ದೀಪಾವಳಿಗೆ 2600 KSRTC ಬಸ್ ವ್ಯವಸ್ಥೆ; ಬೆಂಗಳೂರಿನ 3 ನಿಲ್ದಾಣದಿಂದ ಕಾರ್ಯಾಚರಣೆ!

Published : Oct 31, 2026, 02:23 PM IST
KSRTC

ಸಾರಾಂಶ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ನವೆಂಬರ್ 6 ರಿಂದ ನವೆಂಬರ್ 8 ರವರೆಗೆ 2,600 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಮಾಡಿದೆ. ಚೆನ್ನೈ, ಕೊಯಮತ್ತೂರ್, ಮಧುರೈ, ತ್ರಿಶೂರ್, ಪಾಲಕ್ಕಾಡ್, ಕೋಯಿಕೋಡ್ ಹಾಗೂ ಎರ್ನಾಕುಲಂ ಮುಂತಾದ ಸ್ಥಳಗಳಿಗೆ ಶಾಂತಿನಗರ ಬಸ್ ನಿಲ್ದಾಣದಿಂದ ಪ್ರತಿಷ್ಠಿತ ಸಾರಿಗೆ ಬಸ್‌ಗಳ ಸೇವೆ ಲಭ್ಯವಿರಲಿದೆ.

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ನವೆಂಬರ್ 6 ರಿಂದ ನವೆಂಬರ್ 8 ರವರೆಗೆ 2,600 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಮಾಡಿದೆ. ಈ ಬಸ್‌ಗಳು ಪ್ರಮುಖವಾಗಿ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಟಿಟಿಎಂಸಿ ನಿಲ್ದಾಣಗಳಿಂದ ಕಾರ್ಯಾಚರಣೆ ನಡೆಸಲಿವೆ.

ಮುಂಗಡ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗಾಗಿ ಶಾಂತಿನಗರ, ವಿಜಯನಗರ, ಯಶವಂತಪುರ, ಜಯನಗರ ಟಿಟಿಎಂಸಿಗಳು, ಮಲ್ಲೇಶ್ವರಂ 18 ನೇ ಕ್ರಾಸ್, ಬಸವೇಶ್ವರ ನಗರ (ಶಾರದಾ ಕಾಲೋನಿ), ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ ಹಾಗೂ ಟಿನ್ ಫ್ಯಾಕ್ಟರಿ ಸೇರಿದಂತೆ ನಗರದ ವಿವಿಧ ನಿಲ್ದಾಣಗಳಿಂದ ಬಸ್‌ಗಳು ಹೊರಡಲಿವೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಬಸ್‌ಗಳ ಸಂಚಾರ

ವಿವಿಧ ಮಾರ್ಗಗಳ ಹಂಚಿಕೆಯಂತೆ, ಕೆಂಪೇಗೌಡ ಬಸ್ ನಿಲ್ದಾಣದಿಂದ ಮಂಗಳೂರು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಉಡುಪಿ, ಕುಂದಾಪುರ, ಶಿವಮೊಗ್ಗ, ಹಾಸನ, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ಬಳ್ಳಾರಿ, ಬೀದರ್, ರಾಯಚೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ಹಾಗೂ ತಿರುಪತಿ, ವಿಜಯವಾಡ, ಹೈದರಾಬಾದ್‌ಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.

ತಮಿಳುನಾಡು ಮತ್ತು ಕೇರಳಂ ರಾಜ್ಯಕ್ಕೂ ಹೆಚ್ಚುವರಿ ಬಸ್ ವ್ಯವಸ್ಥೆ

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿ ಮಾರ್ಗವಾಗಿ ಕಾರ್ಯಾಚರಣೆ ನಡೆಯಲಿದೆ. ಇನ್ನು ತಮಿಳುನಾಡು ಮತ್ತು ಕೇರಳ ರಾಜ್ಯಗಳತ್ತ ಪ್ರಯಾಣಿಸುವವರಿಗಾಗಿ ಚೆನ್ನೈ, ಕೊಯಮತ್ತೂರ್, ಮಧುರೈ, ತ್ರಿಶೂರ್, ಪಾಲಕ್ಕಾಡ್, ಕೋಯಿಕೋಡ್ ಹಾಗೂ ಎರ್ನಾಕುಲಂ ಮುಂತಾದ ಸ್ಥಳಗಳಿಗೆ ಶಾಂತಿನಗರ ಬಸ್ ನಿಲ್ದಾಣದಿಂದ ಪ್ರತಿಷ್ಠಿತ ಸಾರಿಗೆ ಬಸ್‌ಗಳ ಸೇವೆ ಲಭ್ಯವಿರಲಿದೆ.

PREV
Read more Articles on
click me!

Recommended Stories

HMT ಇತಿಹಾಸಕ್ಕೆ ಹೊಸ ಕಳೆ; ವಾಚ್‌ಗೆ ನಾಡಿನ ಅಸ್ಮಿತೆ 'ಗಂಡಭೇರುಂಡ'ದ ಸ್ಪರ್ಶ, ಎಚ್‌ಡಿಕೆ ಸಾಥ್!
ಕರ್ನಾಟಕ ರಾಜ್ಯೋತ್ಸವದಲ್ಲಿ ಕನ್ನಡಿಗರ ಹೃದಯ ಗೆದ್ದ ದಿನೇಶ್ ಕಾರ್ತಿಕ್ ಶುಭಾಶಯ..! RCB ಮನೆಮಗನ ಕನ್ನಡ ಪ್ರೀತಿಗೆ ಫ್ಯಾನ್ಸ್‌ ಫಿದಾ!