ರಾಜ್ಯದ 509 ಸೇರಿ ಒಟ್ಟು 5237 ಖಾಲಿ ಹುದ್ದೆಗಳಿಗೆ SBI ನೇಮಕಾತಿ, ಅಪ್ಲೈ ಮಾಡಿ

By Suvarna NewsFirst Published Apr 28, 2021, 6:05 PM IST
Highlights

ಸಾರ್ವಜನಿಕ ವಲಯದ ಬಹುದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2021ರ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಒಟ್ಟು 5237 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ಈ ಪೈಕಿ ರಾಜ್ಯದಲ್ಲಿಯೇ 509 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 17 ಕೊನೆಯ ದಿನವಾಗಿದೆ.

ದೇಶದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿಯಿರುವ ಸಾವಿರಾರು ಜ್ಯೂನಿಯರ್ ಅಸೋಸಿಯೇಟ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಿದೆ.

ಕಸ್ಟಮರ್ ಸಪೋರ್ಟ್ ಹಾಗೂ ಸೇಲ್ ವಿಭಾಗದಲ್ಲಿ ಖಾಲಿಯಿರುವ ಒಟ್ಟು 5237 ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳನ್ನ ಭರ್ತಿ ಮಾಡಿಕೊಳ್ಳಲು ಎಸ್‌ಬಿಐ ಮುಂದಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ sbi.co.inಗೆ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 27 ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಮೇ 17 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ.

ದಕ್ಷಿಣ ರೈಲ್ವೆಯಲ್ಲಿ 191 ಪ್ಯಾರಾ ಮೆಡಿಕಲ್ ಹುದ್ದೆ ಖಾಲಿ, ಅಪ್ಲೈ ಮಾಡಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕ ಮಾಡಿಕೊಳ್ಳುತ್ತಿರುವ 5237 ಹುದ್ದೆಗಳಲ್ಲಿ ಕರ್ನಾಟಕದಲ್ಲೇ  509 ಹುದ್ದೆಗಳಿವೆ. ಈ ಹುದ್ದೆಗಳ ಪೈಕಿ 109 ಬ್ಯಾಕ್ ಲಾಗ್ ಹುದ್ದೆಗಳಾಗಿದ್ದು, ಉಳಿದ 400 ಹುದ್ದೆಗಳಿಗೆ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ. ಕಳೆದ ವರ್ಷ ಕೂಡ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 8134 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಂಡಿತ್ತು. ಹಾಗಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ನೇಮಕಾತಿ ಸಂಖ್ಯೆ ಕ್ಷೀಣಿಸಿದೆ ಎಂದು ಹೇಳಬಹುದು.

ಅಭ್ಯರ್ಥಿಗಳು ಅವರ ರಾಜ್ಯಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. "ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕ್ಲರಿಕಲ್ ಕೇಡರ್‌ನಲ್ಲಿ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್) ಆಗಿ ನೇಮಕಗೊಳ್ಳಲು ಅರ್ಹ ಭಾರತೀಯ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಯೋಜನೆಯಡಿ ಅಭ್ಯರ್ಥಿಗಳು ಒಮ್ಮೆ ಮಾತ್ರ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು.

ಐಡಿಬಿಐ ಬ್ಯಾಂಕಿನಲ್ಲಿ ಆಫೀಸರ್ ಹುದ್ದೆ, ವಾರ್ಷಿಕ 60 ಲಕ್ಷ ರೂ.ವರೆಗೂ ಪ್ಯಾಕೇಜ್

ನಿರ್ದಿಷ್ಟ ರಾಜ್ಯದ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಆ ರಾಜ್ಯ /ಕೇಂದ್ರಾಡಳಿತ ಪ್ರದೇಶ/ ವಿಶೇಷ ಪ್ರದೇಶದ ಸ್ಥಳೀಯ ಭಾಷೆಯಲ್ಲಿ (ಓದುವುದು, ಬರೆಯುವುದು, ಮಾತನಾಡುವುದು ಮತ್ತು ಅರ್ಥಮಾಡಿಕೊಳ್ಳುವುದು) ಪ್ರವೀಣರಾಗಿರಬೇಕು" ಎಂದು ಎಸ್‌ಬಿಐ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರದ ಆಡಳಿತ ಮಂಡಳಿಯಿಂದ ಗುರುತಿಸಲ್ಪಟ್ಟ ಸಮಾನ ಅರ್ಹತೆಗಳನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಏಪ್ರಿಲ್ 1ಕ್ಕೆ ಅನ್ವಯವಾಗುವಂತೆ 28 ವರ್ಷಕ್ಕಿಂತ ಕಡಿಮೆಯಿರಬೇಕು. ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ವರ್ಷಕ್ಕಿಂತ ಹೆಚ್ಚಿರಬೇಕು. ಪ್ರಾಥಮಿಕ, ಮುಖ್ಯ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಎಸ್‌ಬಿಐ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್‌ಮೂಲಕ 100 ಅಂಕಗಳ ಪ್ರಾಥಮಿಕ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯು 1  ಗಂಟೆಯ ಅವಧಿಯದ್ದಾಗಿದ್ದು, ಇಂಗ್ಲಿಷ್ ಭಾಷೆ, ಸಂಖ್ಯಾತ್ಮಕ ಮತ್ತು ತಾರ್ಕಿಕ ಸಾಮರ್ಥ್ಯ ಎಂಬ 3 ವಿಭಾಗಗಳನ್ನು ಒಳಗೊಂಡಿರುತ್ತದೆ. ಎಸ್‌ಬಿಐ ಕ್ಲರ್ಕ್ ಪ್ರಾಥಮಿಕ ಪರೀಕ್ಷೆಯನ್ನು ಜೂನ್ 2021ರೊಳಗೆ ಹಾಗೂ ಮುಖ್ಯಪರೀಕ್ಷೆಯಮನ್ನು ಜುಲೈ31, 2021ರೊಳಗೆ ನಡೆಸುವ ಸಾಧ್ಯತೆಯಿದೆ.

ಸಾಮಾನ್ಯ / ಒಬಿಸಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಉಳಿದಂತೆ ಮೀಸಲು ವರ್ಗದ ಅಭ್ಯರ್ಥಿಗಳಿಗೆ (ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ) ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಬೇರೆ ಯಾವುದೇ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅಭ್ಯರ್ಥಿಗಳು ಜೂನಿಯರ್ ಅಸೋಸಿಯೇಟ್ಸ್‌ನ ನೇಮಕಾತಿ 2021ಗಾಗಿ ಆನ್‌ಲೈನ್‌ನಲ್ಲಿ ಎಸ್‌ಬಿಐ ಅಧಿಕೃತ ತಾಣ- https://bank.sbi/careers ಅಥವಾ https://www.sbi.co.in/careersನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ.

ಬ್ಯಾಂಕ್ ಆಫ್‌ ಬರೋಡದಲ್ಲಿ 511 ಹುದ್ದೆಗಳಿಗೆ ನೇಮಕಾತಿ, ಅಪ್ಲೈ ಮಾಡಿ

click me!