SIDBI Recruitment 2022 : ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಿಂದ ಉದ್ಯೋಗ ನೇಮಕಾತಿ

By Suvarna News  |  First Published Mar 5, 2022, 1:33 PM IST

ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ಖಾಲಿ ಇರುವ 100 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಮುಂದಾಗಿದ್ದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​​ 24 ಕೊನೆಯ ದಿನವಾಗಿದೆ. 


ಬೆಂಗಳೂರು(ಮಾ.5): ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ (Small Industries Development Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು  ಅಧಿಸೂಚನೆ ಹೊರಡಿಸಿದೆ. ಒಟ್ಟು 100 ಸಹಾಯಕ ವ್ಯವಸ್ಥಾಪಕ (Assistant Manager) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ  ಸಲ್ಲಿಕೆ ಆರಂಭವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​​ 24 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು ಬ್ಯಾಂಕ್ ನ ಅಧಿಕೃತ ವೆಬ್‌ತಾಣ www.sidbi.in ಗೆ ಭೇಟಿ ನೀಡಬಹುದು.

ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 100 ಸಹಾಯಕ ವ್ಯವಸ್ಥಾಪಕ  ಹುದ್ದೆಗಳನ್ನು ವರ್ಗಾನುಸಾರ ವಿಂಗಡಣೆ ಮಾಡಲಾಗಿದ್ದು ಮಾಹಿತಿ ಇಂತಿದೆ.
SC-16
ST-7
OBC-24
EWS-10
ಸಾಮಾನ್ಯ-43
HI-1
OC-1
VI-2
MD/ID-1

Tap to resize

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ: ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ  ಕಾನೂನು , ಇಂಜಿನಿಯರಿಂಗ್, ವಾಣಿಜ್ಯ, ಅರ್ಥಶಾಸ್ತ್ರದಲ್ಲಿ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಮಾತ್ರವಲ್ಲ ಶೇ.60ರಷ್ಟು ಅಂಕಗಳನ್ನು ಪಡೆದಿರಬೇಕು. SC/ST ಅಭ್ಯರ್ಥಿಗಳು ಶೇ.55 ಅಂಕಗಳನ್ನು ಪಡೆದಿರಬೇಕು.

ವಯೋಮಿತಿ:  ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  21 ರಿಂದ  28 ವರ್ಷದ ಒಳಗಿರಬೇಕು.

ಅರ್ಜಿ ಶುಲ್ಕ: ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ SC/ST/PwBD ಅಭ್ಯರ್ಥಿಗಳಿಗೆ 175 ರೂ ಅರ್ಜಿ ಶುಲ್ಕ ಮತ್ತು ಇತರ ಎಲ್ಲಾ ವರ್ಗದವರು 1100 ರೂ ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ: ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ: ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ  70,000 ರೂ ವೇತನ ನೀಡಲಾಗುತ್ತದೆ.

ಉದ್ಯೋಗದ ಸ್ಥಳ: ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಉದ್ಯೋಗ ನೀಡಲಾಗುತ್ತದೆ.

click me!