ಹೆಬ್ಬಾಳ ಫ್ಲೈಓವರ್‌ಗೆ ಮರುಜೀವ: 31 ತಿಂಗಳ ಬಳಿಕ ಸಂಚಾರಕ್ಕೆ ಮುಕ್ತ

Published : Aug 18, 2025, 10:43 AM IST
Hebbal Flyover

ಸಾರಾಂಶ

94 ಕೋಟಿ ವೆಚ್ಚದ ಈ ಯೋಜನೆಯಿಂದ ಸಂಚಾರ ದಟ್ಟಣೆ ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು: ಹೆಬ್ಬಾಳ ಫ್ಲೈಓವರ್‌ ಅತ್ಯಧಿಕ ಟ್ರಾಫಿಕ್‌ನಿಂದಲೇ ಸದಾ ಸುದ್ದಿಯಲ್ಲಿರುತ್ತದೆ. ಇದೀಗ ಈ ಭಾಗದ ಪ್ರಯಾಣಿಕರಿಗೆ ಸಂತಸದ ಸುದ್ದಿಯೊಂದು ಬಂದಿದೆ. ಕೆ.ಆರ್ ಪುರಂ ಕಡೆಯಿಂದ ಮೇಖ್ರಿ ಸರ್ಕಲ್ (KR Puram To Mekhri Circle) ಕಡೆಗೆ ನಿರ್ಮಾಣವಾಗಿರುವ ಮೇಲ್ಸೇತುವೆ ಇಂದು ಉದ್ಘಾಟನೆಯಾಲಿದೆ. ಬರೋಬ್ಬರಿ ಸುಮಾರು 31 ತಿಂಗಳಿನಿಂದ ಬಂದ್ ಆಗಿದ್ದ ಮಾರ್ಗ ಸಾರ್ವಜನಿಕರಿಗೆ ಮುಕ್ತವಾಗಲಿದೆ. 700 ಮೀಟರ್ ಉದ್ದದ ಮೇಲ್ಸೇತುವೆ ನಿರ್ಮಿಸಲು ಬಿಡಿಎ 31 ತಿಂಗಳು ತೆಗೆದುಕೊಂಡಿತ್ತು. ಒಟ್ಟು 94 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣವಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ಈ ಮೇಲ್ಸೇತುವೆಯನ್ನು ಉದ್ಘಾಟನೆ ಮಾಡಲಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸ್ಥಳೀಯ ಶಾಸಕ ಬೈರತಿ ಸುರೇಶ್ ಸೇರಿದಂತೆ ಬಿಡಿಎ ಅಧಿಕಾರಿಗಳು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಉದ್ಘಾಟನೆ ಹಿನ್ನೆಲೆ ಮೇಲ್ಸೇತುವೆಯನ್ನು ಹೂಗಳಿಂದ ಅಲಂಕರಿಸಲಾಗಿದೆ. ಡಿಕೆ ಶಿವಕುಮಾರ್ ಈ ಮೇಲ್ಸೇತುವೆ ಪರಿಶೀಲನೆ ವೇಳೆ ಸ್ಕೂಟಿ ಚಲಾಯಿಸಿದ್ದರು. ಈ ಸ್ಕೂಟಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಶೇ.30ರಷ್ಟು ಸಂಚಾರ ದಟ್ಟಣೆ ಕಡಿಮೆ ಸಾಧ್ಯತೆ!

ಈ ಹೊಸ ಫ್ಲೈವರ್ ವಿಸ್ತರಣೆಯಿಂದಾಗಿ ಶೇ.30ರಷ್ಟು ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ವಿಮಾನ ನಿಲ್ದಾಣ ಮತ್ತು ಬೆಂಗಳೂರು ನಗರದತ್ತ ಆಗಮಿಸುವ ಪ್ರಯಾಣಿಕರಿಗೆ ಈ ಮಾರ್ಗದಿಂದ ಸಾಕಷ್ಟು ಅನುಕೂಲವಾಗಲಿದೆ ಎಂದು ಅಧಿಕಾರಿಗಳಿ ಅಂದಾಜಿಸಿದ್ದಾರೆ. ಎರಡು ದಿನ ಈ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು. ಏಕಕಾಲದಲ್ಲಿ ಬೆಂಗಳೂರು ನಗರದತ್ತ ಆಗಮಿಸುವ ವಾಹನಗಳ ಸಂಖ್ಯೆ ಹೆಚ್ಚಾಗುವ ಹಿನ್ನೆಲೆ ಮೇಖ್ರಿ ಸರ್ಕಲ್ ಬಳಿ ಟ್ರಾಫಿಕ್ ದಟ್ಟಣೆ ಅಧಿಕವಾಗುತ್ತಿರೋದನ್ನು ಗುರುತಿಸಲಾಗಿದೆ.

ಎಲ್ಲಿಯವರೆಗೆ ಟ್ರಾಫಿಕ್?

ಸಾಮಾನ್ಯವಾಗಿ ಪೀಕ್‌ ಅವರ್‌ ವೇಳೆ ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆ ಮುಂಭಾಗ ಆರಂಭವಾಗುವ ಟ್ರಾಫಿಕ್ ಗುಟ್ಟಹಳ್ಳಿ ಫ್ಲೈಒವರ್‌ ವರೆಗೂ ಇರುತ್ತದೆ. ಈ ಫ್ಲೈಓವರ್ ಸಂಚಾರದಿಂದ ಮತ್ತಷ್ಟು ಟ್ರಾಫಿಕ್ ಹೆಚ್ಚಾಗೋದನ್ನು ಅಲ್ಲಗಳೆಯುವಂತಿಲ್ಲ. ಆದರೆ ಹೆಬ್ಬಾಳ ಫ್ಲೈಓವರ್ ಅಂಡರ್‌ಪಾಸ್ ಬಳಿ ಟ್ರಾಫಿಕ್ ಜಾಮ್‌ಗಳು ಉಂಟಾಗಿದ್ದು, ಆ ಪ್ರದೇಶದ ಫೀಡರ್ ರಸ್ತೆಗಳ ಮೇಲೆ ಪರಿಣಾಮ ಬೀರಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: IRCTCಯಿಂದ ಕಡಿಮೆ ಬೆಲೆಗೆ 'ಥ್ರಿಲ್ಲಿಂಗ್ ಥೈಲ್ಯಾಂಡ್' ಪ್ಯಾಕೇಜ್; ಫುಲ್ ಜಾಲಿ ಜಾಲಿ

 

 

PREV
Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ