ಅರ್ನಾಬ್ ಬೆನ್ನಲ್ಲೇ ಬರುತ್ತಿದೆ ಮುರಸು ಚಂಡಮಾರುತ, ಮಂಗಳವಾರದಿಂದ ಕರ್ನಾಟಕದಲ್ಲಿ ಬಿರುಗಾಳಿ ಮಳೆ

Published : Nov 01, 2026, 11:43 AM IST
Karnataka Rain

ಸಾರಾಂಶ

ಅರ್ನಾಬ್ ಚಂಡಮಾರುತ ಕ್ಷೀಣಿಸುತ್ತಿದ್ದಂತೆ ಇದೀಗ ಮುರಸು ಚಂಡಮಾರುತ ಅಪ್ಪಳಿಸಲು ಸಜ್ಜಾಗಿದೆ. ಆಂಧ್ರ ಕರಾವಳಿ ತೀರಕ್ಕೆ ಅಪ್ಪಳಿಸಲಿರುವ ಈ ಸೈಕ್ಲೋನ್‌ನಿಂದ ಕರ್ನಾಟಕದಲ್ಲೂ ಭಾರಿ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಎಚ್ಚರಿಸಿದೆ.

ಬೆಂಗಳೂರು (ನ.01) ಭಾರತೀಯ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಅರ್ನಾಬ್ ಚಂಡಮಾರುತದ ಆಂಧ್ರ ಹಾಗೂ ಒಡಿಶಾ ಕರಾವಳಿ ತೀರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಅವಾಂತರ ಸೃಷ್ಟಿಸಿತ್ತು. ಇದರ ಪರಿಣಾಮ ಕರ್ನಾಟಕದ ಮೇಲೂ ಆಗಿತ್ತು. ಇದೀಗ ಅರ್ನಾಬ್ ಚಂಡಮಾರುತ ಕ್ಷೀಣಿಸುತ್ತಿದ್ದಂತೆ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಹವಾಮಾನ ವೈಪರಿತ್ಯದಿಂದ ಮುರುಸು ಚಂಡ ಮಾರುತ ಅಪ್ಪಳಿಸಲು ಸಜ್ಜಾಗಿದೆ. ಆಂಧ್ರ ಪ್ರದೇಶ ಕರಾವಳಿ ಪ್ರದೇಶಕ್ಕೆ ಮುರಸು ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ. ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಮುರಸು ಚಂಡಮಾರುತದಿಂದ ದಕ್ಷಿಣ ಭಾರತದ ವಾತಾವರಣ ಬದಲು

ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗಕ್ಕೆ ತೀವ್ರ ಸೈಕ್ಲೋನ್ ಮುರಸು ತಲುಪುವ ಸಾಧ್ಯತೆ ಇದೆ. ಈ ಚಂಡಮಾರುತದಿಂದ ನೆರೆಯ ಕರ್ನಾಟಕದಲ್ಲೂ ವ್ಯಾಪಕ ಮಳೆ ಮತ್ತು ಬಿರುಗಾಳಿಯ ಅಬ್ಬರ ಶುರುವಾಗಲಿದೆ ಎಂದು ಐಎಂಡಿ ಎಚ್ಚರಿಸಿದೆ. ಆಗ್ನೇಯ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದ ಹತ್ತಿರ ರೂಪುಗೊಂಡಿದ್ದ ತೀವ್ರ ವಾಯುಭಾರ ಕುಸಿತವು ಇದೀಗ ಮತ್ತಷ್ಟು ಬಲಗೊಂಡು ವಾಯುವ್ಯ ದಿಕ್ಕಿನತ್ತ ಸಾಗುತ್ತಿದೆ. ಮುಂದಿನ 24 ರಿಂದ 48 ಗಂಟೆಗಳಲ್ಲಿ ಇದು ಚಂಡಮಾರುತವಾಗಿ ರೂಪಾಂತರಗೊಳ್ಳಲಿದೆ ಎಂದು ಹವಾ್ಮಾನ ಇಲಾಖೆ ಎಚ್ಚರಿಸಿದೆ. ಗಂಟೆಗೆ 100 ರಿಂದ 120 ಕಿಲೋಮೀಟರ್ ವೇಗದಲ್ಲಿ ಬೀಸುವ ಬಿರುಗಾಳಿಯೊಂದಿಗೆ ನೆಲ್ಲೂರು ಮತ್ತು ನರಸಾಪುರ ನಡುವೆ ಕರಾವಳಿ ದಾಟುವ ಸಾಧ್ಯತೆ ಎಂದು ಎಚ್ಚರಿಸಿದೆ. ಈ ನೂತನ ಚಂಡಮಾರುತದ ಪರಿಣಾಮವಾಗಿ ದಕ್ಷಿಣ ಭಾರತದಾದ್ಯಂತ ವಾತಾವರಣದಲ್ಲಿ ದಿಢೀರ್ ಬದಲಾವಣೆಯಾಗಲಿದೆ.

ಕರ್ನಾಟಕದಲ್ಲಿ ಭಾರಿ ಮಳೆ ಗಾಳಿ

ಆಂಧ್ರಪ್ರದೇಶದ ಮೇಲೆ ಮುರಸು ಸೈಕ್ಲೋನ್ ಪ್ರಭಾವ ಬೀರುತ್ತಿದ್ದಂತೆಯೇ, ಕರ್ನಾಟಕದ ಮೇಲೂ ವ್ಯತಿರಿಕಿತ್ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಸೂಚಿಸಿದೆ. ನವೆಂಬರ್ 1 ರಿಂದ ನವೆಂಬರ್ 4 ರ ಅವಧಿಯಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಅಲ್ಲದೆ, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.

ಎಲ್ಲೆಲ್ಲಿ ಮಳೆ?

ವಿಶೇಷವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ ಮತ್ತು ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿ-ಮಳೆಯ ವಾತಾವರಣ ಹೆಚ್ಚಿರಲಿದೆ. ಮತ್ತೊಂದೆಡೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ರಾಯಚೂರು, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಹಾಗೂ ಕರಾವಳಿ ಕರ್ನಾಟಕದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 40 ಕಿಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಲಿದ್ದು, ಗಾಳಿಯ ವೇಗ ತೀವ್ರವಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ತಗ್ಗು ಪ್ರದೇಶಗಳ ಜನರು ಜಾಗರೂಕರಾಗಿರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

PREV
Read more Articles on
click me!

Recommended Stories

Bengaluru: ಸ್ಟಿಂಗ್ ಕೇಸ್, ಕೃಪಾ ಆಳ್ವಾ ಉಚ್ಚಾಟನೆಗೆ ಕಾರಣ ಕೊಟ್ಟ ಬಿ.ಕೆ. ಹರಿಪ್ರಸಾದ್‌
‘ತೂರ್ ದಾಲ್’ ಗೊತ್ತು, ‘ತೊಗರಿಬೇಳೆ’ ಗೊತ್ತಿಲ್ವಾ?: ನಾಲಗೆಯಿಂದ ದೂರವಾಗುತ್ತಿರುವ ಕನ್ನಡ ಪದಗಳ ಉಳಿವಿಗೆ ಶುರುವಾಯ್ತು ಕಸರತ್ತು