ಮಗಳ ಆತ್ಮಹತ್ಯೆಯ ನೋವು ಸಹಿಸದೇ ಅಮ್ಮ ಕೂಡ ನೇಣಿಗೆ ಶರಣು, ಒಂದೇ ದಿನ ಮನೆಯಲ್ಲಿ ಎರಡು ಶವ ಕಂಡ ಗಂಡ ಶಾಕ್‌!

Published : Jul 14, 2025, 06:49 PM ISTUpdated : Jul 14, 2025, 06:53 PM IST
daughter and Mother Death in Bengaluru

ಸಾರಾಂಶ

ಬೆಂಗಳೂರಿನ ನಾಗಗೊಂಡನಹಳ್ಳಿಯಲ್ಲಿ ಆಂಧ್ರ ಮೂಲದ ಅಮ್ಮ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಬಳಿಕ ತಾಯಿ ಕೂಡ ನೇಣಿಗೆ ಶರಣಾಗಿದ್ದಾರೆ. ಈ ಘಟನೆ ವೈಟ್‌ಫೀಲ್ಡ್‌ನಲ್ಲಿ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು (ಜು.14): ರಾಜಧಾನಿ ಬೆಂಗಳೂರಿನಲ್ಲಿ ಆಂಧ್ರ ಮೂಲದ ಕುಟುಂಬದ ಅಮ್ಮ-ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೇ ದಿನ ಮನೆಯಲ್ಲಿ ಎರಡು ಶವ ಕಂಡು ಗಂಡ ಆಘಾತದಲ್ಲಿದ್ದಾರೆ. ಬೆಂಗಳೂರಿನ ವೈಟ್‌ಫೀಲ್ಡ್‌ ಸಮೀಪದ ನಾಗಗೊಂಡನಹಳ್ಳಿಯಲ್ಲಿ ಘಟನೆ ನಡೆದಿದೆ.

ಸೋಮವಾರ ಬೆಳಗ್ಗೆ ಡೆತ್‌ ನೋಟ್‌ ಬರೆದು 24 ವರ್ಷದ ಶ್ರೀಜಾ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಶ್ರೀಜಾ ರೆಡ್ಡಿ ಖಾಸಗಿ ಕಂಪನಿಯಲ್ಲಿ ಡೇಟಾ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದರುವು ಎನ್ನುವುದು ಗೊತ್ತಾಗಿದೆ. ಖಿನ್ನತೆಗೆ ಒಳಗಾಗಿ ಇಂದು ಬೆಳಗ್ಗೆ ಡೆತ್‌ ನೋಟ್‌ ಬರೆದಿಟ್ಟು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿ ಶಾಕ್‌ ಆಗಿದ್ದ ತಾಯಿ ರಚಿತಾ ರೆಡ್ಡಿ ಗಂಡನಿಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನನಗೂ ಕೂಡ ಬದುಕಲು ಇಷ್ಟವಿಲ್ಲ ಎಂದು ಹೇಳಿ ಫೋನ್‌ ಕಾಲ್‌ ಕಟ್‌ ಮಾಡಿದ್ದರು. ಬಳಿಕ 48 ವರ್ಷದ ರಕ್ಷಿತಾ ರೆಡ್ಡಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಂಧ್ರ ಮೂಲದ ಕುಟುಂಬ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದರು. ಸದ್ಯ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ವೈಟ್‌ಫೀಲ್ಡ್‌ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿಯೇ ಪ್ರಕರಣ ದಾಖಲಾಗಿದೆ.

ಮಧ್ಯಾಹ್ನ 12 ಗಂಟೆ ವೇಳೆಗೆ ಮಗಳು ಶ್ರೀಜಾ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಣೆಯಲ್ಲಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು ತಾಯಿ ರಚಿತಾ ರೆಡ್ಡಿ ನೋಡಿದ್ದರು. ರೂಮ್‌ನ ಫ್ಯಾನ್‌ಗೆ ಬಿಗಿದಿದ್ದ ನೇಣಿನ ಕುಣಿಕೆಯಿಂದ ಮಗಳು ಶ್ರೀಜಾ ರೆಡ್ಡಿಯ ದೇಹವನ್ನು ಸ್ವತಃ ತಾಯಿಯೇ ಇಳಿಸಿದ್ದಳು. ಬಳಿಕ ಅದೇ ಪ್ಯಾನಿಗೆ ನೇಣು ಬಿಗಿದುಕೊಂಡು ತಾವೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅದಕ್ಕೂ ಮುನ್ನ ಶ್ರೀಜಾರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ರಚಿತಾ ರೆಡ್ಡಿ ಪತಿಗೆ ಫೋನ್‌ ಮಾಡಿ ತಿಳಿಸಿದ್ದರು. ಪತಿ ಮನೆಗೆ ಬಂದು ನೋಡುವಷ್ಟರಲ್ಲಿ ಪತ್ನಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಚಿತಾ ರೆಡ್ಡಿಯ ಪತಿ ಕೂಡ ಸಾಫ್ಟ್‌ವೇರ್‌ ಉದ್ಯೋಗಿಯಾಗಿದ್ದಾರೆ. ತಾಯಿ ಮಗಳ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಶ್ರೀಜಾ ರೆಡ್ಡಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

PREV
Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ