ಬೆಂಗಳೂರಿನ ಅಶೋಕ ನಗರದಲ್ಲಿರುವ ಸೈನಿಕ ಶಾಲೆಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಬಂದಿದ್ದು, ಪೊಲೀಸರು ಪರಿಶೀಲನೆ ನಡೆಸಿ ಸುಳ್ಳು ಬೆದರಿಕೆ ಎಂದು ಖಚಿತಪಡಿಸಿದ್ದಾರೆ.
ಬೆಂಗಳೂರು (ಸೆ.18): ಸಿಲಿಕಾನ್ ಸಿಟಿ ಬೆಂಗಳೂರಿನ ಅಶೋಕ ನಗರದಲ್ಲಿರುವ ಸೈನಿಕ ಶಾಲೆಗೆ (Army School) ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಒಡ್ಡಿದ ಇಮೇಲ್ ಅನ್ನು ಶಾಲೆಯ ಜಿಮೇಲ್‌ಗೆ ಕಳಿಸಲಾಗಿದೆ. ಇ-ಮೇಲ್ ನೋಡಿ ಬೆಚ್ಚಿದ ಶಾಲಾ ಆಡಳಿತ ಮಂಡಳಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಶ್ವಾನದಳದಿಂದ ಪರಿಶೀಲನೆ ಮಾಡಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಬ್ಲಾಸ್ಟ್ ಮಾಡಿದ ಬೆನ್ನಲ್ಲಿಯೇ ಹಲವು ಬಾಂಬ್ ಇಟ್ಟಿರುವ ಬೆದರಿಕೆ ಸಂದೇಶಗಳು ಬರುತ್ತಿವೆ. ಕೆಲವು ಕಿಡಿಗೇಡಿಗಳು ನೇರವಾಗಿ ಪೊಲೀಸ್ ಠಾಣೆಗೆ ಕರೆ ಮಾಡಿ ಅಥವಾ ಇಮೇಲ್ ವಿಳಾಸಕ್ಕೆ ಮೇಲ್ ಮಾಡಿ ಬಾಂಬ್ ಇಟ್ಟಿರುವ ಬೆದರಿಕೆ ಹಾಕುತ್ತಿದ್ದಾರೆ. ಕೆಲವು ಬಾರಿ ಶಾಲೆಗಳು, ಹೋಟೆಲ್‌ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಗಳು ಬರುತ್ತಿದ್ದು, ಪೊಲೀಸರು ಹೆಚ್ಚು ಅಲರ್ಟ್ ಆಗಿದ್ದಾರೆ.
ಲೆಬನಾನ್ ಪೇಜರ್ ಬ್ಲಾಸ್ಟ್: ಭಾರತಕ್ಕೆ ವಿದೇಶಿ ಎಲೆಕ್ಟ್ರಾನಿಕ್ ವಸ್ತುಗಳಿಂದ ಆನ್‌ಲೈನ್ ಯುದ್ಧದ ಎಚ್ಚರಿಕೆ!
ಬುಧವಾರ ಆಶೋಕ ನಗರದ ಆರ್ಮಿ ಸ್ಕೂಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬಾಂಬ್ ಇಟ್ಟು ಬ್ಲಾಸ್ಟ್ ಮಾಡುವುದಾಗಿ ಇಮೇಲ್‌ನಲ್ಲಿ ಬರೆಯಲಾಗಿದೆ. ಶಾಲೆಯ ಇ ಮೇಲ್ ಖಾತೆಗೆ ಬೆದರಿಕೆ ಮೇಲ್ ಬಂದಿದ್ದು, ಇದನ್ನು ನೋಡಿದ ಬಳಿಕ ಆಶೋಕ ನಗರ ಪೊಲೀಸ್ ಠಾಣೆ ಗೆ ಮಾಹಿತಿ ನೀಡಿದ್ದಾರೆ. ಪೊಲೀಸರಿಂದ ಶಾಲೆಗೆ ತೆರಳಿ ಪರಿಶೀಲನೆ ಮಾಡಲಾಗಿದೆ. ಆದರೆ, ಪರಿಶೀಲನೆ ವೇಳೆ ಇದೊಂದು ಸುಳ್ಳು ಬೆದರಿಕೆ ಇ ಮೇಲ್ ಎಂಬುದು ಬೆಳಕಿಗೆ ಬಂದಿದೆ. ಇ ಮೇಲ್ ಬೆದರಿಕೆ ಸಂಬಂಧಿಸಿದಂತೆ ಆಶೋಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಿಜೆಪಿ ಕಚೇರಿ ಬ್ಲಾಸ್ಟ್‌ಗೆ ಸಂಚು: ಬೆಂಗಳೂರಿನಲ್ಲಿ ಇತ್ತೀಚೆಗೆ ರಾಮೇಶ್ವರಂ ಕೆಫೆಗೆ ತಿಂಡಿ ತಿನ್ನಲು ಬಂದಿದ್ದ ಉಗ್ರನೊಬ್ಬ ಬಾಂಬ್ ಇಟ್ಟು ಬ್ಲಾಸ್ಟ್ ಮಾಡಿದ್ದನು. ಆದರೆ, ಇದರಿಂದ ಐದಾರು ಜನರು ಗಾಯಗೊಂಡಿದ್ದರು. ಈ ಘಟನೆಯ ಬಳಿಕ ಇಡೀ ಬೆಂಗಳೂರು ಬೆಚ್ಚಿ ಬಿದ್ದಿತ್ತು. ಆದರೆ, ಉಗ್ರನ ಜಾಡು ಹಿಡಿದ ಎನ್‌ಐಎ ಬಾಂಬ್ ಇಟ್ಟು ಸ್ಪೋಟಿಸಿದ ಇಬ್ಬರು ಉಗ್ರರನ್ನು ಬಂಧಿಸಿ, ಉಗ್ರ ಕೃತ್ಯಗಳ ಬಗ್ಗೆ ಬಾಯಿ ಬಿಡಿಸಿದ್ದಾರೆ. ಆಗ ಉಗ್ರರು ತಾವು ಬೆಂಗಳೂರಿನ ಬಿಜೆಪಿ ಕಚೇರಿಗೂ ಬಾಂಬ್ ಇಟ್ಟು ಬ್ಲಾಸ್ಟ್ ಮಾಡುವುದಕ್ಕೆ ಸಂಚು ರೂಪಿಸಿದ್ದರು ಎಂಬ ಸ್ಫೋಟಕ ವಿಚಾರವನ್ನು ಬಾಯಿ ಬಿಟ್ಟಿದ್ದಾರೆ.
ಟಾರ್ಗೆಟ್ ತಲುಪೋ ಭರದಲ್ಲಿ ಒತ್ತಡದಿಂದ ಕೆಲಸ ಮಾಡಿ ಯುವತಿಯ ಸಾವು! ಕಂಪೆನಿ ಮಾಡಿದ್ದೇನು ನೋಡಿ..
ಕದಂಬ ಹೋಟೆಲ್‌ಗೂ ಬಾಂಬ್ ಬೆದರಿಕೆ: ಇತ್ತೀಚೆಗೆ ತುಮಕೂರು ರಸ್ತೆಯಲ್ಲಿರುವ ಕದಂಬ ಹೋಟೆಲ್‌ಗೂ ಬಾಂಬ್ ಇಟ್ಟಿದ್ದೇವೆ. ರಾಮೇಶ್ವರಂ ಕೆಫೆ ಮಾದರಿಯಲ್ಲಿಯೇ ನಿಮ್ಮ ಹೋಟೆಲ್ ಬ್ಲಾಸ್ಟ್ ಆಗಲಿದೆ ಎಂದು ಬೆದರಿಕೆಯ ಇಮೇಲ್ ಕಳಿಸಿದ್ದರು. ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಹೋಟೆಲ್ ಮಾಲೀಕರು ಮಾಹಿತಿ ನೀಡಿದ್ದರು. ಆಗಲೂ ಸ್ಥಳಕ್ಕೆ ತೆರಳಿದ್ದ ಪೊಲೀಸರು, ಹೋಟೆಲ್‌ನಲ್ಲಿದ್ದ ಎಲ್ಲ ಗ್ರಾಹಕರು ಹಾಗೂ ಸಿಬ್ಬಂದಿಯನ್ನು ತೆರವುಗೊಳಿಸಿ ಬಾಂಬ್ ಇಟ್ಟಿದ್ದಾರೆಯೇ ಎಂದು ಪರಿಶೀಲನೆ ಮಾಡಿದ್ದರು. ಆಗಲೂ ಇದು ಸುಳ್ಳು ಬಾಂಬ್ ಬೆದರಿಕೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.