ನಗರದ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿ.ಆರ್.ರಾಜೇಶ್ ಎಂಬುವವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವು ಆರೋಪಿಯನ್ನು ಮೂರು ದಿನಗಳ ಇಡಿ ಅಧಿಕಾರಿಗಳ ವಶಕ್ಕೆ ನೀಡಿದೆ.
ಬೆಂಗಳೂರು: ನಗರದ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿ.ಆರ್.ರಾಜೇಶ್ ಎಂಬುವವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವು ಆರೋಪಿಯನ್ನು ಮೂರು ದಿನಗಳ ಇಡಿ ಅಧಿಕಾರಿಗಳ ವಶಕ್ಕೆ ನೀಡಿದೆ.
ಬಂಧಿತ ಆರೋಪಿ ರಾಜೇಶ್ 40.40 ಕೋಟಿ ರು. ನಷ್ಟು ಮೊತ್ತವನ್ನು ಬ್ಯಾಂಕ್‌ನಿಂದ ಸಾಲ ಪಡೆದುಕೊಂಡು ಮರುಪಾವತಿ ಮಾಡಿಲ್ಲ. ಒಂದು ಸಾವಿರ ಕೋಟಿ ರು.ಗಿಂತ ಹೆಚ್ಚಿನ ಮೊತ್ತ ಸಾರ್ವಜನಿಕ ಠೇವಣಿ ದುರ್ಬಳಕೆಯಾಗಿದೆ. ಇದರಲ್ಲಿ ಅತಿ ಹೆಚ್ಚು ಸಾಲ ಪಡೆದ ಪಟ್ಟಿಯಲ್ಲಿ ರಾಜೇಶ್ (Rajesh) ಮುಂಚೂಣಿಯಲ್ಲಿದ್ದಾರೆ. ತನಿಖೆ ವೇಳೆ ಈ ವಿಷಯ ಗೊತ್ತಾಗಿದ್ದರಿಂದ ಇಡಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಇಡಿ ವಿಶೇಷ ನ್ಯಾಯಾಲಯಕ್ಕೆ (Special Court) ಆರೋಪಿಯನ್ನು ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ಕೋರಲಾಯಿತು. ಇಡಿ ಅಧಿಕಾರಿಗಳು (ED Officers) ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಇಡಿ ವಶಕ್ಕೆ ನೀಡಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಗುರು ರಾಘವೇಂದ್ರ ಬ್ಯಾಂಕ್ ಕೇಸ್ ಸಿಬಿಐಗೆ ವಹಿಸಿ: ಜಿ.ಸಿ.ಚಂದ್ರಶೇಖರ್
ಇಡಿ ಅಧಿಕಾರಿಗಳು ತನಿಖೆ ನಡೆಸಿದ ವೇಳೆ ರಾಜೇಶ್ ಮತ್ತು ಆತನ ಪತ್ನಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಎಫ್‌ಐಆರ್ (FIR) ದಾಖಲಾಗಿರುವುದು ಗೊತ್ತಾಗಿದೆ. ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ (Shri Guru Ragavendra Bank) ಮಾತ್ರ ವಲ್ಲದೇ, ಇತರೆ ಸಹಕಾರಿ ಬ್ಯಾಂಕ್‌ಗಳ ಮೂಲಕ ಸಾರ್ವಜನಿಕರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಪತ್ನಿಯ ಹೆಸರಲ್ಲಿಯೂ ಸಾಲ ಪಡೆಯಲಾಗಿದೆ. ಅದನ್ನು ಸಹ ಮರುಪಾವತಿ ಮಾಡದಿರುವುದು ತನಿಖೆ ವೇಳೆ ಪತ್ತೆಯಾಗಿದೆ ಎಂದಿದ್ದಾರೆ.
Fraud Case; ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕ್ಷ ರಾಮಕೃಷ್ಣ ಬಂಧನ
ಮಾರುಕಟ್ಟೆದರಕ್ಕೆ ಅನುಗುಣವಾಗಿಲ್ಲದ ಹೆಚ್ಚಿನ ಬಡ್ಡಿದರವನ್ನು ಠೇವಣಿದಾರರಿಗೆ ನೀಡುವುದಾಗಿ ಬ್ಯಾಂಕ್ ತಿಳಿಸಿದೆ. ಈ ಮೂಲಕ ಠೇವಣಿದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ. ಬ್ಯಾಂಕ್ ಅಧಿಕಾರಿಗಳು ಕಾಲ್ಪನಿಕ ಸಾಲದ ಖಾತೆಗಳನ್ನು ಸೃಷ್ಟಿಲಾಗಿದೆ. ತನಿಖೆ ಕೈಗೊಂಡಿರುವ ಇಡಿ ಅಧಿಕಾರಿಗಳು ಈಗಾಗಲೇ 5.32 ಕೋಟಿ ರು. ಮೌಲ್ಯದ ಚರಾಸ್ತಿ ಮತ್ತು ಸ್ಥಿರಾಸ್ತಿಯನ್ನು ಜಪ್ತಿ ಮಾಡಿದ್ದಾರೆ.