
ಕನಕಪುರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ತವರು ಕ್ಷೇತ್ರ ಕನಕಪುರಕ್ಕೆ ಇಂದು ಸಂಜೆ ಆಗಮಿಸಿದ್ದಾರೆ. ನಾಳೆ ಗಣೇಶ ಹಬ್ಬ ಹಾಗೂ ಕುಟುಂಬದ ಖಾಸಗಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಯಾಣ ಬೆಳೆಸಿದ್ದಾರೆ. ಇನ್ನು ಸಿಎಂ ಅವರು ತಮ್ಮ ಪ್ರಯಾಣದ ಅವಧಿಯಲ್ಲೂ ಒಂದಷ್ಟು ಕರ್ತವ್ಯಗಳನ್ನ ನಿಭಾಯಿಸುತ್ತ ಸಾಗಿದರು.
ಬೆಂಗಳೂರಿನಿಂದ ಕನಕಪುರಕ್ಕೆ ಆಗಮಿಸುವ ಮಾರ್ಗಮಧ್ಯೆ ಸಿಗುವ ಬಿಸಿಎಂ ಹಾಸ್ಟೆಲ್ ಒಂದಕ್ಕೆ ದಿಢೀರ್ ಭೇಟಿ ನೀಡಿದರು. ಹಾಸ್ಟೆಲ್‌ಗೆ ಭೇಟಿ ನೀಡಿದ ಅವರು ಅಲ್ಲಿರುವ ವ್ಯವಸ್ಥೆಗಳನ್ನು ಅವಲೋಕಿಸಿದರು. ಖುದ್ದು ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು.
ನಂತರ ಹಾಸ್ಟೆಲ್ ಆಹಾರ ವ್ಯವಸ್ಥೆಯನ್ನು ತಿಳಿದುಕೊಳ್ಳಲು ವಿದ್ಯಾರ್ಥಿಗಳ ಜೊತೆಯಲ್ಲೇ ಕೂತು ಊಟ ಮಾಡಿದರು. ಹಾಸ್ಟೆಲ್‌ನಲ್ಲಿ ಮಾಡಲಾಗಿದ್ದ ಬಿಸಿಬಿಸಿ ಮುದ್ದೆ ಸವಿದು ಕನಕಪುರದತ್ತ ಸಾಗಿದರು. ಇನ್ನು ಹಾಸ್ಟೆಲ್ ಭೇಟಿ ವೇಳೆ ಶಿವಕುಮಾರ್ ಅವರಿಗೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್ಪಿ ರೋಹನ್ ಜಗದೀಶ್ ಸಾಥ್ ನೀಡಿದರು.
ಕನಕಪುರಕ್ಕೆ ಭೇಟಿ ನೀಡಿರುವ ಶಿವಕುಮಾರ್, ಇವತ್ತು ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಕಾರ್ಯಕ್ರಮಗಳನ್ನ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಯಶವಂತಪುರದಲ್ಲಿರುವ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿಯೂ ಅಲ್ಲಿನ ಕಾರ್ಮಿಕರ ಜೊತೆ ಶಿವಕುಮಾರ್ ಮುಕ್ತವಾಗಿ ಮಾತನ್ನಾದ್ದರು.
ನಂತರ ಅಲ್ಲಿನ ಕ್ಯಾಂಟೀನ್‌ನಲ್ಲಿ ಕೂತು ಎಲ್ಲರೊಂದಿಗೂ ಟಿಫನ್ ಸವಿದಿದ್ದರು. ಡಿಕೆಶಿ ಅವರ ಎಪಿಎಂಸಿ ಭೇಟಿ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗಿತ್ತು. ಇದೀಗ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿರೋದು ರಾಜ್ಯದ ಮೂಲೆ ಮೂಲೆಯಲ್ಲಿರುವ ಬಿಸಿಎಂ ಹಾಸ್ಟೆಲ್‌ಗಳ ವಿದ್ಯಾರ್ಥಿಗಳಿಗೆ ಆಶಾಭಾವ ಮೂಡಿದೆ ಎಂದೇ ಹೇಳಬಹುದು. ಜೊತೆಗೆ ಬಿಸಿಎಂ ಅಧಿಕಾರಿಗಳಿಗೆ ನಡುಕ ಶುರುವಾಗಿದೆ. ಯಾಕೆಂದರೆ.. ರಾಜ್ಯದಲ್ಲಿ ಬಿಸಿಎಂ ಹಾಸ್ಟೆಲ್‌ಗಳ ವ್ಯವಸ್ಥೆ ಇಂದಿಗೂ ಅವ್ಯವಸ್ಥೆಯಾಗಿಯೇ ಉಳಿದಿದೆ.
ಭೇಟಿ ಬಳಿಕ ಟ್ವೀಟ್ ಮಾಡಿರುವ ಅವರು, ನಮ್ಮ ನಾಡಿನ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಲು ಬದ್ಧ ಎಂದು ಭರವಸೆ ನೀಡಿದ್ದಾರೆ. ಇಂದು ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಕಾಲೇಜಿನ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ, ಸ್ವತಃ ಊಟ ಮಾಡುವ ಮೂಲಕ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದೆ. ಊಟದ ಗುಣಮಟ್ಟದಿಂದ ಹಿಡಿದು ವಸತಿ ವ್ಯವಸ್ಥೆ, ಮೂಲಭೂತ ಸೌಕರ್ಯಗಳು, ಉಚಿತ ಬಸ್ ಪಾಸ್ ಹಾಗೂ ಸ್ಕಾಲರ್‌ಶಿಪ್ ಸೇರಿದಂತೆ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಅವರಿಂದಲೇ ಮಾಹಿತಿ ಪಡೆದುಕೊಳ್ಳಲಾಯಿತು.
ಕಲಬುರಗಿ, ರಾಯಚೂರು, ಹಾವೇರಿ, ಬೀದರ್, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಇಲ್ಲಿಗೆ ಆಗಮಿಸಿ ವಿದ್ಯಾಭ್ಯಾಸ ಮಾಡುತ್ತಿರುವ ನಮ್ಮ ಮಕ್ಕಳು, ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಅವರ ಬದುಕಿನಲ್ಲಿ ಯಾವುದೇ ಕೊರತೆ ಅಡ್ಡಿಯಾಗಬಾರದು ಎಂಬುದು ನಮ್ಮ ಸರ್ಕಾರದ ಆಶಯವಾಗಿದೆ.
ವಿದ್ಯಾರ್ಥಿ ನಿಲಯದಲ್ಲಿನ ಕೆಲವು ಕುಂದು-ಕೊರತೆಗಳ ಕುರಿತು ಸಿಬ್ಬಂದಿ ವರ್ಗದವರು ನನ್ನ ಗಮನಕ್ಕೆ ತಂದಿದ್ದು, ಈ ಕುರಿತು ಡೆಪ್ಯೂಟಿ ಕಮಿಷನರ್ ಹಾಗೂ ಸಿಇಓಗೆ ಹೇಳಿ ಮತ್ತೊಮ್ಮೆ ಪರಿಶೀಲನೆ ನಡೆಸಿ, ಅಗತ್ಯ ನೆರವು ಹಾಗೂ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದೇನೆ. ನಮ್ಮ ನಾಡಿನ ಪ್ರತಿಯೊಬ್ಬ ಮಗುವಿನ ಕನಸಿಗೂ ರೆಕ್ಕೆ ನೀಡುವುದು, ಅವರಿಗೆ ಉತ್ತಮ ಶಿಕ್ಷಣ ಹಾಗೂ ಉತ್ತಮ ಭವಿಷ್ಯ ರೂಪಿಸುವುದು ನಮ್ಮ ಸರ್ಕಾರದ ಸಂಕಲ್ಪವಾಗಿದೆ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಸರ್ಕಾರ ಬದ್ಧವಾಗಿದೆ ಎಂದು ಶಿವಕುಮಾರ್ ಭರವಸೆ ನೀಡಿದ್ದಾರೆ.
ವಿದ್ಯಾರ್ಥಿ ನಿಲಯದಲ್ಲಿನ ಕೆಲವು ಕುಂದು-ಕೊರತೆಗಳ ಕುರಿತು ಸಿಬ್ಬಂದಿ ವರ್ಗದವರು ನನ್ನ ಗಮನಕ್ಕೆ ತಂದಿದ್ದು, ಈ ಕುರಿತು ಡೆಪ್ಯೂಟಿ ಕಮಿಷನರ್ ಹಾಗೂ ಸಿಇಓಗೆ ಹೇಳಿ ಮತ್ತೊಮ್ಮೆ ಪರಿಶೀಲನೆ ನಡೆಸಿ, ಅಗತ್ಯ ನೆರವು ಹಾಗೂ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದೇನೆ.
ನಮ್ಮ ನಾಡಿನ ಪ್ರತಿಯೊಬ್ಬ ಮಗುವಿನ ಕನಸಿಗೂ ರೆಕ್ಕೆ ನೀಡುವುದು,… pic.twitter.com/4fhHwAnQvm— DK Shivakumar (@DKShivakumar) September 13, 2026