ಬಿಜೆಪಿಗೂ ಅನರ್ಹರಿಗೂ ಸಂಬಂಧವಿಲ್ಲ: ಸವದಿ

Published : Oct 24, 2019, 10:35 AM IST
ಬಿಜೆಪಿಗೂ ಅನರ್ಹರಿಗೂ ಸಂಬಂಧವಿಲ್ಲ: ಸವದಿ

ಸಾರಾಂಶ

ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರ ಬಗ್ಗೆ ನಾವ್ಯಾಕೆ ಚಿಂತೆ ಮಾಡಬೇಕು? ಅನರ್ಹ ಶಾಸಕರ ಬಗ್ಗೆ ನಾವು ಚಿಂತೆ ಮಾಡುವ ಅವಶ್ಯಕತೆ ಇಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೊಸ ಬಾಂಬ್‌ ಸಿಡಿಸಿದ್ದಾರೆ.  

ಬೆಳಗಾವಿ(ಅ.24):  ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರ ಬಗ್ಗೆ ನಾವ್ಯಾಕೆ ಚಿಂತೆ ಮಾಡಬೇಕು? ಅನರ್ಹ ಶಾಸಕರ ಬಗ್ಗೆ ನಾವು ಚಿಂತೆ ಮಾಡುವ ಅವಶ್ಯಕತೆ ಇಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಕುರಿತು ಪ್ರತಿಕ್ರಿಯಿಸಿದ ಅವರು, ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರ ಬಗ್ಗೆ ಚಿಂತೆ ಮಾಡುವ ಅವಶ್ಯಕತೆ ಇಲ್ಲ. ಅನರ್ಹರು ಬಿಜೆಪಿಗೆ ಬರುವ ಬಗ್ಗೆ ಎಲ್ಲಿಯೂ ಹೇಳಿಲ್ಲ ಎಂದಿದ್ದಾರೆ.

ಎಂ.ಬಿ.ಪಾಟೀಲ್‌ಗೆ ತಲೆತಿರುಕ ಎಂದ ಉಪಮುಖ್ಯಮಂತ್ರಿ!

ಸ್ಪೀಕರ್‌ ಅನರ್ಹಗೊಳಿಸಿದ್ದಕ್ಕಾಗಿ, ತಮಗೆ ನ್ಯಾಯಬೇಕೆಂದು (ಕಾಂಗ್ರೆಸ್‌) ಅನರ್ಹ ಶಾಸಕರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ. ಇದು ಅವರವರ ಮಧ್ಯದ ವ್ಯಾಜ್ಯ. ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಇದಕ್ಕೆ ನಾವು ಏಕೆ ಉತ್ತರಿಸಬೇಕು. ಈ ಕ್ಷಣದವರೆಗೂ ಅನರ್ಹರಿಗೂ, ಬಿಜೆಪಿಗೂ ಸಂಬಂಧವಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಪುಸ್ತಕ ಕಳಿಸ್ತೀನಿ, ಓದಿ ಚರ್ಚಿಸಲಿ: ಸಿದ್ದುಗೆ ಸಿಟಿ ರವಿ ಸವಾಲು

PREV
click me!

Recommended Stories

ಮಾಂಸದ ಮುದ್ದೆಯಂಥಾದ ಮೃತದೇಹದ ಮುಂದೆ ಮಗನ ಕಣ್ಣೀರು, ಪಂಚಭೂತದಲ್ಲಿ ಲೀನರಾದ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ!
ಇಸ್ಲಾಂ ಧರ್ಮಕ್ಕೆ ಮತಾಂತರವಾಗಲು ಮುಸ್ಲಿಂ ವ್ಯಕ್ತಿಯ ಕಿರುಕುಳ; ವಿವಾಹಿತ ಮಹಿಳೆ ಆತ್ಮ*ಹತ್ಯೆ