ಟ್ರಾಫಿಕ್ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ ಮತ್ತೊಂದು 800 ಮೀ. ಉದ್ದದ ಮೇಲ್ಸೇತುವೆ: ತ್ವರಿತವಾಗಿ ಭೂಸ್ವಾಧೀನಕ್ಕೆ ಸೂಚನೆ

Published : Feb 04, 2026, 07:03 AM IST
Bengaluru Traffic

ಸಾರಾಂಶ

Bengaluru Flyover: ಬೆಂಗಳೂರಿನ ಹೊರ ವರ್ತುಲ ರಸ್ತೆಯ ಇಬ್ಬಲೂರು ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಹೆಚ್ಚುವರಿ ಮೇಲ್ಸೇತುವೆ ನಿರ್ಮಿಸಲು ಬಿಬಿಎಂಪಿ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ. 

ಬೆಂಗಳೂರು:  ಐಟಿ-ಬಿಟಿ ಕಂಪನಿಗಳು ಹೆಚ್ಚಾಗಿರುವ ಹೊರ ವರ್ತುಲ ರಸ್ತೆಯ ಇಬ್ಬಲೂರು ಜಂಕ್ಷನ್ ಬಳಿ ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧಪಡಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹೊರ ವರ್ತುಲ ರಸ್ತೆಯ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್. ಪುರವರೆಗಿನ ರಸ್ತೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಬಿ-ಸ್ಮೈಲ್, ಮೆಟ್ರೋ, ಪೂರ್ವ ಹಾಗೂ ದಕ್ಷಿಣ ಪಾಲಿಕೆಗಳ ಅಧಿಕಾರಿಗಳೊಡನೆ ಮಂಗಳವಾರ ಜಂಟಿ ತಪಾಸಣೆ ನಡೆಸಿ ಮಾತನಾಡಿದ ಅವರು, ಇಬ್ಬಲೂರು ಜಂಕ್ಷನ್ ಬಳಿ ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣ ಮಾಡಿದರೆ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ನೂತನ ತಂತ್ರಜ್ಞಾನ ಬಳಸಿಕೊಂಡು ಕಡಿಮೆ ಅವಧಿಯಲ್ಲಿ ಮೇಲ್ಸೇತುವೆ ನಿರ್ಮಿಸಲು ನೀಲನಕ್ಷೆ ಸಿದ್ಧಪಡಿಸುವಂತೆ ಸೂಚಿಸಿದರು.

ಸುಮಾರು 800 ಮೀಟರ್ ಉದ್ದದ ಮೇಲ್ಸೇತುವೆ ನಿರ್ಮಿಸುವ ಯೋಜನೆ

ಇಬ್ಬಲೂರು ಜಂಕ್ಷನ್ ಬಳಿ ಸುಮಾರು 800 ಮೀಟರ್ ಉದ್ದದ ಮೇಲ್ಸೇತುವೆ ನಿರ್ಮಿಸುವ ಯೋಜನೆಯ ಅಂದಾಜು ವೆಚ್ಚ, ಕಾಮಗಾರಿ ಪೂರ್ಣಗೊಳ್ಳಲು ಬೇಕಾಗುವ ಅವಧಿ ಹಾಗೂ ನಿರ್ಮಾಣ ಮಾದರಿ ಕುರಿತು ಸಮಗ್ರ ಯೋಜನೆ ರೂಪಿಸಬೇಕು. ದಕ್ಷಿಣ ನಗರ ಪಾಲಿಕೆ ಹಾಗೂ ಮೆಟ್ರೋ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ರಸ್ತೆ ಮೇಲೆ ಎತ್ತರಿಸಿದ ಪಾದಚಾರಿ ಮಾರ್ಗ ನಿರ್ಮಾಣ, ಮಳೆಗಾಲದಲ್ಲಿ ಪ್ರವಾಹ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದು ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸಬೇಕು ಎಂದು ಆಯುಕ್ತರು ನಿರ್ದೇಶನ ನೀಡಿದರು.

ಮೆಟ್ರೋ ನಿಲ್ದಾಣ ಬಳಿ ರಸ್ತೆ ಸಮತಟ್ಟು ಮಾಡಿ:

ಹೊರ ವರ್ತುಲ ರಸ್ತೆಯಲ್ಲಿನ ಮೆಟ್ರೋ ನಿಲ್ದಾಣಗಳ ಕೆಳಭಾಗದಲ್ಲಿ ರಸ್ತೆ ಸಮತಟ್ಟಾಗಿ ಇಲ್ಲದಿರುವುದನ್ನು ಗಮನಿಸಿದ ಅವರು, ಹೊರ ವರ್ತುಲ ರಸ್ತೆಯ ಎಲ್ಲ ಮೆಟ್ರೋ ನಿಲ್ದಾಣಗಳ ಕೆಳಭಾಗದಲ್ಲಿ ಪರಿಶೀಲಿಸಿ, ಸಮಸ್ಯೆ ಕಂಡುಬಂದ ಸ್ಥಳಗಳಲ್ಲಿ ಕೂಡಲೆ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹೊರ ವರ್ತುಲ ರಸ್ತೆಯಲ್ಲಿ ಪಾಲಿಕೆ ಹಾಗೂ ಸಂಚಾರ ಪೊಲೀಸ್ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಿ, ಅಗತ್ಯವಿರುವ ಕಡೆ ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಪಟ್ಟಿ ಸಲ್ಲಿಸಬೇಕು. ಜೊತೆಗೆ ಪಾದಚಾರಿ ಮೇಲ್ಸೇತುವೆಗಳ ವಿನ್ಯಾಸ ಹಾಗೂ ಅಗತ್ಯವಿರುವ ಅನುದಾನದ ಅಂದಾಜು ವಿವರಗಳನ್ನೂ ನೀಡುವಂತೆ ಆಯುಕ್ತರು ನಿರ್ದೇಶನ ನೀಡಿದರು.

ಇದನ್ನು ಓದಿ: Bengaluru: ಮಾಗಡಿ ರಸ್ತೆಯಲ್ಲಿರುವ ಟ್ರಸ್ಟ್‌ಗೆ ಸೇರಿದ 172 ಎಕರೆ ಸರ್ಕಾರದ ವಶಕ್ಕೆ

ಹೂಡಿ ವೃತ್ತದ ಬಳಿ ಮೇಲ್ಸೇತುವೆ ಕಾಮಗಾರಿ ನಿರ್ಮಾಣ ಮಾಡಲು ತ್ವರಿತವಾಗಿ ಭೂಸ್ವಾಧೀನಪಡಿಸಿಕೊಂಡು ಮೇಲ್ಸೇತುವೆ ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಆಯುಕ್ತ ಮಹೇಶ್ವರ ರಾವ್ ಸೂಚನೆ ನೀಡಿದರು.

ಇದನ್ನೂ ಓದಿ: ಸೆಮಿಕಂಡಕ್ಟರ್‌ ಯುನಿಟ್ ಸ್ಥಾಪನೆಗೆ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲೇ 94 ಎಕರೆ ಜಾಗ ಗುರುತು

PREV
Read more Articles on
click me!

Recommended Stories

ಬೆಂಗಳೂರು-ಚೆನ್ನೈ ಹೈ ಸ್ಪೀಡ್‌ ರೈಲ್‌ ಕಾರಿಡಾರ್‌: ರಾಜಧಾನಿಯ ಈ ಎರಡು ಪ್ರದೇಶಗಳಲ್ಲಿ ಅಂಡರ್‌ಗ್ರೌಂಡ್‌ ಸ್ಟೇಷನ್‌!
17 ತಿಂಗಳ ಪುಟ್ಟ ಮಗುವಿಗೆ ಮುಖ ತೋರಿಸಲು ಭಯ ಆಗ್ತಿದೆ: ನಾಯಿ ದಾಳಿಯಿಂದಾಗಿ ವಿರೂಪಗೊಂಡ ತಾಯಿಯ ನೋವಿನ ನೋಡಿ