Breaking 2011ರ ಬಳಿಕ ಬೆಂಗಳೂರಿನಲ್ಲಿ ದಾಖಲೆ ಮಳೆ, ಬಾಲಕ ಸೇರಿ ಇಬ್ಬರ ದುರಂತ ಅಂತ್ಯ

Published : May 19, 2025, 10:18 PM IST
Breaking 2011ರ ಬಳಿಕ ಬೆಂಗಳೂರಿನಲ್ಲಿ ದಾಖಲೆ ಮಳೆ, ಬಾಲಕ ಸೇರಿ ಇಬ್ಬರ ದುರಂತ ಅಂತ್ಯ

ಸಾರಾಂಶ

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಇದೀಗ ಬೆಂಗಳೂರು ಮಲೆಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಅಪಾರ್ಟ್‌ಮೆಂಟ್ ಬೇಸ್‌ಮೆಂಟ್‌ನಲ್ಲಿ ತುಂಬಿಕೊಂಡ ನೀರಿಗೆ 9 ವರ್ಷದ ಬಾಲಕ ಸೇರಿ ಇಬ್ಬರು ಬಲಿಯಾದ ಘಟನೆ ನಡೆದಿದೆ.

ಬೆಂಗಳೂರು(ಮೇ.19) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪೈಕಿ ಬೆಂಗಳೂರಿನಲ್ಲಿ ಸುರಿಯತ್ತಿರುವ ಮಳೆಗೆ ಅವಾಂತರಗಳು ಸೃಷ್ಟಿಯಾಗಿದೆ. 2011ರ ಬಳಿಕ ಬೆಂಗಳೂರಿನಲ್ಲಿ ಮೇ ತಿಂಗಳಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ರಸ್ತೆಗಳು ಜಲಾವೃತಗೊಂಡಿದ್ದರೆ, ಹಲವು ಪ್ರದೇಶಗಳು ಮುಳುಗಡೆಯಾಗಿದೆ. ಚರಂಡಿಗಳು ತುಂಬಿ ಹರಿಯುತ್ತಿದೆ. ಅಂಡರ್ ಪಾಸ್ ರಸ್ತೆಗಳು ತುಂಬಿ ತುಳುತ್ತಿದೆ. ಇತ್ತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರ ನಡುವೆ ಮತ್ತೊಂದು ದುರಂತ ನಡೆದಿದೆ. ಬಿಟಿಎಂ ಲೇಔಟ್‌ನ ಎರಡನೇ ಹಂತದ ಎನ್ ಎಸ್ ಪಾಳ್ಯದಲ್ಲಿ 9 ವರ್ಷದ ಬಾಲಕ ಸೇರಿದಂತೆ ಇಬ್ಬರು ಬಲಿಯಾಗಿದ್ದಾರೆ. 

ನೀರಿನಿಂದ ಹೋಯಿತು 2 ಜೀವ
ಬೆಂಗಳೂರಿನಲ್ಲಿ ಇಂದು(ಮೇ.19) ಸುರಿದ ಭಾರಿ ಮಳೆಯಿಂದ ಹಲವು ಪ್ರದೇಶಗಳು ಅಪಾರ್ಟ್‌ಮೆಂಟ್ ಬೇಸ್‌ಮೆಂಟ್ ಸೇರಿದಂತೆ, ತಗ್ಗು ಪ್ರದೇಶ ಜಲಾವೃತಗೊಂಡಿದೆ. ಇದರಂತೆ ಭಾರಿ ಮಳೆಯಿಂದ ಎನ್ ಎಸ್ ಪಾಳ್ಯದ ಮಧುವನ್ ಅಪಾರ್ಟ್ಮೆಂಟ್ ಬೇಸ್‌ಮೆಂಟ್‌ನಲ್ಲಿ ನೀರು ತುಂಬಿಕೊಂಡಿದೆ.ನೋಡ ನೋಡುತ್ತಿದ್ದಂತೆ ಮಳೆ ನೀರು ಅಪಾರ್ಟ್‌ಮೆಂಟ್‌ನ ಬೇಸ್‌ಮೆಂಟ್ ಆವರಿಸಿಕೊಂಡಿದೆ. ಬೇಸ್‌ಮೆಂಟ್‌ನಲ್ಲಿ ನೀರು ತುಂಬಿಕೊಂಡಿದ್ದ ಕಾರಣ ಅಪಾಯದ ಸಾಧ್ಯತೆ ಹೆಚ್ಚು. ಹೀಗಾಗಿ ಇತರರಿಗೆ ಸಮಸ್ಯೆಯಾಗಬಾರದು ಎಂದು 63 ವರ್ಷದ ಮನೋಹರ್ ಕಾಮತ್ ನೀರು ತೆರವುಗೊಳಿಸಲು ಮುಂದಾಗಿದ್ದಾರೆ

ವಿದ್ಯುತ್ ಶಾಕ್ ತಗುಲಿ ಸಾವು
ಮೋಟಾರು ಮೂಲಕ ನೀರು ತೆರವುಗೊಳಿಸಲು ಮನೋಹರ್ ಕಾಮತ್ ಮುಂದಾಗಿದ್ದಾರೆ. ಇದಕ್ಕಾಗಿ ಮೋಟಾರ್ ಸ್ವಿಚ್ ಆನ್ ಮಾಡಿದ್ದಾರೆ. ಆದರೆ ವಿದ್ಯುತ್ ಶಾಕ್‌ನಿಂದ ಮನೋಹರ್ ಕಾಮತ್ ಹಾಗೂ 9 ವರ್ಷದ ಬಾಲಕ ದಿನೇಶ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಮೈಕೋ ಲೇಔಟ್ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೃತದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯಕ್ಕೆ ಮಧುವನ್ ಅಪಾರ್ಟ್ಮೆಂಟ್‌ಗೆ ವಿದ್ಯುತ್ ಕಡಿತಗೊಳಿಸಲಾಗಿದೆ.
 
2011ರ ಬಳಿಕ ಬೆಂಗಳೂರಿನಲ್ಲಿ ದಾಖಲೆ ಮಳೆ
ಮೇ.18-19 ರಂದು ಬೆಂಗಳೂರು ಮಳೆಯಲ್ಲಿ ದಾಖಲೆ ಬರೆದಿದೆ. 2011ರ ಬಳಿಕ ಮೇ ತಿಂಗಳಲ್ಲಿ ಬೆಂಗಳೂರಲ್ಲಿ ಸುರಿದ 2ನೇ ಗರಿಷ್ಠ ಪ್ರಮಾಣದ ಮಳೆ ಇದಾಗಿದೆ. ಮೇ.18ರ ಬೆಳಗ್ಗೆ 8.30ರಿಂದ ಸೋಮವಾರ ಬೆಳಗ್ಗೆ 8.30ರ ವರೆಗೆ 105.5 ಎಂಎಂ ಮಳೆಯಾಗಿದೆ. ಇದು 2011ರ ಬಳಿಕ ಮೇ ತಿಂಗಳಲ್ಲಿ ಕಂಡ 2ನೇ ಅತ್ಯಧಿಕ ಮಳಯಾಗಿದೆ.2022ರ ಮೇ ತಿಂಗಳಲ್ಲಿ ಬೆಂಗಳೂರಿನಲ್ಲಿ 114.6 ಎಂಎಂ ಮಳೆ ದಾಖಲಾಗಿತ್ತು. ಇನ್ನು ಬೆಂಗಳೂರು ಇತಿಹಾಸದಲ್ಲಿ  ಮೇ ತಿಂಗಳಲ್ಲಿ ಗರಿಷ್ಠ ಮಳೆ ದಾಖಲಾದ ದಿನ 1909ರ ಮೇ.6. ಅಂದು 153.9 ಎಂಎಂ ಮಳೆ ದಾಖಲಾಗಿತ್ತು. 
 

PREV
Read more Articles on
click me!

Recommended Stories

ಬೆಂಗಳೂರಿನ ಹಲವೆಡೆ ಡಿ.6, 8ಕ್ಕೆ ಪವರ್ ಕಟ್, ಯಾವ ಏರಿಯಾದಲ್ಲಿ 8 ಗಂಟೆ ವಿದ್ಯುತ್ ಕಡಿತ?
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ