
ಬೆಂಗಳೂರು (ಆ.07): ಬೆಂಗಳೂರಿನ ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ (Purple Line) ಅಗತ್ಯ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ, ಆಗಸ್ಟ್ 9ರ ಭಾನುವಾರ ಬೆಳಿಗ್ಗೆ ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಹೊರಡಿಸಿರುವ ಮಾಧ್ಯಮ ಪ್ರಕಟಣೆಯ ಪ್ರಕಾರ, ನೇರಳೆ ಮಾರ್ಗದ ಸ್ವಾಮಿ ವಿವೇಕಾನಂದ ರಸ್ತೆ (Swami Vivekananda Road) ಮತ್ತು ಇಂದಿರಾನಗರ (Indiranagar) ಮೆಟ್ರೋ ನಿಲ್ದಾಣಗಳ ನಡುವೆ ತುರ್ತು ನಿರ್ವಹಣಾ ಕಾಮಗಾರಿಯನ್ನು (Maintenance Work) ಆಯೋಜಿಸಲಾಗಿದೆ. ಈ ಕಾರಣಕ್ಕಾಗಿ ಆಗಸ್ಟ್ 9ರ ಭಾನುವಾರ ಬೆಳಿಗ್ಗೆ 7:00 ಗಂಟೆಯಿಂದ 9:00 ಗಂಟೆಯವರೆಗೆ (ಎರಡು ಗಂಟೆಗಳ ಕಾಲ) ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಡುವೆ ಮೆಟ್ರೋ ಸೇವೆ ಲಭ್ಯವಿರುವುದಿಲ್ಲ.
ಸೇವೆ ಸ್ಥಗಿತಗೊಳ್ಳುವ ಎರಡು ಗಂಟೆಗಳ ಅವಧಿಯಲ್ಲಿ ನಗರದ ಇತರೆ ಮಾರ್ಗಗಳಲ್ಲಿ ಮೆಟ್ರೋ ರೈಲುಗಳು ಎಂದಿನಂತೆ ನಿಯಮಿತ ವೇಳಾಪಟ್ಟಿಯಂತೆ (Regular Timetable) ಸಂಚರಿಸಲಿವೆ:
ಬೆಳಿಗ್ಗೆ 9:00 ಗಂಟೆಗೆ ನಿರ್ವಹಣಾ ಕಾಮಗಾರಿ ಪೂರ್ಣಗೊಂಡ ತಕ್ಷಣ, ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಡುವಿನ ಮಾರ್ಗವೂ ಸೇರಿದಂತೆ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಪುನರಾರಂಭಗೊಳ್ಳಲಿವೆ ಎಂದು ಬಿಎಮ್‌ಆರ್‌ಸಿಎಲ್ ತಿಳಿಸಿದೆ.
ಆಗಸ್ಟ್ 9ರ ಭಾನುವಾರ ಬೆಳಿಗ್ಗೆ ಮೆಟ್ರೋದಲ್ಲಿ ಪ್ರಯಾಣಿಸಲು ಯೋಜಿಸುತ್ತಿರುವ ಪ್ರಯಾಣಿಕರು ಈ ಸಮಯದ ವ್ಯತ್ಯಾಸವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳಬೇಕಾಗಿ ಬಿಎಂಆರ್‌ಸಿಎಲ್ ಸಿಬ್ಬಂದಿ ಕೋರಿದ್ದಾರೆ.