ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹಿಂದಿ ಔಟ್, ಫಲಕಗಳಲ್ಲಿ ಕನ್ನಡ? ಚರ್ಚೆಗೆ ಕಾರಣವಾದ ವಿಡಿಯೋ

Published : Apr 14, 2025, 10:44 AM ISTUpdated : Apr 14, 2025, 11:35 AM IST
ಬೆಂಗಳೂರು ವಿಮಾನ ನಿಲ್ದಾಣದಲ್ಲಿ  ಹಿಂದಿ ಔಟ್, ಫಲಕಗಳಲ್ಲಿ ಕನ್ನಡ? ಚರ್ಚೆಗೆ ಕಾರಣವಾದ ವಿಡಿಯೋ

ಸಾರಾಂಶ

ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್ ತನ್ನ ಸೈನ್‌ಬೋರ್ಡ್‌ಗಳಿಂದ ಹಿಂದಿಯನ್ನು ತೆಗೆದುಹಾಕಿದೆ ಎನ್ನಲಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್ ತನ್ನ ಎಲ್ಲಾ ಸೈನ್‌ಬೋರ್ಡ್‌ಗಳಿಂದ ಹಿಂದಿಯನ್ನು ತೆಗೆದುಹಾಕಿದೆ. ವಿಮಾನ ನಿಲ್ದಾಣದಲ್ಲಿನ ಎಲ್ಲಾ ಮಾಹಿತಿ ಫಲಕಗಳಲ್ಲೀಗ (ಸೈನ್ ಬೋರ್ಡ್) ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಬರೆಯಲಾಗಿದೆ. ಈ ಬದಲಾವಣೆಯ ವಿಡಿಯೋ ಸಾಮಾಜಿಕ ಜಾಲತಾಣ X ನಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಇಲ್ಲಿಯವರೆಗೆ ಎರಡು ಮಿಲಿಯನ್‌ಗಿಂತಲೂ ಹೆಚ್ಚು ಜನರು ನೋಡಿದ್ದಾರೆ. ಈ ಬದಲಾವಣೆಗೆ ಜನರು ಮಿಶ್ರ ಪ್ರತಿಕ್ರಿಯೆ ನೀಡುತ್ತಿದ್ದಾರೆ. 

ಏರ್‌ಪೋರ್ಟ್‌ನಲ್ಲಿ ಹಾಕಿದ್ದ ಹಿಂದಿ ಬೋರ್ಡ್‌ಗಳನ್ನು ತೆಗೆದಿದ್ದಾರೆ ಕೆಲವರು ಈ ಕ್ರಮವನ್ನು ಶ್ಲಾಘಿಸಿದ್ದಾರೆ, ಏಕೆಂದರೆ ಇದು ಕನ್ನಡ ಭಾಷೆಯನ್ನು ಉತ್ತೇಜಿಸುತ್ತದೆ. ಆದರೆ ಹಲವರು ಇದು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತರರನ್ನು ಹೊರಗಿಟ್ಟಂತೆ ಎಂದು ಟೀಕಿಸಿದ್ದಾರೆ. ಈ ಬದಲಾವಣೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿರುವ ಬಳಕೆದಾರರೊಬ್ಬರು, "ಇಂಗ್ಲಿಷ್ ಮತ್ತು ಕನ್ನಡ ತಿಳಿದಿರುವವರು ಮಾತ್ರ ಬೆಂಗಳೂರಿಗೆ ಬರುತ್ತಾರೆ ಎಂದು ನೀವು ಭಾವಿಸುತ್ತೀರಾ? ಮೆಟ್ರೋ ಸ್ಟೇಷನ್‌ಗಳಲ್ಲಿ ಹಿಂದಿ ಇಲ್ಲದಿರುವುದು ಅರ್ಥವಾಗುವಂತಹದ್ದು, ಆದರೆ ಏರ್‌ಪೋರ್ಟ್‌ಗಳು ಮತ್ತು ರೈಲ್ವೆ ಸ್ಟೇಷನ್‌ಗಳಲ್ಲಿ ಇರಬೇಕು." ಎಂದು ಬರೆದಿದ್ದಾರೆ. 

ಮತ್ತೊಬ್ಬ ಬಳಕೆದಾರರು, "ದುಬೈನ ಕ್ರೌನ್ ಪ್ರಿನ್ಸ್ ಭಾರತಕ್ಕೆ ಗೌರವ ತೋರಿಸಲು ಹಿಂದಿಯಲ್ಲಿ ಟ್ವೀಟ್ ಮಾಡಿದರೆ, ನಮ್ಮ ಸ್ವಂತ ನಾಗರಿಕರು ಹಿಂದಿಯನ್ನು ನಿರ್ಲಕ್ಷಿಸುತ್ತಾರೆ, ಆದರೆ ಇದು ಜಗತ್ತಿನಲ್ಲಿ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಒಂದಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

40% ಕ್ಕಿಂತ ಹೆಚ್ಚು ಜನರು ಹಿಂದಿ ಮಾತನಾಡುತ್ತಾರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ ಬಗ್ಗೆ ಚರ್ಚೆ ಶುರುವಾಗಿದೆ. ಏರ್‌ಪೋರ್ಟ್‌ನಲ್ಲಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡ, ಇಂಗ್ಲಿಷ್ ಮತ್ತು ಉರ್ದು ಭಾಷೆಗಳಲ್ಲಿ ಮಾಹಿತಿ ತೋರಿಸಲಾಗುತ್ತಿತ್ತು. ಆದರೆ ಹಿಂದಿಯಲ್ಲಿ ತೋರಿಸುತ್ತಿರಲಿಲ್ಲ. 40% ಕ್ಕಿಂತ ಹೆಚ್ಚು ಜನರು ಹಿಂದಿ ಮಾತನಾಡುವ ದೇಶದಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. 

ಬೆಂಗಳೂರು ವಿಮಾನ ನಿಲ್ದಾಣದಿಂದ ಸ್ಪಷ್ಟನೆ 
ನಮ್ಮ ವಿಮಾನ ನಿಲ್ದಾಣದಲ್ಲಿ ಡಿಸ್‌ಪ್ಲೇ ಬೋರ್ಡ್ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಮೊದಲಿನಿಂದಲೂ ಫ್ಲೈಟ್‌ ಮಾಹಿತಿಯು ಕನ್ನಡ ಹಾಗೂ ಇಂಗ್ಲಿಷ್‌ ಭಾಷೆಯಲ್ಲಿ ಮಾತ್ರವೇ ಇತ್ತು, ಹಿಂದಿ ಸೈನ್‌ ಬೋರ್ಡ್‌ಗಳಲ್ಲಿ ಇದೆ, ಆದರೆ, ಫ್ಲೈಟ್‌ ಮಾಹಿತಿಗಳಲ್ಲಿ ಇರಲಿಲ್ಲ. ಹಿಂದಿಯನ್ನು ಮೊದಲಿನಿಂದಲೂ ಹಾಕಿಲ್ಲ ಎಂದು ಸ್ಪಷ್ಟನೆಯನ್ನು ನೀಡಿದೆ.

ಕನ್ನಡ ಕಡ್ಡಾಯ
ಜಿಲ್ಲೆಯ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ರೀತಿಯ ವ್ಯಾಪಾರಿ ಮಳಿಗೆಗಳು, ಸಂಘ ಸಂಸ್ಥೆಗಳು, ಖಾಸಗಿ ಶಾಲಾ ಕಾಲೇಜುಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಪ್ರಮಾಣದಲ್ಲಿ ಕನ್ನಡ ಭಾಷೆಯಲ್ಲಿ ಬರೆದಿರಬೇಕು ಎಂಬ ನಿಯಮವಿದೆ. ಕನ್ನಡ ನಾಮಫಲಕ ಅಳವಡಿಕೆಯನ್ನು ಕಾನೂನು ಬದ್ಧವಾಗಿಸಲು ಫೆ.13ರಂದು ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ 2024 ಮಂಡಿಸಿ ಅನುಮೋದನೆ ಪಡೆಯಲಾಗಿತ್ತು. ನಂತರ ತಿದ್ದುಪಡಿಗೆ ರಾಜ್ಯಪಾಲರು ಅಂಕಿತ ಹಾಕಿದ್ದರು. 

ಇದನ್ನೂ ಓದಿ: ಅನ್ನ ಕೊಡುವ ಈ ನೆಲದ ನಿಯಮ ಪಾಲಿಸಿ: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸಿಎಂ ಖಡಕ್ ಸೂಚನೆ

ತಿದ್ದುಪಡಿ ವಿಧೇಯಕದಿಂದಾಗಿ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರದಿಂದ ಅನುಮತಿ ಮತ್ತು ಮಂಜೂರಾತಿ ಪಡೆದ ವಾಣಿಜ್ಯ, ಕೈಗಾರಿಕೆ, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರ ಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಹೋಟೆಲ್‌ಗಳು ಸೇರಿದಂತೆ ಇನ್ನಿತರ ಉದ್ದಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಶೇ. 60ರಷ್ಟು ಪ್ರದರ್ಶಿಸಬೇಕು ಹಾಗೂ ನಾಮಫಲಕದ ಮೇಲ್ಬಾಗದಲ್ಲಿ ಅದನ್ನು ಅಳವಡಿಸಬೇಕಾಗುತ್ತದೆ.

ಕನ್ನಡ ಪರ ಸಂಘಟನೆಗಳ ಹೋರಾಟ
ನಾಮಫಲಕದಲ್ಲಿ ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಹೋರಾಟ ಮಾಡಿದ್ದವು. ಈ ವೇಳೆ ಹಲವು ಹೋರಾಟಗಾರರನ್ನು ‌ಬಂಧಿಸಲಾಗಿತ್ತು. ಇದೇ ಸಂದರ್ಭದಲ್ಲಿ ಕನ್ನಡ ಸಂಘಟನೆಗಳ ಒತ್ತಡಕ್ಕೆ ಮಣಿದು ಕನ್ನಡ ಕಡ್ಡಾಯ ಕಾನೂನು‌ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿ ಈ ಸಂಬಂಧ 2024ರ ಜನವರಿಯಲ್ಲೇ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿತ್ತು.

ಇದನ್ನೂ ಓದಿ: ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಮಂಡನೆ

PREV
Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!