ಸ್ಯಾಂಕಿ ಟ್ಯಾಂಕ್ ಬಳಿ ಹೊಸ ಬದಲಾವಣೆ: ಶ್ರೀರಾಂಪುರ ಮೆಟ್ರೋ ಬಳಿ ಬಹುಮಹಡಿ ಪಾರ್ಕಿಂಗ್

Published : Nov 21, 2026, 07:34 AM IST
Sankey Tank

ಸಾರಾಂಶ

ಮಲ್ಲೇಶ್ವರಂನ ಸ್ಯಾಂಕಿ ಟ್ಯಾಂಕಿ ಪ್ರವೇಶ ದ್ವಾರದ ಬಳಿ ಸಾರ್ವಜನಿಕರ ಅನುಕೂಲಕ್ಕಾಗಿ ಸ್ಕೈವಾಕ್ ನಿರ್ಮಿಸಲು ಜಿಬಿಎ ಮುಂದಾಗಿದೆ. ಶಾಸಕ ಡಾ. ಅಶ್ವತ್ ನಾರಾಯಣ್ ನೇತೃತ್ವದ ಸಭೆಯಲ್ಲಿ ಶ್ರೀರಾಮಪುರ ಮೆಟ್ರೋ ಬಳಿ ಬಹುಮಹಡಿ ಪಾರ್ಕಿಂಗ್ ಮತ್ತು ಇತರ ಕಾಮಗಾರಿಗಳ ತ್ವರಿತಗತಿಗೆ ಮುಖ್ಯ ಆಯುಕ್ತರು ಸೂಚಿಸಿದ್ದಾರೆ.

ಬೆಂಗಳೂರು: ಮಲ್ಲೇಶ್ವರಂ 18ನೇ ಅಡ್ಡರಸ್ತೆಯ ಸ್ಯಾಂಕಿ ಟ್ಯಾಂಕಿ ಪ್ರವೇಶದ್ವಾರದ ಬಳಿ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಸ್ಕೈವಾಕ್ ನಿರ್ಮಾಣ ಮಾಡಲು ಪಾಲಿಕೆ ಮುಂದಾಗಿದ್ದು, ಈ ಕುರಿತು ಅಗತ್ಯ ಪರಿಶೀಲನೆ ನಡೆಸಿ, ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್ ಅಧಿಕಾರಿಗಳಿಗೆ ಸೂಚಿಸಿದರು.

ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸುವಂತೆ ತಾಕೀತು

ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಶುಕ್ರವಾರ ಶಾಸಕ ಡಾ.ಸಿ.ಎನ್.ಅಶ್ವತ್ ನಾರಾಯಣ ಅವರ ನೇತೃತ್ವದಲ್ಲಿ ನಡೆದ ಪರಿಶೀಲನಾ ಸಭೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಬಾಕಿ ಇರುವ ಕಾಮಗಾರಿಗಳ ಕುರಿತು ತ್ವರಿತಗತಿಯಲ್ಲಿ ಮುಗಿಸಬೇಕೆಂದು ತಾಕೀತು ಮಾಡಿದರು.

ಪಾರ್ಕಿಂಗ್ ಸಮಸ್ಯೆಗೆ ಪರಿಹಾರ

ಶ್ರೀರಾಮಪುರ ಮೆಟ್ರೋ ನಿಲ್ದಾಣದ ಬಳಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಬಹುಮಹಡಿ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸರ್ಕಾರಿ ಶಾಲಾ-ಕಾಲೇಜುಗಳ ಖಾತಾ ವರ್ಗಾವಣೆ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಬೇಕು, ರೈಲ್ವೆ ಸಂಬಂಧಿತ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂಬುದೂ ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಿ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಹೆಚ್ಚುವರಿ ಆಯುಕ್ತೆ ಕವಿತಾ ರಾಜಾರಾಂ, ಉಪ ಆಯುಕ್ತೆ ಸೈಯದಾ ಆಫ್ರೀನ್ ಬಾನು ಎಸ್. ಬಳ್ಳಾರಿ, ಜಂಟಿ ಆಯುಕ್ತೆ ಡಾ.ಶೃತಿ ಎಂ.ಕೆ ಇದ್ದರು.

PREV
Read more Articles on
click me!

Recommended Stories

Winter: ಬೆಂಗಳೂರಿನಲ್ಲಿ ತಾಪಮಾನ ದಿಢೀರ್ ಕುಸಿತ: ನವೆಂಬರ್‌ನಲ್ಲಿ ಚಳಿ ದಾಖಲೆ ಉಡೀಸ್
ಭಾರತ್ ಜೋಡೋ ಸಂಘಗಳಿಗೆ 1 ಸಾವಿರ ಕೋಟಿ ಕೊಡೋಕೆ ದುಡ್ಡಿದೆ, ಆಶಾ ಕಾರ್ಯಕರ್ತರ ಗೌರವ ಧನ ಹೆಚ್ಚಿಸೋಕೆ ಇಲ್ಲವಾ?