
ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ಅವರು ಇಂದು ಹೆಬ್ಬಾಳ ಕ್ಷೇತ್ರದ ಭೂಪಸಂದ್ರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಇಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಯು.ಟಿ. ಖಾದರ್, ಕೆ.ಹೆಚ್. ಮುನಿಯಪ್ಪ, ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎ.ಎಸ್. ಪೊನ್ನಣ್ಣ, ಮಾಜಿ ಸಚಿವ ಹಾಗೂ ಶಾಸಕರಾದ ದಿನೇಶ್ ಗುಂಡೂರಾವ್ ಮತ್ತಿತರರು ಉಪಸ್ಥಿತರಿದ್ದರು. ಸುಮಾರು 150 ಕೋಟಿ ರೂಪಾಯಿ ವೆಚ್ಚದಲ್ಲಿ 125 ಬೆಡ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಭೈರತಿ ಸುರೇಶ್, 150 ಕೋಟಿ ರೂಪಾಯಿ ವೆಚ್ಚದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತಿದ್ದೇವೆ. ಬೆಳೆಯುತ್ತಿರುವ ನಗರಗಳಲ್ಲಿ ಆಸ್ಪತ್ರೆಗಳ ನಿರ್ಮಾಣ ಆಗಬೇಕು. ಪಶುಸಂಗೋಪನೆ ಇಲಾಖೆ ಜಾಗದಲ್ಲಿ 3 ಎಕರೆ ಜಮೀನಿನಲ್ಲಿ ಆಸ್ಪತ್ರೆ ನಿರ್ಮಾಣ ಮಾಡುತ್ತಿದ್ದೇವೆ. ಆದ್ದರಿಂದ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದರು.
ಅಲ್ಲದೆ, 3 ವರ್ಷಗಳಲ್ಲಿ ನಮ್ಮ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಸುಮಾರು 650 ಕೋಟಿ ರೂಪಾಯಿ ನೀಡಿದೆ. ಪಾರ್ಕ್ ಗಳ ಅಭಿವೃದ್ಧಿಗೆ 30 ಕೋಟಿ ರೂಪಾಯಿ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಅವರು 3 ತಿಂಗಳಲ್ಲಿ ನನ್ನ ಕ್ಷೇತ್ರಕ್ಕೆ 200 ಕೋಟಿ ರೂಪಾಯಿ ನಮ್ಮ ಕ್ಷೇತ್ರಕ್ಕೆ ಕೊಟ್ಟಿದ್ದಾರೆ. ಈ ಮೂರು ವರ್ಷ ನಮಗೆ ಸುವರ್ಣಯುಗ, ಇನ್ನು ಯಾವುದೇ ಸರ್ಕಾರದಲ್ಲಿ ನಮ್ಮ ಕ್ಷೇತ್ರಕ್ಕೆ ಇಷ್ಟು ಅನುದಾನ ಕೊಟ್ಟಿಲ್ಲ. ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಸಚಿವನಾಗಿರೋದು ಪೂರ್ವ ಜನ್ಮದ ಪುಣ್ಯ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಧನ್ಯವಾದ ಅರ್ಪಿಸುತ್ತೇವೆ ಎಂದು ತಿಳಿಸಿದರು.
ಭೂಪಸಂದ್ರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಇಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದೆನು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಯು.ಟಿ. ಖಾದರ್, ಶ್ರೀ ಕೆ.ಹೆಚ್. ಮುನಿಯಪ್ಪ, ಶ್ರೀ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ… pic.twitter.com/ZYG07XAE23— DK Shivakumar (@DKShivakumar) September 20, 2026