9ನೇ ಬಾರಿ ಪ್ಲಾಸ್ಮಾ ದಾನ ಮಾಡಿ ಹಲವರ ಜೀವ ಉಳಿಸಿದ ಬೆಂಗಳೂರಿನ ವೈದ್ಯ!

By Suvarna NewsFirst Published Apr 30, 2021, 2:44 PM IST
Highlights

ಕೊರೋನಾ ಸೋಂಕಿತರ ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿ ಉತ್ತಮ ವಿಧಾನವಾಗಿದೆ. ಇದೀಗ ಬೆಂಗಳೂರು ವೈದ್ಯ 9ನೇ ಬಾರಿಗೆ ಪ್ಲಾಸ್ಮಾ ದಾನ ಮಾಡೋ ಮೂಲಕ ಹಲವರ ಜೀವ ಉಳಿಸಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ

ಬೆಂಗಳೂರು(ಏ.30): ಕೊರೋನಾ ರೋಗದಿಂದ ಸಂಪೂರ್ಣ ಗುಣಮುಖರಾಗಿರುವ ಹಾಗೂ ಉತ್ತಮ ಆರೋಗ್ಯ ಹೊಂದಿದವರಿಂದ ಪ್ಲಾಸ್ಮಾ ಸಂಗ್ರಹಿಸಿ, ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ಲಾಸ್ಮಾ ಥೆರಪಿ ಹಲವರ ಜೀವ ಉಳಿಸಿದೆ. ಇದೀಗ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ವೈದ್ಯ ಡಾ.ಶ್ರೀಕಾಂತ್ ವಿ ಇದೀಗ 9ನೇ ಬಾರಿಗೆ ಪ್ಲಾಸ್ಮಾ ದಾನ ಮಾಡೋ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಪ್ಲಾಸ್ಮಾ ದಾನ ಮಾಡಿದ ಮಂಗಳೂರು ಶಾಸಕ ಭರತ್ ಶೆಟ್ಟಿ

ಸೀನಿಯರ್ ಪ್ಲಾಸ್ಟಿಕ್ ಸರ್ಜನ್ ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಕಾಂತ್ 2020ರ ಆಗಸ್ಟ್ ತಿಂಗಳಲ್ಲಿ ಕೋವಿಡ್ ಸೋಂಕಿನಿಂದ ಚಿಕಿತ್ಸೆ ಪಡೆದಿದ್ದರು. ಗುಣಮುಖರಾದ ವೈದ್ಯ ಶ್ರೀಕಾಂತ್ ಇತರರ ಜೀವ ಉಳಿಸಲು ಪ್ಲಾಸ್ಮಾ ದಾನ ಮಾಡಿದ್ದಾರೆ. ಕಳೆದ ವರ್ಷದಿಂದ ಸತತ ಪ್ಲಾಸ್ಮಾ ದಾನ ಮಾಡುತ್ತಿರುವ ಶ್ರೀಕಾಂತ್ ಇದೀಗ 9ನೇ ಬಾರಿಗೆ ಪ್ಲಾಸ್ಮಾ ದಾನ ಮಾಡಿದ್ದಾರೆ. 

ಡಾ.ಶ್ರೀಕಾಂತ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಪ್ಲಾಸ್ಮಾ ದಾನ ಮಾಡುವ ಕುರಿತು ತಪ್ಪು ಅಭಿಪ್ರಾಯಗಳಿವೆ. ಕೊರೋನಾದಿಂದ ಗುಣಮುಖರಾಗುವ ವ್ಯಕ್ತಿ ಪ್ಲಾಸ್ಮಾ ದಾನ ಮಾಡುವುದರಿಂದ ಆರೋಗ್ಯ ಕ್ಷೀಣಿಸುತ್ತದೆ ಅನ್ನೋ ಹಲವು ಅನುಮಾನ ತಪ್ಪು ಗ್ರಹಿಗಳು ಇವೆ. ಆದರೆ ಶ್ರೀಕಾಂತ್ ಸ್ವತಃ ತಾವೇ ಪ್ಲಾಸ್ಮಾ ದಾನ ಮಾಡೋ ಮೂಲಕ ಈ ಗೊಂದಲಗಳಿಗೆ ತೆರೆ ಏಳೆಯೋ ಪ್ರಯತ್ನ ಮಾಡಿದ್ದಾರೆ.

ಗ್ರೀನ್‌ ಕಾರಿಡಾರ್‌ನಲ್ಲಿ ದೇಶದಲ್ಲೇ ಮೊದಲ ಪ್ಲಾಸ್ಮಾ ಬೆಂಗಳೂರಿಂದ ರವಾನೆ!

ಕೊರೋನಾ ವೈರಸ್‌ನಿಂದ ಗುಣಮುಖರಾದ ವ್ಯಕ್ತಿ 28 ದಿನಗಳ ಬಳಿಕ ಪ್ಲಾಸ್ಮಾ ದಾನ ಮಾಡಲು ಅರ್ಹರಾಗಿದ್ದಾರೆ  ಎಂದು ಶ್ರೀಕಾಂತ್ ಹೇಳಿದ್ದಾರೆ. ಪ್ರತಿ ಬಾರಿ ಪ್ಲಾಸ್ಮಾ ದಾನ ಮಾಡುವಾಗ 200 ml ಪ್ಲಾಸ್ಮಾ ದಾನ ಮಾಡಿದ್ದಾರೆ. 

ಪ್ಲಾಸ್ಮಾ ಥೆರಪಿ:
ಪ್ಲಾಸ್ಮಾ ಥೆರಪಿ ಅಥವಾ ಪ್ಲಾಸ್ಮಾ ಚಿಕಿತ್ಸೆಯಲ್ಲಿ ಕೊರೋನಾದಿಂದ ಸಂಪೂರ್ಣ ಗುಣಮುಖರಾಗಿರುವ ಹಾಗೂ ಆರೋಗ್ಯವಂತ ವ್ಯಕ್ತಿಯ ರಕ್ತದಿಂದ ನಿರೀನ ಅಂಶದಲ್ಲಿರುವ ಹಳದಿ ಬಣ್ಣದ ಪ್ಲಾಸ್ಮಾವನ್ನು ಪ್ರತ್ಯೇಕಿಸಲಾಗುತ್ತಿದೆ. ಬಳಿಕ ಕೊರೋನಾ ಸೋಂಕಿತ ವ್ಯಕ್ತಿಗೆ ನೀಡಲಾಗುತ್ತದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ

"

#ANCares #IndiaFightsCorona

 

click me!