ಬೆಂಗಳೂರಿನಲ್ಲಿ ಭಾರಿ ಮಳೆಗೆ ರಸ್ತೆಗಳು ಜಲಾವೃತ, ಗುಂಡಿ ಬಿದ್ದ ರಸ್ತೆಗಳಲ್ಲಿ ಕೆಟ್ಟು ನಿಂತ ವಾಹನ

Published : Oct 10, 2025, 10:48 PM ISTUpdated : Oct 10, 2025, 11:06 PM IST
Bengaluru Rain

ಸಾರಾಂಶ

ಬೆಂಗಳೂರಿನಲ್ಲಿ ಭಾರಿ ಮಳೆಗೆ ರಸ್ತೆಗಳು ಜಲಾವೃತ, ಗುಂಡಿ ಬಿದ್ದ ರಸ್ತೆಗಳಲ್ಲಿ ಕೆಟ್ಟು ನಿಂತ ವಾಹನ, ಸವಾರರ ಪರದಾಟ ಒಂದೆಡೆಯಾದರೆ, ಅಪಾಯದ ಪ್ರಮಾಣ ಹೆಚ್ಚಾಗಿದೆ. ಬೆಂಗಳೂರಿನ ಹಲೆವೆಡೆ ಭಾರಿ ಮಳೆಯಾಗುತ್ತಿದೆ.

ಬೆಂಗಳೂರು (ಅ.10) ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಇಂದು (ಅ.10) ಕತ್ತಲಾಗುತ್ತಿದ್ದಂತೆ ಮಳೆ ಶುರುವಾಗಿದೆ. 10 ಗಂಟೆ ಬಳಿಕ ಬೆಂಗಳೂರಿನ ಬಹುತೇಕ ಕಡೆ ಭಾರಿ ಮಳೆಯಾಗುತ್ತಿದೆ. ಹಲವು ರಸ್ತೆಗಳು ಜಲಾವೃತಗೊಂಡಿದೆ. ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ಚಾಮರಾಜಪೇಟೆ, ಕಾರ್ಪರೇಶನ್, ಲಾಲ್‌ಬಾಗ್ ಸೇರಿದಂತೆ ಬೆಂಗಳೂರಿನ ಪ್ರಮುಖ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇತ್ತ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹೊರವಲಯಗಳಲ್ಲೂ ಮಳೆಯಾಗುತ್ತಿದೆ.

ಬೆಂಗಳೂರಲ್ಲಿ ಮುಂದಿನ 3 ಗಂಟೆ ಆರೇಂಜ್ ಅಲರ್ಟ್

ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಮುಂದಿನ 3 ಗಂಟೆ ಆರೇಂಜ್ ಅಲರ್ಟ್ ನೀಡಲಾಗಿದೆ. ರಾಜ್ಯ ಹವಾಮಾನ ಇಲಾಖೆಯಿಂದ ಮಳೆಯ‌ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು , ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದಿದೆ. ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ರಸ್ತೆಗಳಲ್ಲಿ ತುಂಬಿದ ನೀರು

ಬೆಂಗಳೂರಿನ ಹೃದಯ ಭಾಗದಲ್ಲಿ ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ಗುಂಡಿ ಬಿದ್ದ ರಸ್ತೆಗಳಲ್ಲಿ ಯಾವುದು ಗುಂಡಿ, ಯಾವುದು ರಸ್ತೆ ಅನ್ನೋದೇ ತಿಳಿಯದಾಗಿದೆ. ಫುಟ್ಬಾತ್‌ಗಳ ಮೇಲೂ ನೀರು ತಂಬಿಕೊಂಡಿದೆ. ಹಲವೆಡೆ ಗುಡುಗು ಸಹಿ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಅಪಾರ ಪ್ರಮಾಣಗ ವ್ಯಾಪಾರ ವಹಿವಾಟುಗಳಿಗೂ ನಷ್ಟವಾಗಿದೆ.

ವಾಹನ ಸವಾರರ ಪರದಾಟ

ಸಂಜೆಯಾಗುತ್ತಿದ್ದಂತೆ ಬೆಂಗಳೂರಿನ ಕೆಲ ಭಾಗದಲ್ಲಿ ಮಳೆ ಆರಂಭಗೊಂಡಿತ್ತು. ಇದೀಗ ತೀವ್ರಗೊಂಡಿದೆ. ಇದರಿಂದ ವಾಹನ ಸವಾರರು ಪರಾಡಿದ್ದಾರೆ. ಟ್ರಾಫಿಕ್ ಜಾಮ್ ಸಮಸ್ಯೆಗಳು ತೀವ್ರಗೊಂಡಿದೆ. ಕಚೇರಿ ಮುಗಿಸಿ ಮನೆಗೆ ತೆರಳುತ್ತಿದ್ದ ಸವಾರರಿಗೆ ಮಳೆರಾಯನ ಆರ್ಭಟ ತೀವ್ರ ಸಮಸ್ಯೆ ತಂದಿಟ್ಟಿದೆ. ಭಾರಿ ಮಳೆಗೆ ಬೆಂಗಳೂರು ತತ್ತರಿಸಿದೆ.

ಜಲಾವೃತ ರಸ್ತೆಯಲ್ಲಿ ಕೆಟ್ಟುನಿಂತ ವಾಹನ

ಬೆಂಗಳೂರಿನ ಹೊರವಲಯದಲ್ಲಿ ಭಾರಿ ಮಳೆಯಾಗಿದೆ. ಇಂದು ಸಂಜೆಯಿಂದ ಮಳೆ ಸುರಿಯುತ್ತಿದೆ. ಪ್ರಮುಖವಾಗಿ ವರ್ತೂರು ಭಾಗದ ಜನ ಬೆಂಗಳೂರಿನ ಮೂಲಭೂತ ಸೌಕರ್ಯಗಳಿಂದ ರೋಸಿ ಹೋಗಿದ್ದಾರೆ. ಮಳೆಯಿಂದ ರಸ್ತೆಗಳು ಜಲಾವೃತಗೊಂಡಿದೆ. ಗುಂಡಿ ಬಿದ್ದ ರಸ್ತೆಗಳಲ್ಲಿ ವಾಹನ ಸವಾರರು ಅಪಾಯ ಮೈಮೇಲೆ ಎಳೆದುಕೊಂಡು ಸಾಗುತ್ತಿದ್ದಾರೆ. ಗುಂಡಿ ಕಾಣದೆ ಸಾಗುತ್ತಿದ್ದ ವಾಹನಗಳು ಜಲಾವೃತ ರಸ್ತೆಯಲ್ಲಿ ಕೆಟ್ಟು ನಿಂತಿದೆ. ಇದರಿಂದ ಟ್ರಾಫಿಕ್ ಜಾಮ್ ಸಮಸ್ಯೆ ಉದ್ಭವಿಸಿದೆ. ವರ್ತೂರಿನ ಬಳಗೆರೆ ರಸ್ತೆ ಸೇರಿದಂತೆ ಹಲೆವೆಡೆ ಈ ಅವಾಂತರ ಸೃಷ್ಟಿಯಾಗಿದೆ.

 

PREV
Read more Articles on
click me!

Recommended Stories

ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!
Justice for Bongo: ಮಗು ಹುಟ್ಟಿದ್ದಕ್ಕೆ ಸಾಕಿ ಸಲುಹಿದ ಶ್ವಾನ ಕೊಂದ್ರಾ ಪಾಪಿಗಳು? ಸಿಲಿಕಾನ್ ಸಿಟಿಯಲ್ಲಿ 'ಬೋಂಗೋ' ಸಾವಿನ ರೋಚಕ ಕಹಾನಿ!