SBI SCO Recruitment 2022: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

By Suvarna News  |  First Published Feb 6, 2022, 3:50 PM IST

SBIನಲ್ಲಿ ಖಾಲಿ ಇರುವ 48 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ  ಹುದ್ದೆಗೆ ಅರ್ಜಿ ಸಲ್ಲಿಸಲು  ಫೆಬ್ರವರಿ 25 ಕೊನೆಯ   ದಿನಾಂಕವಾಗಿದೆ.
 


ಬೆಂಗಳೂರು(ಜ.6): ಭಾರತೀಯ ಸ್ಟೇಟ್ ಬ್ಯಾಂಕ್ (State Bank of India) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಒಟ್ಟು 48 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ (Specialist Cadre Officer) ಹುದ್ದೆಗಳು ಖಾಲಿ ಇದ್ದು,   ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು  ಫೆಬ್ರವರಿ 25 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು sbi.co.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಒಟ್ಟು 48 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳ ಮಾಹಿತಿ ಇಂತಿದೆ:
ಅಸಿಸ್ಟೆಂಟ್ ಮ್ಯಾನೇಜರ್(ನೆಟ್​​ವರ್ಕ್​​ ಸೆಕ್ಯುರಿಟಿ ಸ್ಪೆಷಲಿಸ್ಟ್​) - 15
ಅಸಿಸ್ಟೆಂಟ್ ಮ್ಯಾನೇಜರ್(ರೂಟಿಂಗ್ & ಸ್ವಿಚ್ಚಿಂಗ್) - 33
ಡೆಪ್ಯುಟಿ ಮ್ಯಾನೇಜರ್ - 7

Tap to resize

Latest Videos

undefined

ವಿದ್ಯಾರ್ಹತೆ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ  ಯಾವುದೇ ಪದವಿ ಪಡೆದಿರಬಹುದು.

ಅರ್ಜಿ ಶುಲ್ಕ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ  ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಮತ್ತು SC/ST/PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

HAL RECRUITMENT 2022: 21 ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ ಮತ್ತು ವೇತನ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ  ಅಭ್ಯರ್ಥಿಗಳ ವಯಸ್ಸು ಹುದ್ದೆಗೆ ಅನುಸಾರವಾಗಿ ಗರಿಷ್ಠ 40 ವರ್ಷ.  ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 36,000 ದಿಂದ 63,840 ರೂ ವೇತನ ನಿಗದಿಯಾಗಿದೆ.

ಆಯ್ಕೆ ಪ್ರಕ್ರಿಯೆ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್​ಲೈನ್​ ಟೆಸ್ಟ್ , ಸ್ಕ್ರೀನಿಂಗ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಮುಂಬೈನಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ.

HAL Recruitment 2022: ಜನರಲ್ ಮ್ಯಾನೇಜರ್ ಸೇರಿ 7 ಹುದ್ದೆಗಳಿಗೆ ಅರ್ಜಿ ಆಹ್ವಾನ

KCC Bank Dharwad 52 ಅಟೆಂಡರ್‌ ಹುದ್ದೆಗೆ ಅರ್ಜಿ ಆಹ್ವಾನ: ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್, ಧಾರವಾಡ (karnataka central co-operative bank ltd) ಇಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 52 ಸಿಪಾಯಿ (Attenders) ಹುದ್ದೆಗಳು ಖಾಲಿ ಇದ್ದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 19 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಬ್ಯಾಂಕ್ ನ ಅಧಿಕೃತ ವೆಬ್‌ತಾಣ https://kccbankdharwad.in/ ಗೆ ಭೆಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್, ಧಾರವಾಡ ಇಲ್ಲಿ ಖಾಲಿ ಇರುವ ಸಿಪಾಯಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣ, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ವಯೋಮಿತಿ: ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್, ಧಾರವಾಡ ಇಲ್ಲಿ ಖಾಲಿ ಇರುವ ಸಿಪಾಯಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ .
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, 
ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ: 
ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, 
ಕೆ.ಸಿ.ಸಿ ಬ್ಯಾಂಕ್ ಲಿ., ಪ್ರಧಾನ ಕಛೇರಿ, ಸುಭಾಸ ರೋಡ, ಧಾರವಾಡ – 580001

click me!