SBI Recruitment 2022: ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ಎಸ್‌ಬಿಐ ನೇಮಕಾತಿ

By Suvarna NewsFirst Published Mar 7, 2022, 10:41 PM IST
Highlights

ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ 4 ವಿವಿಧ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಮಾರ್ಚ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಬೆಂಗಳೂರು(ಮಾ.7): ಭಾರತೀಯ ಸ್ಟೇಟ್ ಬ್ಯಾಂಕ್ (State Bank of India) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಒಟ್ಟು 4  ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ (Specialist Cadre Officer) ಹುದ್ದೆಗಳು ಖಾಲಿ ಇದ್ದು,   ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು  ಫೆಬ್ರವರಿ 25 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು sbi.co.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಒಟ್ಟು 4  ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳ ಮಾಹಿತಿ ಇಂತಿದೆ:
ಮುಖ್ಯ ಮಾಹಿತಿ ಅಧಿಕಾರಿ (Chief Information Officer): 1 ಹುದ್ದೆ
ಮುಖ್ಯ ತಂತ್ರಜ್ಞಾನ ಅಧಿಕಾರಿ (Chief Technology Officer): 1 ಹುದ್ದೆ
ಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ (Deputy Chief Technology Officer): 2 ಹುದ್ದೆಗಳು
 
ಶೈಕ್ಷಣಿಕ ವಿದ್ಯಾರ್ಹತೆ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಸಾಫ್ಟ್‌ವೇರ್ ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿಬೇಕು.

ಅರ್ಜಿ ಶುಲ್ಕ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ  ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಮತ್ತು SC/ST/PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

Delhi University Khalsa College Recruitment 2022: ಬೋಧಕರ ಹುದ್ದೆಗೆ ದೆಹಲಿ ವಿವಿ ನೇಮಕಾತಿ

ವಯೋಮಿತಿ : ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ  ಅಭ್ಯರ್ಥಿಗಳ ವಯಸ್ಸು ಹುದ್ದೆಗೆ ಅನುಸಾರವಾಗಿ ವಯೋಮಿತಿ ಹೊಂದಿರಬೇಕು. ಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ ಹುದ್ದೆಗೆ  ಗರಿಷ್ಠ 45 ವರ್ಷ.   ಮಿಕ್ಕೆರಡು ಹುದ್ದೆಗಳಿಗೆ ಗರಿಷ್ಠ 55 ವರ್ಷ ವಯೋಮಿತಿ ನಿಗದಿಯಾಗಿದೆ. ಸರಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ದೊರೆಯಲಿದೆ.

ಆಯ್ಕೆ ಪ್ರಕ್ರಿಯೆ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್​ಲೈನ್​ ಟೆಸ್ಟ್ , ಸ್ಕ್ರೀನಿಂಗ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಮುಂಬೈನಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ.

FCI RECRUITMENT 2022: ಆಹಾರ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ

ಪದವೀಧರರಿಗೆ RBIನಲ್ಲಿ ಉದ್ಯೋಗವಕಾಶ: ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India -RBI)  ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.  ಒಟ್ಟು 950 ಅಸಿಸ್ಟೆಂಟ್ (Assistant)​ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು  ಫೆಬ್ರವರಿ 17ರಿಂದ  ಮಾರ್ಚ್ 8ರವರೆಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ www.rbi.org.in ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ  50% ಅಂಕಗಳೊಂದಿಗೆ ಪಾಸಾಗಿರಬೇಕು. ಮಾಜಿ ಸೈನಿಕ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವೀಧರರಾಗಿರಬೇಕು ಅಥವಾ ಸಶಸ್ತ್ರ ಪಡೆಗಳ ಮೆಟ್ರಿಕ್ಯುಲೇಷನ್ ಅಥವಾ ಅದರ ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕನಿಷ್ಠ 15 ವರ್ಷಗಳ ರಕ್ಷಣಾ ಸೇವೆಯನ್ನು ಸಲ್ಲಿಸಿರಬೇಕು.

ವಯೋಮಿತಿ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 20 ರಿಂದ 28 ವರ್ಷದೊಳಗಿನಾಗಿರಬೇಕು.

click me!