‘ಬೈ ಎಲೆಕ್ಷನ್ ವೇಳೆಗೆ ಬಿಜೆಪಿಯ ಕೆಲ ಮುಖಂಡರು ಕಾಂಗ್ರೆಸ್‌ಗೆ’

Published : Oct 14, 2019, 03:39 PM ISTUpdated : Oct 14, 2019, 03:48 PM IST
‘ಬೈ ಎಲೆಕ್ಷನ್ ವೇಳೆಗೆ ಬಿಜೆಪಿಯ ಕೆಲ ಮುಖಂಡರು ಕಾಂಗ್ರೆಸ್‌ಗೆ’

ಸಾರಾಂಶ

ರಾಜ್ಯದಲ್ಲಿ ಶೀಘ್ರದಲ್ಲೇ ಉಪ ಚುನಾವಣೆ ನಡೆಯಲಿದ್ದು, ಈ ವೇಳೆ ಅನೇಕ ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. 

ಬೆಳಗಾವಿ (ಅ.14) : ಬಿಜೆಪಿಯ ಕೆಲ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಲು  ಹೈ ಕಮಾಂಡ್‌ಗೆ ಅಪ್ರೋಚ್ ಮಾಡಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 

ಬೆಳಗಾವಿಯಲ್ಲಿ ಇಂದು ಮಾತನಾಡಿದ ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ಡಿಸೆಂಬರ್ ತಿಂಗಳಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗದ ಕೆಲವರು ನಮ್ಮ ಹೈ ಕಮಾಂಡ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹೈಕಮಾಂಡ್ ಮತ್ತು ನಮ್ಮ ಜೊತೆಗೆ ಬಿಜೆಪಿಯ ಕೆಲವರು ಈಗಲೂ ಸಂಪರ್ಕದಲ್ಲಿದ್ದಾರೆ. ಆಯಾ ಕ್ಷೇತ್ರದ ಆಗುಹೋಗು ನೋಡಿ ಪಕ್ಷಕ್ಕೆ ಸೇರಿಸಿಕೊಳ್ಳುವ ಚಿಂತನೆ ನಡೆಯುತ್ತಿದೆ. ಕಾಂಗ್ರೆಸ್ ಗೆ ಬಂದವರಿಗೆ ಹೈಕಮಾಂಡ್ ಟಿಕೆಟ್ ಕೊಡಬಹುದು. ಆದಷ್ಟು ಬೇಗ ಬೈ ಎಲೆಕ್ಷನ್ ಅಭ್ಯರ್ಥಿ ಆಯ್ಕೆ ಪಟ್ಟಿ ಘೋಷಣೆ ಮಾಡಿ ಎಂದು ಹೇಳಿದ್ದೇವೆ ಎಂದರು. 

ಅಂಬಿರಾವ್ ಮುಂದೆ ನಾನು ಶೂನ್ಯವೆಂದು ಸತೀಶ್ ಜಾರಕಿಹೊಳಿ ಬೇಸರ...

ಇದೇ ವೇಳೆ ಗೋಕಾಕ್ ಬೈ ಎಲೆಕ್ಷನ್ ಬಗ್ಗೆಯೂ ಮಾತನಾಡಿದ ಸತೀಶ್ ಜಾರಕಿಹೊಳಿ, ಈಗಾಗಲೇ ಎರಡನೇ ಹಂತದ ಪ್ರಚಾರ ಆರಂಭವಾಗಿದೆ. ಸನ್ನಿವೇಶಕ್ಕೆ ತಕ್ಕಂತೆ ಗೋಕಾಕ್ ಲೂಟಿ ಮಾಡಿದರ ಕುರಿತು ಹಾಡು ಮಾಡಿದ್ದೇವೆ.  ಒಂದು ಕಡೆ ಜನ ಕಣ್ಣೀರು ಹಾಕುತ್ತಿದ್ದರೆ ಇನ್ನೊಂದು ಕಡೆ  ಹಲವು ನಗರ ಸಭೆ ಸದಸ್ಯರು, ಮುಖಂಡರು ಸೇರಿ ಲೂಟಿ ಮಾಡುತ್ತಿದ್ದಾರೆ ಎಂದು ಪ್ರಚಾರ ಸಭೆಯಲ್ಲಿ ಅಂಬಿರಾವ್ ಪಾಟೀಲ್ ಬಗ್ಗೆ ಪರೋಕ್ಷ ವಾಗ್ದಾಳಿ ನಡೆಸಿದರು. 

 ಡಿಸೆಂಬರ್ 5 ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಡಿಸೆಂಬರ್ 9 ಮತ ಎಣಿಕೆ ನಡೆಯಲಿದೆ.

PREV
click me!

Recommended Stories

ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ; ಪ್ರೌಢಶಾಲೆಗೆ ನುಗ್ಗಿ ಪ್ರಾಂಶುಪಾಲನಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು!
ಪದೇಪದೆ 'ನಮ್ಮಪ್ಪನೇ ಸಿಎಂ..' ಯತೀಂದ್ರ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರ? ಸತೀಶ್ ಜಾರಕಿಹೊಳಿ ಹೇಳಿದ್ದೇನು?