ಬಿಜೆಪಿ ಮುಖಂಡ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಬೆಂಬಲಿಗರೋರ್ವರ ವಿಡಿಯೋ ಇದೀಗ ವೈರಲ್ ಆಗಿದೆ. ಅದರಲ್ಲಿರುವ ವಿಚಾರವೇನಿ ಇಲ್ಲಿದೆ ಮಾಹಿತಿ
ಬೆಂಗಳೂರು [ಅ.14]: ರಾಜ್ಯ ಬಿಜೆಪಿ ಕಚೇರಿಯಲ್ಲಿ ಲಿಂಗಾಯತ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಪ್ರವೇಶ ನಿರಾಕರಿಸಲಾಗುತ್ತಿದೆ ಎಂದು ಬಿಜೆಪಿ ಕಾರ್ಯಕರ್ತ ಹಾಗೂ ಬಿ.ಎಸ್. ಯಡಿಯೂರಪ್ಪ ಬೆಂಬಲಿಗ ನಂಜುಂಡಸ್ವಾಮಿ ಎಂಬುವವರು ಗಂಭೀರ ಆರೋಪ ಮಾಡಿ ರುವ ವಿಡಿಯೋ ಈಗ ವೈರಲ್ ಆಗಿದೆ.
ಕಳೆದ ಹದಿನಾಲ್ಕು ವರ್ಷಗಳಿಂದ ಬಿಜೆಪಿಗಾಗಿ ದುಡಿದಿದ್ದೇನೆ. ಬಿಜೆಪಿ ಹೆತ್ತ ತಾಯಿ ಎಂದು ತಿಳಿದುಕೊಂಡಿದ್ದೆ. ಯಡಿಯೂರಪ್ಪ ಅವರು ರಾಜ್ಯಾಧ್ಯಕ್ಷರಾಗಿದ್ದಾಗ ಲಕ್ಷಾಂತರ ಜನ ಬಿಜೆಪಿ ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದು ಭಾವಿಸಿದ್ದರು. ಆದರೆ, ಅವರನ್ನು ಕೆಳಗಿಳಿಸಿ ಹೊಸ ಅಧ್ಯಕ್ಷರು ಬಂದ ಮೇಲೆ ಲಿಂಗಾಯತರನ್ನು ಟಾರ್ಗೆಟ್ ಮಾಡಲಾಗುತ್ತಿದೆ.
undefined
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಹತ್ತಾರು ವರ್ಷಗಳಿಂದ ಬಿಜೆಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಐದಾರು ಲಿಂಗಾಯತ ಸಮುದಾಯದ ಕಾರ್ಯಕರ್ತರನ್ನು ಕೆಲಸದಿಂದ ತೆಗೆಯಲಾಗಿದೆ. ಲಿಂಗಾಯತ ಕಾರ್ಯಕರ್ತರನ್ನು ಕಚೇರಿಗೆ ಬರಬೇಡಿ
ಎಂದು ಹೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಯಡಿಯೂರಪ್ಪ ಬೇರೆ ಪಕ್ಷ ಕಟ್ಟಿದಾಗ ಬಿಜೆಪಿ ಸ್ಥಿತಿ ಏನಾಗಿತ್ತು ಅಂತಾ ನಳೀನ್ ಕುಮಾರ್ ಕಟೀಲ್ ಅವರೇ ಯೋಚಿಸಿ. 40 ಸೀಟು ಗೆಲ್ಲಲಾಗಲ್ಲಿಲ್ಲ. ವಿರೋಧ ಪಕ್ಷದ ಸ್ಥಾನ ಪಡೆಯಲು ಯೋಗ್ಯತೆ ಇರಲಿಲ್ಲ. ಈಗ ಯಡಿಯೂರಪ್ಪ ಅವರನ್ನು ತುಳಿಯಲು ಯತ್ನಿಸಿದರೆ ಮುಂದೆ ರಾಜ್ಯದಲ್ಲಿ ಬಿಜೆಪಿಗೆ ಈ ಹಿಂದಿನ ಸ್ಥಿತಿಯೇ ಬರುತ್ತದೆ ಎಂದು ಎಚ್ಚರಿಸಿದ್ದಾರೆ.