ಕಾಲ್ತುಳಿತ ಪ್ರಕರಣ ಸಂಬಂಧ ಪೊಲೀಸರ ದಾಳಿ, ಆರ್‌ಸಿಬಿ ಸಿಒಒ ಸೇರಿ ಹಲವು ಪ್ರಮುಖರು ಎಸ್ಕೇಪ್

Published : Jun 06, 2025, 10:12 AM IST
RCB Stampede Arrest

ಸಾರಾಂಶ

ಆರ್‌ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿ ಇದೀಗ ದಾಳಿ ನಡೆಸಿದ್ದಾರೆ. ದಾಳಿಯಾಗುತ್ತಿದ್ದಂತೆ ಆರ್‌ಸಿಬಿ ಸಿಒಒ, ಕೆಎಸ್‌ಸಿಎ ಪದಾಧಿಕಾರಿಗಳು ಸೇರಿದಂತೆ ಹಲವು ಎಸ್ಕೇಪ್ ಆಗಿದ್ದಾರೆ.

ಬೆಂಗಳೂರು(ಜೂ.06) ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ದುರಂತದಿಂದ ದೇಶಾದ್ಯಂತ ಕರ್ನಾಟಕವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದಾರೆ. ಈ ಘಟನೆ ಸಂಬಂಧ ಸರ್ಕಾರ, ಪೊಲೀಸರನ್ನೇ ಹೊಣೆಯಾಗಿಸಿ ಅಮಾನತು ಮಾಡಿದೆ. ಆದರೆ ಈ ಘಟನೆಗೆ ಸರ್ಕಾರದ ಪ್ರಚಾರದ ತೆವಲು ಕಾರಣ ಅನ್ನೋ ಗಂಭೀರ ಆರೋಪ ಕೇಳಿಬಂದಿದೆ. ಇತ್ತ ಪೊಲೀಸರು ಈ ಕಾಲ್ತುಳಿತ ಪ್ರಕರಣ ಸಂಬಂಧ ತನಿಖೆ ಆರಂಭಿಸಿದ್ದಾರೆ. ದೂರಿನ ಆಧಾರದಲ್ಲಿ ಆರ್‌ಸಿಬಿ ಟೀಂ ಮ್ಯಾನೇಜ್ಮೆಂಟ್ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪದಾಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ವರನ್ನು ಅರೆಸ್ಟ್ ಮಾಡಿದ್ದರೆ, ಆರ್‌ಸಿಬಿ ಸಿಒಒ ಸೇರಿ ಹಲವು ನಾಪತ್ತೆಯಾಗಿದ್ದಾರೆ.

ಆರ್‌ಸಿಬಿ ಸಿಒಒ ರಾಜೇಶನ್ ಮೆನನ್ ನಾಪತ್ತೆ

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಎರಡು ಪ್ರತ್ಯೇಕ ದೂರು ದಾಖಲಾಗಿದೆ. ಈ ದೂರಿನಲ್ಲಿ ತರಾತುರಿಯಲ್ಲಿ ಕಾರ್ಯಕ್ರಮ ಆಯೋದಿಸಿದ ಕೆಎಸ್‌ಸಿಎ, ಆರ್‌ಸಿಬಿ ಟೀಂ ಮ್ಯಾನೇಜ್ಮೆಂಟ್ ಸೇರಿದಂತೆ ಹಲವರನ್ನು ಆರೋಪಿಗಳಾಗಿ ಉಲ್ಲೇಖಿಸಿದೆ. ಈ ದೂರಿನ ಆಧಾರದಲ್ಲಿ ಕಬ್ಬನ್ ಪಾರ್ಕ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದರಂತೆ ನಿನ್ನೆ ರಾತ್ರಿಯಿಡಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಲೆವೆಡೆ ದಾಳಿ ಮಾಡಿದ್ದಾರೆ. ಆರ್‌ಸಿಬಿ ತಂಡದ ಸಿಒಒ ಹಾಗೂ ಉಪಾಧ್ಯಕ್ಷ ರಾಜೇಶ್ ಮೆನನ್ ಎಸ್ಕೇಪ್ ಆಗಿದ್ದಾರೆ. ರಾಜೇಶ್ ಮೆನನ್ ಬೆಂಗಳೂರು ಮನೆ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ರಾಜೇಶ್ ಮನೆನ್ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಕೆಎಸ್‌ಸಿಎ ಪದಾಧಿಕಾರಿಗಳು ನಾಪತ್ತೆ

ಬೆಂಗಳೂರು ಪೊಲೀಸರು ರಾತ್ರಿ ವೇಳೆ ಹಲವರ ಮನೆ ಮೇಲೆ ದಾಳಿ ಮಾಡಿದೆ. ಬೆಂಗಳೂರು ಕಾಲ್ತುಳಿತ ಪ್ರಕರಣ ಸಂಬಂಧ ಮಾಡಿದ ಈ ದಾಳಿಗೂ ಮೊದಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಹಲವು ಪದಾದಿಕಾರಿಗಳು ನಾಪತ್ತೆಯಾಗಿದ್ದಾರೆ. ಕೆಎಸ್‌ಸಿಎ ಖಜಾಂಚಿ ಜಯರಾಮ್, ಪದಾಧಿಕಾರಿ ಶಂಕರ್ ನಾಪತ್ತೆಯಾಗಿದ್ದರೆ. ಇವರ ಮನೆ ಮೇಲೂ ಪೊಲೀಸರು ದಾಳಿ ಮಾಡಿದ್ದಾರೆ. ಆದರೆ ಕಾಲ್ತುಳಿತ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಹಲವು ಪ್ರಮುಖರು ಎಸ್ಕೇಪ್ ಆಗಿದೆ.

ಎಸ್ಕೇಪ್ ಆಗುತ್ತಿದ್ದ ಆರ್‌ಸಿಬಿ ಮಾರ್ಕೆಟಿಂಗ್ ಮ್ಯಾನೇಜರ್ ಅರೆಸ್ಟ್

ಪೊಲೀಸರು ದಾಳಿ ವೇಳೆ ಮುಂಬೈಗೆ ಎಸ್ಕೇಪ್ ಆಗಲು ಯತ್ನಿಸಿದ ಆರ್‌ಸಿಬಿ ತಂಡದ ಮಾರ್ಕೆಟಿಂಗ್ ಮ್ಯಾನೇಜರ್ ನಿಖಲ್ ಅರೆಸ್ಟ್ ಆಗಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಖಿಲ್‌ನ ಪೊಲೀಸರು ಬಂಧಿಸಿದ್ದಾರೆ. ಆರ್‌ಸಿಬಿ ಮ್ಯಾನೇಜ್ಮೆಂಟ ಹಾಗೂ ಈವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ ಡಿಎನ್ಎ ಸಿಬ್ಬಂದಿಗಳನ್ನು ಅರೆಸ್ಟ್ ಮಾಡಿದ್ದರೆ. ಸುನೀಲ್ ಮಾಥ್ಯೂ, ಸುಮಂತ್ ಹಾಗೂ ಕಿರಣ್ ಎಂಬ ಇತರ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರು ಕಾಲ್ತುಳಿತ ದುರಂತ

ಆರ್‌ಸಿಬಿ ಟ್ರೋಫಿ ಗೆದ್ದ ಮರುದಿನವೇ ಬೆಂಗಳೂರಿನಲ್ಲಿ ಎರಡೆರಡು ಕಾರ್ಯಕ್ರಮ ಆಯೋದಿಸಲಾಗಿತ್ತು. ಆರ್‌ಸಿಬಿ ಕ್ರಿಕೆಟಿಗರಿಗೆ ಸರ್ಕಾರ ವಿಧಾನ ಸೌಧ ಮೆಟ್ಟಿಲುಗಳ ಮೇಲೆ ಸನ್ಮಾನ ಕಾರ್ಯಕ್ರಮ ಆಯೋಜಿಸಿತ್ತು. ಇದು ಕಾಂಗ್ರೆಸ್ ಸರ್ಕಾರದ ಸಚಿವರು, ಶಾಸಕರು ಅವರ ಮಕ್ಕಳ ಸೆಲ್ಫಿ ಕಾರ್ಯಕ್ರಮವಾಗಿ ಬದಲಾಗಿತ್ತು. ಇಷ್ಟೇ ಅಲ್ಲ ಅಂತಾರಾಷ್ಟ್ರೀಯ ಆಟಾಗಾರರ ಕರೆಸಿ ಮಾಡಿದ ಸನ್ಮಾನ ಕಾರ್ಯಕ್ರಮ ಜಾತ್ರೆಯಾಗಿ ಬದಲಾಗಿತ್ತು. ಬಳಿಕ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದ ವರೆಗೆ ಮೆರವಣಿಗೆ ಸರ್ಕಾರದ ಅನುಮತಿ ನೀಡಿತ್ತು. ಇತ್ತ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅತೀ ದೊಡ್ಡ ಕಾರ್ಯಕ್ರಮ ಆಯೋಜಿಸಿತ್ತು. ಇದಕ್ಕೂ ಸರ್ಕಾರ ಅನುಮತಿ ನೀಡಿತ್ತು. 8 ಲಕ್ಷಕ್ಕೂ ಅಧಿಕ ಆರ್‌ಸಿಬಿ ಅಭಿಮಾನಿಗಳು ಕ್ರೀಡಾಂಗಣ ಬಳಿ ಹಾಜರಿದ್ದರು. ಇದರ ಪರಿಣಾಮ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರೆ 56 ಮಂದಿ ಗಾಯಗೊಂಡದ್ದಾರೆ.

PREV
Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ