ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ; ಬಿ.ದಯಾನಂದ ಸೇರಿ ಮೂವರು ಅಧಿಕಾರಿಗಳಿಗೆ ಕ್ಲೀನ್ ಚಿಟ್!

Published : Jul 14, 2026, 10:25 PM IST
Chinnaswamy Death B Dayanand

ಸಾರಾಂಶ

ಆರ್‌ಸಿಬಿ ಐಪಿಎಲ್ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಅಂದಿನ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧದ ಇಲಾಖಾ ತನಿಖೆಯನ್ನು ಕೈಬಿಟ್ಟು, ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.

ಬೆಂಗಳೂರು (ಜು.14): ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ಟ್ರೋಫಿ ವಿಜಯದ ಸಂಭ್ರಮಾಚರಣೆ ವೇಳೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಭವಿಸಿದ್ದ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರವು ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ರಿಲೀಫ್ ನೀಡಿದೆ. ಮಾಜಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಸೇರಿದಂತೆ ಮೂವರು ಅಧಿಕಾರಿಗಳ ವಿರುದ್ಧ ನಡೆಯುತ್ತಿದ್ದ ಇಲಾಖಾ ತನಿಖೆಯನ್ನು (Departmental Enquiry) ಕೈಬಿಡಲಾಗಿದ್ದು, ಅವರಿಗೆ 'ಕ್ಲೀನ್ ಚಿಟ್' ನೀಡಲಾಗಿದೆ.

ಏನಿದು ಪ್ರಕರಣ?

ಜೂನ್ 4, 2025 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ ವಿಜಯ ಸಾಧಿಸಿದ ಸಂಭ್ರಮ ಆಚರಿಸಲು ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಅಪಾರ ಜನಸ್ತೋಮ ಜಮಾಯಿಸಿತ್ತು. ಈ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು ಮತ್ತು 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ದುರಂತಕ್ಕೆ ಭದ್ರತಾ ವೈಫಲ್ಯವೇ ಕಾರಣ ಎಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದರು.

ರಿಲೀಫ್ ಪಡೆದ ಅಧಿಕಾರಿಗಳು ಯಾರು?

ಸರ್ಕಾರದ ಇತ್ತೀಚಿನ ಆದೇಶದಂತೆ ಈ ಕೆಳಗಿನ ಅಧಿಕಾರಿಗಳಿಗೆ ಆರೋಪಗಳಿಂದ ಮುಕ್ತಿ ಸಿಕ್ಕಿದೆ:

  1. ಬಿ. ದಯಾನಂದ, IPS: ಅಂದಿನ ನಗರ ಪೊಲೀಸ್ ಆಯುಕ್ತರು.
  2. ವಿಕಾಶ್ ಕುಮಾರ್ ವಿಕಾಶ್, IPS: ಅಂದಿನ ಹೆಚ್ಚುವರಿ ಪೊಲೀಸ್ ಆಯುಕ್ತರು.
  3. ಶೇಖರ್ ಟೆಕ್ಕಣ್ಣವರ್, IPS: ಅಂದಿನ ಡಿಸಿಪಿ (ಕೇಂದ್ರ ವಿಭಾಗ).

ತನಿಖೆ ಕೈಬಿಡಲು ಕಾರಣವೇನು?

ಅಮಾನತಿನ ನಂತರ ಈ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು ಮತ್ತು ಇಲಾಖಾ ತನಿಖೆಗೆ ಆದೇಶಿಸಲಾಗಿತ್ತು. ವಿಚಾರಣೆಯ ಸಂದರ್ಭದಲ್ಲಿ ಅಧಿಕಾರಿಗಳು ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿ, ಸಮರ್ಥನೆಯನ್ನು (Statement of Defence) ಸಲ್ಲಿಸಿದ್ದರು. ಈ ಹೇಳಿಕೆಗಳನ್ನು ಮತ್ತು ಆಡಳಿತ ಇಲಾಖೆಯ ಅಭಿಪ್ರಾಯವನ್ನು ಕೂಲಂಕಷವಾಗಿ ಪರಿಶೀಲಿಸಿದ ಸಕ್ಷಮ ಪ್ರಾಧಿಕಾರವು, ಅಧಿಕಾರಿಗಳ ವಿರುದ್ಧದ ತನಿಖೆಯನ್ನು ಮುಂದುವರಿಸುವ ಅಗತ್ಯವಿಲ್ಲ ಎಂದು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಜುಲೈ 14, 2026 ರಂದು ಹೊರಡಿಸಲಾದ ಸರ್ಕಾರಿ ಆದೇಶದಂತೆ ತನಿಖೆಯನ್ನು ಅಧಿಕೃತವಾಗಿ ಸ್ಥಗಿತಗೊಳಿಸಲಾಗಿದೆ.

PREV
Read more Articles on
click me!

Recommended Stories

ನಮ್ಮ ಮೆಟ್ರೋ ಸುರಕ್ಷತೆಗೆ ಬಿಗ್‌ ಪುಶ್: ₹1,274 ಕೋಟಿ ವೆಚ್ಚದಲ್ಲಿ ಎಲ್ಲಾ ನಿಲ್ದಾಣಗಳಿಗೂ ಬರಲಿವೆ ‘ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ಸ್’!
ಕರ್ನಾಟಕಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿಗೆ ಪತ್ರದ ಮೂಲಕ ಸಿಎಂ ಡಿಕೆಶಿ ಮನವಿ