'ನನ್ನ ಗಾಡಿನೇ ನಿಲ್ಲಿಸ್ತೀಯಾ?' ಎಂದು ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ: ಜೆಡಿಎಸ್ ನಾಯಕ ಗೊಟ್ಟಿಗೆರೆ ಮಂಜುನಾಥ್ ಬಂಧನ

Published : Aug 17, 2026, 09:34 AM IST
JDS Leader Gottigere Manjunath Arrest

ಸಾರಾಂಶ

ಬೆಂಗಳೂರಿನಲ್ಲಿ ಕರ್ತವ್ಯನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್‌ನನ್ನು ಪೊಲೀಸರು ಬಂಧಿಸಿದ್ದಾರೆ. 'ನನ್ನ ಕಾರನ್ನೇ ನಿಲ್ಲಿಸುತ್ತೀಯಾ' ಎಂದು ದರ್ಪ ತೋರಿ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಾಸಗಿ ಹೋಟೆಲ್‌ನಲ್ಲಿ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು (ಆ.17): ಬೆಂಗಳೂರಿನಲ್ಲಿ ರಾಜಕೀಯ ಪ್ರಭಾವದ ದರ್ಪ ಮೆರೆದು ಕರ್ತವ್ಯನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್ ಅಲಿಯಾಸ್ ಮಂಜಣ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಾಸಗಿ ಹೋಟೆಲ್‌ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಯ ಹಿನ್ನೆಲೆ ಏನು?

ಬೆಂಗಳೂರಿನ ಗೊಟ್ಟಿಗೆರೆ ಜಂಕ್ಷನ್‌ನಲ್ಲಿ ಹುಳಿಮಾವು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಅರುಣ್ ಕರ್ತವ್ಯದಲ್ಲಿದ್ದರು. ಈ ವೇಳೆ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಅರುಣ್ ಅವರು ಹ್ಯಾಂಡ್ ಸಿಗ್ನಲ್ (ಕೈ ಸನ್ನೆ) ಮೂಲಕ ವಾಹನಗಳನ್ನು ನಿಲ್ಲಿಸುತ್ತಿದ್ದರು. ಅದೇ ಮಾರ್ಗವಾಗಿ ಬಂದ ಜೆಡಿಎಸ್ ಮುಖಂಡ ಗೊಟ್ಟಿಗೆರೆ ಮಂಜನ ವಾಹನವನ್ನೂ ನಿಲ್ಲಿಸುವಂತೆ ಸಿಗ್ನಲ್ ನೀಡಿದ್ದಾರೆ.

'ನನ್ನ ಕಾರನ್ನೇ ನಿಲ್ಲಿಸ್ತೀಯಾ?' ಎಂದು ದರ್ಪ:

ವಾಹನ ನಿಲ್ಲಿಸಿದ್ದಕ್ಕೆ ತೀವ್ರ ರೊಚ್ಚಿಗೆದ್ದ ಗೊಟ್ಟಿಗೆರೆ ಮಂಜ, ಕಾರಿನಿಂದ ಕೆಳಗಿಳಿದು 'ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ?' ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಷ್ಟಕ್ಕೇ ನಿಲ್ಲದೆ:

ಪೊಲೀಸ್ ಸಿಬ್ಬಂದಿ ಅರುಣ್ ಅವರ ಕೊರಳಪಟ್ಟಿ (ಕಾಲರ್) ಹಿಡಿದು ಹಲ್ಲೆ ನಡೆಸಿದ್ದಾನೆ. ಟ್ರಾಫಿಕ್ ಸಿಬ್ಬಂದಿಗೆ ಕಾಲಿನಿಂದ ಒದೆಯಲು ಮುಂದಾಗಿದ್ದಾನೆ. ಈ ದೃಶ್ಯ ಕಂಡು ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಮಧ್ಯಪ್ರವೇಶಿಸಿ ಜಗಳ ಬಿಡಿಸಿ, ಪೊಲೀಸರನ್ನು ರಕ್ಷಿಸಿದ್ದಾರೆ.

ಖಾಸಗಿ ಹೋಟೆಲ್‌ನಲ್ಲಿ ಅಡಗಿದ್ದ ಆರೋಪಿ ಅರೆಸ್ಟ್:

ಘಟನೆಯ ನಂತರ ಹುಳಿಮಾವು ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಲ್ಲೆ ಆರೋಪದಡಿ ಪ್ರಕರಣ ದಾಖಲಾಗುತ್ತಿದ್ದಂತೆ ಗೊಟ್ಟಿಗೆರೆ ಮಂಜುನಾಥ್ ಪರಾರಿಯಾಗಿದ್ದನು. ತನಿಖೆ ಚುರುಕುಗೊಳಿಸಿದ ಪೊಲೀಸರು, ನಗರದ ಖಾಸಗಿ ಹೋಟೆಲ್‌ ಒಂದರಲ್ಲಿ ಅಡಗಿ ಕುಳಿತಿದ್ದ ಆರೋಪಿಯನ್ನು ನಿನ್ನೆ ರಾತ್ರಿ ಬಂಧಿಸಿ ಕರೆತಂದಿದ್ದಾರೆ.

ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಇಂಪ್ಯಾಕ್ಟ್:

ಕರ್ತವ್ಯನಿರತ ಪೊಲೀಸರ ಮೇಲೆಯೇ ರಾಜಕೀಯ ಮುಖಂಡನ ದರ್ಪ ಹಾಗೂ ಹಲ್ಲೆಯ ದೃಶ್ಯಗಳ ಕುರಿತು ಏಷ್ಯಾನೆಟ್ ಸುವರ್ಣ ನ್ಯೂಸ್ ವಿಶೇಷ ವರದಿ ಪ್ರಸಾರ ಮಾಡಿ ಬೆಳಕು ಚೆಲ್ಲಿತ್ತು. ಈ ವರದಿಯ ಬೆನ್ನಲ್ಲೇ ಎಚ್ಚೆತ್ತ ಹಿರಿಯ ಪೊಲೀಸ್ ಅಧಿಕಾರಿಗಳು ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಜೆಡಿಎಸ್ ಮುಖಂಡನನ್ನು ಕಂಬಿ ಹಿಂದೆ ತಳ್ಳಲಾಗಿದೆ.

PREV
Read more Articles on
click me!

Recommended Stories

Police: ಹಾಡು ಹಗಲೇ ಖಾಕಿ ದರ್ಪ; ಜಗಳ ಬಿಡಿಸಲು ಹೋದ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಪಿಎಸ್‌ಐ! ಅತಂತ್ರವಾದ ಸಂತ್ರಸ್ತರು!
ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು AI ತಂತ್ರಜ್ಞಾನ.. ಇದು ಗುತ್ತಿಗೆದಾರನ ಜಾತಕ ಬಯಲು ಮಾಡಿಬಿಡುತ್ತೆ, ಹುಷಾರ್!