Breaking: ಬೆಂಗಳೂರು ಜನರೇ ಅಲರ್ಟ್‌, ಈ ಎರಡು ದಿನ ನಗರಕ್ಕೆ ನೀರು ಪೂರೈಕೆ ಇಲ್ಲ!

Published : May 29, 2024, 07:41 PM ISTUpdated : May 29, 2024, 07:50 PM IST
Breaking: ಬೆಂಗಳೂರು ಜನರೇ ಅಲರ್ಟ್‌, ಈ ಎರಡು ದಿನ ನಗರಕ್ಕೆ ನೀರು ಪೂರೈಕೆ ಇಲ್ಲ!

ಸಾರಾಂಶ

ಬೆಂಗಳೂರಿನಲ್ಲಿ ಮುಂದಿನ ತಿಂಗಳ ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.  

ಬೆಂಗಳೂರು (ಮೇ.29): ಉದ್ಯಾನನಗರಿಯ ಜನರಿಗೆ ಜೂನ್‌ ತಿಂಗಳ ಆರಂಭದಲ್ಲಿಯೇ ನೀರಿನ ಸಮಸ್ಯೆ (Water supply) ಕಾಡಲಿದೆ. ಎಲೆಕ್ಷನ್‌ ರಿಸಲ್ಟ್‌ ಬರುವ ದಿನವೇ ಬೆಂಗಳೂರಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು BWSSB ಪ್ರಕಟಣೆಯಲ್ಲಿ ತಿಳಿಸಿದೆ. ಕಾವೇರಿಯ ವಿವಿಧ ಹಂತದ (cauvery 5th stage) ಯೋಜನೆಗಳ ಅನುಷ್ಠಾ ಸಂಬಂಧ ನಗರಕ್ಕೆ ಜೂನ್‌ 4 ಮತ್ತು ಜೂನ್‌ 5 ರಂದು ನೀರಿನ ಪೂರೈಕೆ ಇರೋದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾವೇರಿ 5ನೇ ಹಂತದ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ನೀರಿನ ಪೂರೈಕೆ ಸ್ಥಗಿತ ಮಾಡಲಿದೆ. ಈ ಕಾರಣಕ್ಕಾಗಿ ಕಾವೇರಿ 1, 2 ಮತ್ತು 3ನೇ ಹಂತದ ಘಟಕಗಳಲ್ಲಿ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಅಂದರೆ 12 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತವಾಗಲಿದೆ.  ಇನ್ನು ಕಾವೇರಿ 4ನೇ ಹಂತದಲ್ಲಿ 1 ಮತ್ತು 2ನೇ ಘಟ್ಟಗಳ ನೀರು ಸರಬರಾಜು ಘಟಕಗಳಲ್ಲಿ ಬೆಳಗ್ಗೆ  10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಂದರೆ 4 ಗಂಟೆಗಳ ಕಾಲ ನೀರು ಸರಬರಾಜು ವ್ಯತ್ಯಯವಾಗಲಿದೆ.  ಜೂನ್‌ 4 ಹಾಗೂ ಜೂನ್‌ 5 ರಂದು ಬೆಂಗಳೂರು ನಗರಕ್ಕೆ ಸರಬರಾಜಾಗುವ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು BWSSB  ಪ್ರಕಟಣೆಯ ಮೂಲಕ ತಿಳಿಸಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಹಾಗೂ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳಬೇಕು ಎಂದು ತಿಳಿಸಿದೆ.

PREV
Read more Articles on
click me!

Recommended Stories

112 ಹುದ್ದೆ ನೇಮಕಾತಿ ಮುಂದುವರಿಕೆಗೆ ಕೆಪಿಎಸ್ಸಿಗೆ ನೀಡಿದ್ದ ಅನುಮತಿ ವಾಪಸ್!
ಬೆಂಗಳೂರು: ಸೈಬರ್ ವಂಚನೆ ತಡೆಗೆ ಎಐ ಅಸ್ತ್ರ ಪ್ರಯೋಗ