ್ಕ: ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ ಮತ್ತು ಓಬಿಸಿ ಅಭ್ಯರ್ಥಿಗಳು 750 ರೂ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ https://sbi.co.in/ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಬೇಕು. 

 ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

click me!