
ನೆಲಮಂಗಲ (ಆ.5): ಬೆಂಗಳೂರಿನಲ್ಲಿ ಮೂರಂತಸ್ತಿನ ಕಟ್ಟಡದಿಂದ ಬಿದ್ದು ಯುವತಿ ಅನುಮಾನಾಸ್ಪದ ಸಾವು ಕಂಡಿರುವ ಘಟನೆ ನಡೆದಿದೆ. ಫಿಟ್ನೆಸ್ ಸೆಂಟರ್ ಕಟ್ಟಡದಿಂದ ಬಿದ್ದು ಯುವತಿ ಸಾವು ಕಂಡಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ ಕಡಬಗೆರೆ ಜುನಿಫರ್ ಫಿಟ್ನೆಸ್ ಸೆಂಟರ್‌ನಲ್ಲಿ ಘಟನೆ ನಡೆದಿದೆ. ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ 20 ವರ್ಷದ ರಕ್ಷಿತಾ ಮೃತಪಟ್ಟ ಯುವತಿ. ಎಂಟು ತಿಂಗಳಿಂದ ಫಿಟ್ನೆಸ್ ಸೆಂಟರ್‌ನಲ್ಲಿ ರಕ್ಷಿತಾ ರಿಸೆಪ್ಷನಿಸ್ಟ್ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ. ಇದ್ದಕ್ಕಿದ್ದಂತೆ ಮೂರನೇ ಫಿಟ್ನೆಸ್ ಸೆಂಟರ್ ಕಟ್ಟಡದ ಮೇಲಿನಿಂದ ಬಿದ್ದು ರಕ್ಷಿತಾ ಸ್ಥಳದಲ್ಲೇ ಸಾವು ಕಂಡಿದ್ದಾಳೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.