
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ಭಾರತದ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿದೆ. ಇದು ಮುಂಬೈನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿದೆ. ದೇಶಾದ್ಯಂತ 8,500 ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಸುಮಾರು 75,000 ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಸದ್ಯ ಈ ಬ್ಯಾಂಕಿನಲ್ಲಿ ಖಾಲಿ ಇರುವ 2,691 ತರಬೇತಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 305 ಹುದ್ದೆಗಳ ಭರ್ತಿಗೆ ಕರೆ ನೀಡಿದೆ. ಇದರ ಶೈಕ್ಷಣಿಕ ಅರ್ಹತೆ ಮತ್ತು ಸಂಬಳ ಎಷ್ಟು ಎಂದು ನೋಡೋಣ.
ಒಟ್ಟು ಖಾಲಿ ಹುದ್ದೆಗಳು: ದೇಶಾದ್ಯಂತ ಒಟ್ಟು 2,691 ತರಬೇತಿ ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಕರ್ನಾಟಕದಲ್ಲಿ ಮಾತ್ರ 305 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ಪಿಯುಸಿ, ಐಟಿಐ ಆದವರಿಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ಉದ್ಯೋಗಾವಕಾಶ
ವಯೋಮಿತಿ: ವಯೋಮಿತಿಗೆ ಸಂಬಂಧಿಸಿದಂತೆ, 20 ರಿಂದ 28 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದು. ಸರ್ಕಾರದ ನಿಯಮಗಳ ಪ್ರಕಾರ, ವಯಸ್ಸಿನ ಮಿತಿಯಲ್ಲಿ ಕೆಳಕಂಡ ವರ್ಗದವರಿಗೆ ಸಡಿಲಿಕೆ ಇದೆ. ಎಸ್ಸಿ ಮತ್ತು ಎಸ್ಟಿ ವರ್ಗದವರಿಗೆ 5 ವರ್ಷಗಳು ಮತ್ತು ಒಬಿಸಿ ವರ್ಗದವರಿಗೆ 3 ವರ್ಷಗಳ ಸಡಿಲಿಕೆ ಇದೆ. ಸಾಮಾನ್ಯ ವರ್ಗದ ಅಂಗವಿಕಲರಿಗೆ ವಯೋಮಿತಿಯಲ್ಲಿ 10 ವರ್ಷಗಳವರೆಗೆ ವಿನಾಯಿತಿ ನೀಡಲಾಗಿದೆ.
ತಿಂಗಳ ಸಂಬಳ : ಈ ತರಬೇತಿ ಹುದ್ದೆಗಳನ್ನು ಒಂದು ವರ್ಷದ ಒಪ್ಪಂದದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ತಿಂಗಳಿಗೆ 15,000 ರೂ. ಸಂಬಳ ನೀಡಲಾಗುವುದು.
ಅರ್ಜಿ ಶುಲ್ಕ: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕವಾಗಿ 800 ರೂ. ಪಾವತಿಸಬೇಕು. ಎಸ್ಸಿ/ಎಸ್ಟಿ ಅಭ್ಯರ್ಥಿಗಳಾಗಿದ್ದರೆ 600 ರೂ. ಪಾವತಿಸಬೇಕು. ಅಂಗವಿಕಲರಿಗೆ 400 ರೂ. ಶುಲ್ಕ ಇರುತ್ತದೆ.
RRB Recruitment 2025: 32,000 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ
ಆಯ್ಕೆ ಮಾಡುವ ವಿಧಾನ: ಆನ್‌ಲೈನ್ ಮೂಲಕ ಪರೀಕ್ಷೆ ನಡೆಯಲಿದೆ. ಸ್ಥಳೀಯ ಭಾಷೆ ತಿಳಿದಿರಬೇಕು. ಅಂದರೆ, ಯಾವ ರಾಜ್ಯದ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತೀರೋ ಆ ರಾಜ್ಯದ ಸ್ಥಳೀಯ ಭಾಷೆ ತಿಳಿದಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?: ಅರ್ಹ ಅಭ್ಯರ್ಥಿಗಳು ಭಾರತ ಸರ್ಕಾರದ ತರಬೇತಿ ತಾಣವಾದ https://nats.education.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಪರೀಕ್ಷಾ ಅಧಿಸೂಚನೆಯನ್ನು ಓದಿ ತಿಳಿದುಕೊಳ್ಳಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 5 ಅಧಿಕೃತ ವೆಬ್ ಸೈಟ್ https://www.unionbankonline.co.in/