ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ 4 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಾರ್ಚ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಬೆಂಗಳೂರು(ಮಾ.10): ಭಾರತೀಯ ಸ್ಟೇಟ್ ಬ್ಯಾಂಕ್ (State Bank of India) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ (Specialist Cadre Officer) ಹುದ್ದೆಗಳು ಖಾಲಿ ಇದ್ದು, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು sbi.co.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ಒಟ್ಟು 4 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳ ಮಾಹಿತಿ ಇಂತಿದೆ:
ಮುಖ್ಯ ಮಾಹಿತಿ ಅಧಿಕಾರಿ( Chief Information Officer) - 1 ಹುದ್ದೆ
ಮುಖ್ಯ ತಂತ್ರಜ್ಞಾನ ಅಧಿಕಾರಿ (Chief Technology Officer) - 1 ಹುದ್ದೆ
ಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ (Deputy Chief Technology Officer) - 1 ಹುದ್ದೆ
ಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ (Deputy Chief Technology Officer) - 1 ಹುದ್ದೆ
undefined
We are hiring for multiple positions!
Here's your chance to shine bright in your career and .
To apply, visit: https://t.co/TquwQ1IGQs pic.twitter.com/LjpaK1nJ8W
ಶೈಕ್ಷಣಿಕ ವಿದ್ಯಾರ್ಹತೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಯಾವುದೇ ಹುದ್ದೆಗೆ ಅನುಸಾರ ವಿದ್ಯಾರ್ಹತೆ ಪಡೆದಿರಬೇಕು.
ಉಪ/ಮುಖ್ಯ ಮಾಹಿತಿ ಅಧಿಕಾರಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಸಾಫ್ಟ್‌ವೇರ್ ಎಂಜಿನಿಯರಿಂಗ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾಡಿರಬೇಕು. MBA ಆಗಿದ್ದರೆ ಆದ್ಯತೆ ಇದೆ.
ಉಪ/ಮುಖ್ಯ ತಂತ್ರಜ್ಞಾನ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಸಾಫ್ಟ್‌ವೇರ್ ಎಂಜಿನಿಯರಿಂಗ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾಡಿರಬೇಕು. MBA ಆಗಿದ್ದರೆ ಆದ್ಯತೆ ಇದೆ.
KARNATAKA HIGH COURT RECRUITMENT 2022: ರಾಜ್ಯ ಹೈಕೋರ್ಟ್ ನಲ್ಲಿ ಸ್ಟೆನೋಗ್ರಾಫರ್ ಹುದ್ದೆಗೆ ನೇಮಕಾತಿ
ಅರ್ಜಿ ಶುಲ್ಕ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಮತ್ತು SC/ST/PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಹುದ್ದೆಗೆ ಅನುಸಾರವಾಗಿ ವಿಂಗಡಿಸಲಾಗಿದೆ. ಉಪ/ಮುಖ್ಯ ಮಾಹಿತಿ ಅಧಿಕಾರಿ ಹುದ್ದೆಗೆ ಗರಿಷ್ಠ 55 ವರ್ಷ ನಿಗದಿಯಾಗಿದೆ. ಉಪ/ಮುಖ್ಯ ತಂತ್ರಜ್ಞಾನ ಅಧಿಕಾರಿ ಹುದ್ದೆಗಳಿಗೆ ಗರಿಷ್ಠ 45 ವರ್ಷ ನಿಗದಿಯಾಗಿದೆ.
ಆಯ್ಕೆ ಪ್ರಕ್ರಿಯೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Kolar Anganwadi Recruitment 2022: ಕೋಲಾರ ಜಿಲ್ಲೆಯ ಅಂಗನವಾಡಿ ಹುದ್ದೆಗಳ ನೇಮಕಾತಿ