ಬಕ್ರೀದ್ ಹಿನ್ನಲೆ, ಬೆಂಗಳೂರಿನ ಹಲವು ಕಡೆಗಳಲ್ಲಿ ಸಂಚಾರ ಮಾರ್ಪಾಡು

Published : Jun 07, 2025, 09:46 AM IST
Bengaluru Traffic

ಸಾರಾಂಶ

ಬಕ್ರೀದ್‌ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧೆಡೆ ಸಂಚಾರ ಮಾರ್ಪಾಡು ಮಾಡಲಾಗಿದೆ. ಚಾಮರಾಜಪೇಟೆ, ಪುಲಿಕೇಶಿನಗರ, ಬನ್ನೇರುಘಟ್ಟ ಮುಖ್ಯ ರಸ್ತೆ ಹಾಗೂ ಕೆ.ಜಿ.ಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳ ಮಾಹಿತಿಯನ್ನು ಈ ವರದಿಯಲ್ಲಿ ನೀಡಲಾಗಿದೆ.

ಬೆಂಗಳೂರು (ಜೂ.7): ಇಂದು ದೇಶಾದ್ಯಂತ ಬಕ್ರೀದ್‌ ಆಚರಣೆ ಮಾಡಲಾಗುತ್ತಿದೆ. ರಾಜ್ಯದಲ್ಲೂ ಇದರ ಆಚರಣೆ ಜೋರಾಗಿದ್ದು, ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಈ ನಿಟ್ಟಿನಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿದೆ. ಚಾಮರಾಜಪೇಟೆ, ಪುಲಿಕೇಶಿ ನಗರದಲ್ಲಿ ದೊಡ್ಡ ಮಟ್ಟದಲ್ಲಿ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಚಾಮರಾಜಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮೈಸೂರು ರಸ್ತೆಯ ಬಿ.ಬಿ ಜಂಕ್ಷನ್ ಹತ್ತಿರದ ಮಸೀದಿಯಲ್ಲಿ ಬಕ್ರೀದ್‌ ಆಚರಣೆ ಮಾಡಲಾಗುತ್ತದೆ., ಚಾಮರಾಜಪೇಟೆ 1ನೇ ಮುಖ್ಯ ರಸ್ತೆಯ 7ನೇ ಅಡ್ಡರಸ್ತೆ ಬಳಿಯ ಬಿಬಿಎಂಪಿ ಆಟದ ಮೈದಾನದಲ್ಲಿ ಆಚರಣೆ ನಡೆಯಲಿದೆ. ಬಕ್ರೀದ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲು ಅಪಾರ ಸಂಖ್ಯೆಯಲ್ಲಿ ಮುಸ್ಲಿಮರು ಸೇರಲಿದ್ದಾರೆ. ಈ ನಿಟ್ಟಿನಲ್ಲಿ ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಕೆಳಕಂಡಂತೆ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

ದಿನಾಂಕ 07.06.2025 ರಂದು ಬೆಳಿಗ್ಗೆ 08-00 ಗಂಟೆಯಿಂದ ಪ್ರಾರ್ಥನೆ ಮುಗಿಯುವವರೆಗೆ ನಿರ್ಬಂಧ..

1) ಮೈಸೂರು ರಸ್ತೆಯ ಟೋಲ್‌ಗೇಟ್ ಜಂಕ್ಷನ್ ನಿಂದ ಬಿಬಿ ಜಂಕ್ಷನ್ ಮೂಲಕ ಬಿಜೆಎಸ್ ಪ್ರೈಓವರ್ ಮೇಲ್ಬಾಗದಿಂದ ಟೌನ್‌ಹಾಲ್‌ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧ

ಮೈಸೂರು ಕಡೆಯಿಂದ ಟೌನ್ ಹಾಲ್ ಕಡೆಗೆ ಹೋಗುವ ವಾಹನಗಳು ಬ್ಯಾಟರಾಯನಪುರ ಸಂಚಾರ ಠಾಣಾ ಸರಹದ್ದಿನ ಕಿಮೋ ಜಂಕ್ಷನ್‌ನಲ್ಲಿ ಎಡತಿರುವು ಪಡೆದುಕೊಂಡು ವಿಜಯನಗರ ಮೂಲಕ ಸಾಗಬಹುದು

2) ಟೌನ್‌ಹಾಲ್ ಕಡೆಯಿಂದ ಮೈಸೂರು ಕಡೆಗೆ ಬಿಜಿಎಸ್ ಪ್ರೈಓವರ್ ಮೇಲ್ಬಾಗದಿಂದ ಬಿಬಿ ಜಂಕ್ಷನ್ ಮಾರ್ಗವಾಗಿ ಟೋಲ್‌ಗೇಟ್ ಜಂಕ್ಷನ್ ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧ

ಟೌನ್‌ಹಾಲ್ ಕಡೆಯಿಂದ ಮೈಸೂರು ಕಡೆಗೆ ಹೋಗುವ ವಾಹನಗಳು ಬಿಜಿಎಸ್ ಪ್ರೈಓವರ್ ಕೆಳಗಡೆ ಸರ್ವಿಸ್ ರಸ್ತೆಯನ್ನು ಬಳಸಿಕೊಂಡು ಭಾರಿ ವಾಹನಗಳು ವೆಟರ್ನರಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಗೂಡ್‌ಶೆಡ್ ರಸ್ತೆ ಮೂಲಕ ಮತ್ತು ಲಘುವಾಹನಗಳು ಸಿರಸಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಂಡು ಜೆ.ಜೆ ನಗರ-ಟ್ಯಾಂಕ್‌ ಬಂಡ್ ರಸ್ತೆ ಬಿನ್ನಿಮಿಲ್ ಜಂಕ್ಷನ್ ಹುಣಸೇಮರ ಮೂಲಕ ಸಾಗುವುದು.

3) ಬಸವನಗುಡಿ ಮತ್ತು ಚಾಮರಾಜಪೇಟೆ ಕಡೆಯಿಂದ ಮೆಜೆಸ್ಟಿಕ್ ಕಡೆಗೆ ಹೋಗುವಂತಹ ವಾಹನಗಳು ಚಾಮರಾಜಪೇಟೆ 1 ನೇ ಮುಖ್ಯರಸ್ತೆ, 5ನೇ ಅಡ್ಡ ರಸ್ತೆ ಮೂಲಕ ಮೈಸೂರು ರಸ್ತೆ, ಸಿರ್ಸಿ ಸರ್ಕಲ್, ಬಿನ್ನಿಮಿಲ್ ರಸ್ತೆಯ ಮೂಲಕ ಸಾಗುವುದು

ಪುಲುಕೇಶಿನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿ

ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮಿಲ್ಲರ್ಸ್ ರಸ್ತೆ ಬಳಿಯೂ ಆಚರಣೆ ನಡೆಯಲಿದೆ. ಖುದ್ದುಸಾಬ್ ಈದ್ಯಾ ಮೈದಾನದಲ್ಲಿ (ಓಲ್ಡ್ ಹಜ್ ಕ್ಯಾಂಪ್) ಬಕ್ರೀದ್ ಹಬ್ಬದ ಪ್ರಾರ್ಥನೆ ಆಗಲಿದೆ. ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡು.. ಇಂದು ಬೆಳಗ್ಗೆ 07.00 ಗಂಟೆಯಿಂದ ಮಧ್ಯಾಹ್ನ 12.00 ಗಂಟೆಯವರೆಗೆ ಇಲ್ಲಿ ವಾಹನ ಸಂಚಾರ ನಿರ್ಬಂಧವಿರಲಿದೆ

  1. ಮಿಲ್ಲರ್ ರಸ್ತೆ ಕಂಟೋನ್ಸೆಂಟ್ ಅಂಡರ್ ಬ್ರಿಡ್ಜ್ನಿಂದ ಹೇನ್ಸ್ ರಸ್ತೆ ಜಂಕ್ಷನ್‌ ವರೆಗೆ ಎರಡೂ ಬದಿಯ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.
  2. ಹೇನ್ಸ್ ರಸ್ತೆ ಜಂಕ್ಷನ್‌ನಿಂದ ಮಿಲ್ಲರ್ ರಸ್ತೆ ಕಂಟೋನ್ಸೆಂಟ್ ರೈಲ್ವೆ ಅಂಡರ್ ಬ್ರಿಡ್ಜ್ವರೆಗೆ ಎರಡೂ ಬದಿಯ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.
  3. ನಂದಿದುರ್ಗ ರಸ್ತೆ - ಬೆನ್ಸನ್ ಕ್ರಾಸ್ ರಸ್ತೆ ಜಂಕ್ಷನ್‌ನಿಂದ ಮಿಲ್ಲರ್ಸ್ ರಸ್ತೆ ಜಂಕ್ಷನ್‌ವರೆಗೆ (ಓಲ್ಡ್ ಹಜ್ ಕ್ಯಾಂಪ್) ಎರಡೂ ಬದಿಯ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.

ಸಂಚಾರಕ್ಕೆ ಪರ್ಯಾಯ ಮಾರ್ಗ 

1.ಮಿಲ್ಲರ್ ರಸ್ತೆ ಕಂಟೋನ್ಸೆಂಟ್ ರೈಲ್ವೆ ಅಂಡರ್ ಬ್ರಿಡ್ಜ್ ಕಡೆಯಿಂದ ಪುಲಕೇಶಿನಗರ ಕಡೆಗೆ ಸಂಚರಿಸುವ ವಾಹನ ಚಾಲಕರು/ಸವಾರರು ಮಿಲ್ಲರ್ಸ್ ರಸ್ತೆಯಲ್ಲಿ ಬಲ ತಿರುವು ಪಡೆದು ಕಂಟೋನ್ಸೆಂಟ್ ರೈಲ್ವೆ ನಿಲ್ದಾಣದ ಮುಂಭಾಗ ಕಂಟೋನ್ಸೆಂಟ್ ರಸ್ತೆಯಲ್ಲಿ ನೇರವಾಗಿ ಸಾಗಿ ಬಂಬೂಬಜಾರ್ ಜಂಕ್ಷನ್ ತಲುಪಿ ನಂತರ ನೇತಾಜಿ ರಸ್ತೆ ಮುಖಾಂತರ ಪುಲಕೇಶಿನಗರ ಕಡೆಗೆ ಸಂಚರಿಸಹುದಾಗಿರುತ್ತದೆ.

2.ಹೇನ್ಸ್ ರಸ್ತೆ ಜಂಕ್ಷನ್‌ನಿಂದ ಜಯಮಹಲ್ ರಸ್ತೆ ಕಡೆಗೆ ಸಂಚರಿಸುವ ವಾಹನ ಚಾಲಕರು/ಸವಾರರು ಹೇನ್ಸ್ ರಸ್ತೆ ಜಂಕ್ಷನ್‌ನಿಂದ ಹೇನ್ಸ್ ರಸ್ತೆಯಲ್ಲಿ ನೇರವಾಗಿ ಸಾಗಿ ಧನಕೋಟಿ ರಸ್ತೆಯಲ್ಲಿ ಬಲ ತಿರುವು ಪಡೆದು ಎ.ಎಂ ರಸ್ತೆ ಮುಖಾಂತರ ಬಂಬೂ ಬಜಾರ್ ತಲುಪಿ ಕಂಟೋನ್ಸೆಂಟ್ ರಸ್ತೆಯಲ್ಲಿ ನೇರವಾಗಿ ಸಾಗಿ ಕ್ರೀನ್ಸ್ ರಸ್ತೆ - ತಿಮ್ಮಯ್ಯ ರಸ್ತೆ ಮುಖಾಂತರ ಜಯಮಹಲ್ ರಸ್ತೆ ಕಡೆಗೆ ಸಂಚರಿಸಹುದಾಗಿರುತ್ತದೆ.

3. ನಂದಿದುರ್ಗ ರಸ್ತೆ ಕಡೆಯಿಂದ ಪುಲಕೇಶಿನಗರ ಕಡೆಗೆ ಸಂಚರಿಸುವ ವಾಹನ ಚಾಲಕರು/ಸವಾರರು ನಂದಿದುರ್ಗ ರಸ್ತೆ ಬೆನ್ಸನ್ ಕ್ರಾಸ್ ರಸ್ತೆಯಲ್ಲಿ ಎಡ ತಿರುವು ಪಡೆದು ಬೆನ್ಸನ್ ಕ್ರಾಸ್ ರಸ್ತೆಯಲ್ಲಿ ನೇರವಾಗಿ ಸಾಗಿ ಬೋರ್ ಬಂಕ್ ರಸ್ತೆಯಲ್ಲಿ ಎಡತಿರುವು ಪಡೆದು ನೇರವಾಗಿ ಸಾಗಿ ಪಾಟರಿ ಜಂಕ್ಷನ್ ತಲುಪಿ ಬಲ ತಿರುವು ಪಡೆದು ಪುಲಕೇಶಿನಗರ ಕಡೆಗೆ ಸಂಚರಿಸಹುದಾಗಿರುತ್ತದೆ.

ನಿಲುಗಡೆ ನಿಷೇಧಿತ ಸ್ಥಳಗಳು

ಕಂಟೋನ್ಸೆಂಟ್ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ, ಮಿಲ್ಲರ್ಸ್ ರಸ್ತೆ, ನಂದಿದುರ್ಗ ರಸ್ತೆ, ಹೇನ್ಸ್ ರಸ್ತೆ. ನೇತಾಜಿ ರಸ್ತೆ, ಹೆಚ್.ಎಂ.ರಸ್ತೆ, ಎಂ.ಎಂ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧ

ಬನ್ನೇರುಘಟ್ಟ ಮುಖ್ಯ ರಸ್ತೆ, ಜಂಕ್ಷನ್‌

ಬನ್ನೇರುಘಟ್ಟ ಮುಖ್ಯ ರಸ್ತೆಯ, ಜಂಕ್ಷನ್‌ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಪ್ರಾರ್ಥನೆ ಮುಗಿಯುವವರೆಗೆ ತಾತ್ಕಲಿಕವಾಗಿ ನಿರ್ಬಂಧ ಇರಲಿದೆ. ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.

ಸಂಚಾರ ನಿರ್ಬಂಧ: 

  1. ಮುಖ್ಯ ರಸ್ತೆಯಲ್ಲಿ ಸಾಗರ್ ಆಸ್ಪತ್ರೆ ಜಂಕ್ಷನ್ ನಿಂದ ಗುರಪ್ಪನಪಾಳ್ಯ ಜಂಕ್ಷನ್ ವರೆಗೆ,
  2. ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಸಾಯಿರಾಂ ಜಂಕ್ಷನ್ ನಿಂದ ಗುರಪ್ಪನಪಾಳ್ಯ ಜಂಕ್ಷನ್ ವರೆಗೆ.
  3. 39ನೇ ಕ್ರಾಸ್ ರಸ್ತೆಯಲ್ಲಿ ಗುರಪ್ಪನಪಾಳ್ಯ ಜಂಕ್ಷನ್ ನಿಂದ ರೆಡ್ಡಿ ಆಸ್ಪತ್ರೆ ಜಂಕ್ಷನ್ ವರೆಗೆ,

ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗಗಳು 

1.ಡೈರಿ ಸರ್ಕಲ್ ನಿಂದ ಬರುವ ವಾಹನಗಳು ಸಾಗರ್ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ತಿಲಕ ನಗರ ಮುಖ್ಯ ರಸ್ತೆಯಲ್ಲಿ ಚಲಿಸಿ ಸ್ವಾಗತ್ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು, ಈಸ್ಟ್ ಎಂಡ್ ಮುಖ್ಯ ರಸ್ತೆಯಲ್ಲಿ ಚಲಿಸಿ. ಈಸ್ಟ್ ಎಂಡ್ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು ಜಯದೇವಾ "ಯು" ಟರ್ನ ಜಂಕ್ಷನ್‌ನಲ್ಲಿ "ಯು" ತಿರುವು ಪಡೆದು ಹೊರ ರಿಂಗ್ ರಸ್ತೆಯಲ್ಲಿ ಚಲಿಸಿ ಜಯದೇವಾ ಜಂಕ್ಷನ್‌ ಸರ್ವಿಸ್ ರಸ್ತೆಯಲ್ಲಿ ಮುಕ್ತ ಎಡ ತಿರುವು ಪಡೆದು ಬನ್ನೇರುಘಟ್ಟ ಮುಖ್ಯ ರಸ್ತೆಗೆ ಸಂಪರ್ಕ ಪಡೆದು ಸಂಚರಿಸಬಹುದಾಗಿದೆ.

2.ಬನ್ನೇರುಘಟ್ಟ ಮುಖ್ಯ ರಸ್ತೆ, ಜಿ ಡಿ ಮರ ಜಂಕ್ಷನ್ ( ನೆಕ್ಸಸ್ ವೆಗಾ ಸಿಟಿ ಮಾಲ್ ಜಂಕ್ಷನ್) ಕಡೆಯಿಂದ ಡೈರಿ ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಸಾಯಿ ರಾಂ ಜಂಕ್ಷನ ಸರ್ವಿಸ್ ರಸ್ತೆಯಲ್ಲಿ ಮುಕ್ತ ಎಡ ತಿರುವು ಪಡೆದು ಜಯದೇವಾ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು. ಈಸ್ಟ್ ಎಂಡ್ ಜಂಕ್ಷನ್ ನಲ್ಲಿ ಬಲಕ್ಕೆ ತಿರುವು ಪಡೆದು, ಈಸ್ಟ್ ಮುಖ್ಯ ರಸ್ತೆಯ ಮುಖಾಂತರ ಸ್ವಾಗತ್ ಜಂಕ್ಷನ್ ತಲುಪಿ ಬಲ ತಿರುವು ಪಡೆದು, ಸಾಗರ್ ಜಂಕ್ಷನ್ ನಲ್ಲಿ ಎಡಕ್ಕೆ ತಿರುಗಿ ಬನ್ನೇರುಘಟ್ಟ ಮುಖ್ಯ ರಸ್ತೆಗೆ ಸಂಪರ್ಕ ಪಡೆದು, ಡೈರಿ ಜಂಕ್ಷನ್ ಕಡೆಗೆ ಸಂಚಾರಿಸಬಹುದು

ಕೆ.ಜಿ.ಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ

ಕೆ.ಜಿ.ಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ನವರೆಗೆ ಬಕ್ರೀದ್ ಹಬ್ಬದ ಪ್ರಾರ್ಥನೆ ನಡೆಯಲಿದ್ದು, ಬೆಳಗ್ಗೆಯಿಂದ ಮಧ್ಯಾಹ್ನ 01.00 ಗಂಟೆಯವರೆಗೆ ತಾತ್ಕಾಲಿಕ ನಿರ್ಬಂಧ ಇರಲಿದೆ. ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್‌ವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ

-ನಾಗವಾರ ಜಂಕ್ಷನ್‌ನಿಂದ ಶಿವಾಜಿನಗರಕ್ಕೆ ಹೋಗುವ ವಾಹನ ಸವಾರರು ನಾಗವಾರ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಹೆಣ್ಣೂರು ಜಂಕ್ಷನ್ ರಸ್ತೆಯಲ್ಲಿ ಬಲ ತಿರುವು ಪಡೆದುಕೊಂಡು ಕಾಚರಕನಹಳ್ಳಿ ರಸ್ತೆ, ಚಂದ್ರಿಕ ಜಂಕ್ಷನ್ ಎಡ ತಿರುವು ಲಿಂಗರಾಜಪುರಂ ಪ್ರೈ ಓವರ್ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ರಾಬರ್ಟ್‌ನ್ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಂಡು ಹೇನ್ಸ್ ರಸ್ತೆ ಮೂಲಕ ಶಿವಾಜಿನಗರ ತಲುಪಬಹುದಾಗಿದೆ.

ಶಿವಾಜಿನಗರ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಸ್ಪೆನ್ಸ‌ರ್ ರಸ್ತೆಯಲ್ಲಿ ಕಡ್ಡಾಯವಾಗಿ ಬಲ ತಿರುವು ಪಡೆದುಕೊಂಡು ಸ್ಪೆನ್ಸರ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ವೀಲರ್ಸ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ನಾಗವಾರ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿದೆ.

-ಆರ್.ಟಿ. ನಗರದಿಂದ ಕಾವಲ್ ಬೈರಸಂದ್ರ ಮೂಲಕ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳು ಪುಷ್ಪಾಂಜಲಿ ಟಾಕೀಸ್ ಬಳಿ ಎಡ ತಿರುವು ಪಡೆದು ವೀರಣ್ಣ ಪಾಳ್ಯ ಜಂಕ್ಷನ್ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್ ಕಡೆಗೆ ಸಂಚರಿಸಬಹುದಾಗಿದೆ.

ನಿಲುಗಡೆ ನಿಷೇಧಿತ ಸ್ಥಳಗಳು:

ಪಾಟರಿ ಸರ್ಕಲ್‌ನಿಂದ ನಾಗವಾರ ಜಂಕ್ಷನ್‌ವರೆಗೆ ಎಲ್ಲಾ ಮಾದರಿಯ ವಾಹನಗಳ ಪಾರ್ಕಿಂಗ್ ನಿಷೇಧ

PREV
Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ