ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಕನಿಷ್ಠ ದರ 40ಕ್ಕೆ ಏರಿಕೆ ಸಾಧ್ಯತೆ

Kannadaprabha News   | Kannada Prabha
Published : May 28, 2025, 05:29 AM IST
CNG Auto

ಸಾರಾಂಶ

ನಗರದಲ್ಲಿ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಬುಧವಾರ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ನೇತೃತ್ವದಲ್ಲಿ ಆಟೋ ಸಂಘಟನೆಗಳ ಪ್ರತಿನಿಧಿಗಳ ಸಭೆ ನಡೆಸಲಾಗುತ್ತಿದ್ದು, ಬುಧವಾರವೇ ಆಟೋ ಪ್ರಯಾಣ ದರ ಹೆಚ್ಚಳದ ಆದೇಶ ಹೊರಬೀಳುವ ಸಾಧ್ಯತೆಗಳಿವೆ.

ಬೆಂಗಳೂರು (ಮೇ.28): ನಗರದಲ್ಲಿ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಬುಧವಾರ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ನೇತೃತ್ವದಲ್ಲಿ ಆಟೋ ಸಂಘಟನೆಗಳ ಪ್ರತಿನಿಧಿಗಳ ಸಭೆ ನಡೆಸಲಾಗುತ್ತಿದ್ದು, ಬುಧವಾರವೇ ಆಟೋ ಪ್ರಯಾಣ ದರ ಹೆಚ್ಚಳದ ಆದೇಶ ಹೊರಬೀಳುವ ಸಾಧ್ಯತೆಗಳಿವೆ. ಆಟೋ ಮೀಟರ್‌ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಆಟೋ ಚಾಲಕರು ಮತ್ತು ಮಾಲೀಕರ ಸಂಘಟನೆಗಳು ಈಗಾಗಲೇ ಹಲವು ಬಾರಿ ಸಾರಿಗೆ ಇಲಾಖೆಗೆ ಮನವಿ ಸಲ್ಲಿಸಿವೆ.

ಅದರ ಜತೆಗೆ ಕಳೆದ ಎರಡು ತಿಂಗಳ ಹಿಂದೆಯೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆದರೆ, ಸಭೆಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳದೇ ಮುಂದೂಡಲಾಗಿತ್ತು. ಅದಾದ ನಂತರವೂ ಆಟೋ ಸಂಘಟನೆಗಳು ಮತ್ತೊಮ್ಮೆ ಸಭೆ ನಡೆಸಿ ಆಟೋ ಪ್ರಯಾಣ ದರ ಹೆಚ್ಚಳದ ಆದೇಶ ಹೊರಡಿಸುವಂತೆ ಆಗ್ರಹಿಸಿದ್ದವು.

ಇದೀಗ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ನೇತೃತ್ವದಲ್ಲಿ ಬುಧವಾರ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಪ್ರಮುಖ ಆಟೋ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಆಟೋ ಪ್ರಯಾಣ ಮಿನಿಮಮ್‌ ದರ 30 ರು.ನಿಂದ 40 ರು. ಹಾಗೂ ನಂತರದ ಪ್ರತಿ ಕಿಮೀ 15 ರು.ನಿಂದ 20 ರು.ಗೆ ಹೆಚ್ಚಿಸುವಂತೆ ಆಟೋ ಸಂಘಟನೆಗಳ ಪ್ರಮುಖರು ಮನವಿ ಮಾಡುವ ಸಾಧ್ಯತೆಗಳಿವೆ.

ಆದರೆ, ದರ ಪರಿಷ್ಕರಣ ಸಮಿತಿಯು ಈಗಾಗಲೇ ಮಿನಿಮಮ್‌ ದರ 30 ರು.ನಿಂದ 35 ರು. ಹಾಗೂ ನಂತರದ ಪ್ರತಿ ಕಿಮೀ ದರವನ್ನು ಈಗಿರುವಂತೆ 15 ರು.ಗೆ ನಿಗದಿ ಮಾಡುವಂತೆ ಸಲಹೆ ನೀಡಿದೆ. ಈ ಅಭಿಪ್ರಾಯಗಳನ್ನಾಧರಿಸಿ ಚರ್ಚಿಸಿ ದರ ಪರಿಷ್ಕರಣೆ ಮಾಡಲು ಜಿಲ್ಲಾಧಿಕಾರಿಗಳು ಸಭೆ ನಡೆಸುತ್ತಿದ್ದಾರೆ.

PREV
Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!