SBI Recruitment 2022: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ

By Suvarna News  |  First Published Apr 13, 2022, 12:04 PM IST

ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ 8 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ  ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಏಪ್ರಿಲ್ 28 ಅರ್ಜಿ ಸಲ್ಲಿಸಲು ಕೊನೆಯ   ದಿನಾಂಕವಾಗಿದೆ.


ಬೆಂಗಳೂರು(ಏ.13): ಭಾರತೀಯ ಸ್ಟೇಟ್ ಬ್ಯಾಂಕ್ (State Bank of India) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.   ಒಟ್ಟು 8  ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ (Specialist Cadre Officer) ಹುದ್ದೆಗಳು ಖಾಲಿ ಇದ್ದು,   ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು  ಏಪ್ರಿಲ್ 28  ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು sbi.co.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಒಟ್ಟು 8 ಹುದ್ದೆಗಳ ಮಾಹಿತಿ ಇಂತಿದೆ
ವ್ಯವಸ್ಥಾಪಕ (Manager) :2 ಹುದ್ದೆಗಳು
ಸಲಹೆಗಾರ (Advisor) : 4 ಹುದ್ದೆಗಳು
ಹಿರಿಯ ಕಾರ್ಯನಿರ್ವಾಹಕ (Senior Executive):2 ಹುದ್ದೆಗಳು

Tap to resize

Latest Videos

undefined

KPSC RDWSD RECRUITMENT 2022 ಒಟ್ಟು 136  ಕಿರಿಯ ಇಂಜಿನಿಯರ್ ಹುದ್ದೆಗೆ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ  ಯಾವುದೇ  ಹುದ್ದೆಗೆ ಅನುಸಾರ ವಿದ್ಯಾರ್ಹತೆ ಪಡೆದಿರಬೇಕು.

ಅರ್ಜಿ ಶುಲ್ಕ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ  ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಮತ್ತು SC/ST/PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ : ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ  ಅಭ್ಯರ್ಥಿಗಳ ವಯಸ್ಸು ಹುದ್ದೆಗೆ ಅನುಸಾರವಾಗಿ  ಗರಿಷ್ಠ 63 ವರ್ಷ ನಿಗದಿಯಾಗಿದೆ. ಹಿರಿಯ ಕಾರ್ಯನಿರ್ವಾಹಕ  ಹುದ್ದೆಗೆ ಗರಿಷ್ಠ 32 ವರ್ಷ ನಿಗದಿಪಡಿಲಾಗಿದೆ. 

ಆಯ್ಕೆ ಪ್ರಕ್ರಿಯೆ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು  ಶಾರ್ಟ್ ಲಿಸ್ಟ್  ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

SOUTH WESTERN RAILWAY RECRUITMENT 2022: ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ 

Bank of Baroda  ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ನೇಮಕಾತಿ: ಬ್ಯಾಂಕ್ ಆಫ್  ಬರೋಡಾ (Bank of Baroda) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 26 ಕೃಷಿ ಮಾರುಕಟ್ಟೆ ಅಧಿಕಾರಿ (Agriculture Marketing Officer  ) ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು  ಆನ್​ಲೈನ್ (Online)​ ಮೂಲಕ ಅರ್ಜಿ  ಸಲ್ಲಿಸಲು ಎಪ್ರಿಲ್ 26  ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಅಧಿಕೃತ ವೆಬ್​ಸೈಟ್​ https://www.bankofbaroda.in/ ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಬ್ಯಾಂಕ್ ಆಫ್  ಬರೋಡಾದ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ  ಕೃಷಿ/ತೋಟಗಾರಿಕೆ/ಪಶುಸಂಗೋಪನೆ/ಪಶುವೈದ್ಯಕೀಯ ವಿಜ್ಞಾನ/ ಡೈರಿ ವಿಜ್ಞಾನ/ ಮೀನುಗಾರಿಕೆ ವಿಜ್ಞಾನ/ ಮೀನುಗಾರಿಕೆ/ ಕೃಷಿಯಲ್ಲಿ ಪದವಿ. ಮಾರ್ಕೆಟಿಂಗ್ ಮತ್ತು ಸಹಕಾರ/ ಸಹಕಾರ ಮತ್ತು ಬ್ಯಾಂಕಿಂಗ್/ ಕೃಷಿ-ಅರಣ್ಯ/ಅರಣ್ಯ/ಕೃಷಿ ಜೈವಿಕ ತಂತ್ರಜ್ಞಾನ/ ಆಹಾರ ವಿಜ್ಞಾನ/ ಕೃಷಿ ವ್ಯವಹಾರ ನಿರ್ವಹಣೆ/ಆಹಾರ ತಂತ್ರಜ್ಞಾನ/ ಡೈರಿ ತಂತ್ರಜ್ಞಾನ/ ಕೃಷಿ ಇಂಜಿನಿಯರಿಂಗ್/ ರೇಷ್ಮೆ ಮತ್ತು 02 ವರ್ಷಗಳ ಪೂರ್ಣ ಸಮಯದ ಸ್ನಾತಕೋತ್ತರ ಪದವಿ ಅಥವಾ PGDM/MBA ನಲ್ಲಿ ಡಿಪ್ಲೊಮಾ ಮಾಡಿರಬೇಕು.  ಜೊತೆಗೆ 3 ವರ್ಷಗಳ ಅನುಭವ ಹೊಂದಿರಬೇಕು.

click me!