ಮಾನಸಿಕ ಖಿನ್ನತೆಯಿಂದ ಜೀವ ಕಳೆದುಕೊಂಡ ತಾಯಿ, ಇಬ್ಬರು ಪುಟ್ಟ ಮಕ್ಕಳು ಅನಾಥ!

Published : Dec 01, 2025, 04:36 PM IST
bengaluru mother mental depression

ಸಾರಾಂಶ

ಗಂಡನ ಸಾವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ 31 ವರ್ಷದ ತಾಯಿ ಸೌಭಾಗ್ಯ, ನೆಲಮಂಗಲದ ಬಳಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ದುರಂತದಿಂದ ಅವರ ಇಬ್ಬರು ಮಕ್ಕಳು ಅನಾಥರಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ (ಡಿ.1): ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಬಿಟ್ಟು ಆ*ತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎರಡು ವರ್ಷದ ಹಿಂದೆ ಗಂಡನನ್ನು ಕಳೆದುಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದ 31 ವರ್ಷದ ಸೌಭಾಗ್ಯ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಇದರಿಂದಾಗಿ ಅಕೆಯ ಇಬ್ಬರು ಮಕ್ಕಳಿಗ ಅಕ್ಷರಶಃ ಅನಾಥರಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದೆ. ಕೈವಾರ ಮೂಲದ ನಿವಾಸಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ಈ ಹಿನ್ನೆಲೆ ತೋಟದಗುಡ್ಡದಹಳ್ಳಿಯ ಸಾಯಿ ರಾಮ ಲೇಔಟ್ ನಲ್ಲಿ ಸೌಭಾಗ್ಯ ಮನೆ ಬಾಡಿಗೆ ಪಡೆದುಕೊಂಡು ವಾಸವಾಗಿದ್ದರು. ಇಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿಯೇ ಅವರು ವಾಸವಿದ್ದರು. ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಮಕ್ಕಳನ್ನು ಸಾಕುತ್ತಿದ್ದರು. ದೇವಸ್ಥಾನ, ಮನೆ ಬಿಟ್ಟು ಸೌಭಾಗ್ಯ ಬೇರೆ ಕಡೆ ಎಲ್ಲೂ ಹೋಗುತ್ತಿರಲಿಲ್ಲ. ಗಂಡ ಸಾವಿನಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಸೌಭಾಗ್ಯ ಸಾವು ಕಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

PREV
Read more Articles on
click me!

Recommended Stories

Justice for Bongo: ಮಗು ಹುಟ್ಟಿದ್ದಕ್ಕೆ ಸಾಕಿ ಸಲುಹಿದ ಶ್ವಾನ ಕೊಂದ್ರಾ ಪಾಪಿಗಳು? ಸಿಲಿಕಾನ್ ಸಿಟಿಯಲ್ಲಿ 'ಬೋಂಗೋ' ಸಾವಿನ ರೋಚಕ ಕಹಾನಿ!
ಪಬ್‌ನಲ್ಲಿ ಶಾರುಖ್ ಪುತ್ರನ ದುರ್ವರ್ತನೆ ಕೇಸ್: ಆರ್ಯನ್ ಖಾನ್ ಸೇರಿ ಮೂವರ ವಿರುದ್ಧ ಹಿಂದೂ ಮುಖಂಡನಿಂದ ದೂರು