ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್ ವಿವಾಹ ಮಾ.6ಕ್ಕೆ

Published : Feb 18, 2025, 12:16 PM ISTUpdated : Feb 18, 2025, 12:49 PM IST
ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್ ವಿವಾಹ ಮಾ.6ಕ್ಕೆ

ಸಾರಾಂಶ

ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಅವರು ಮಾರ್ಚ್ 9 ರಂದು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವಿವಾಹವಾಗಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಾಂಪ್ರದಾಯಿಕವಾಗಿ ವಿವಾಹ ನಡೆಯಲಿದೆ.

ಬೆಂಗಳೂರು : ಬಿಜೆಪಿಯ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಮಾ.9ರಂದು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಲಿದ್ದಾರೆ.  ಅಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಾಂಪ್ರದಾಯಿಕವಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ. ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ. 

ಕಳೆದ ಹಲವು ದಿನಗಳಿಂದ ಎರಡೂ ಕುಟುಂಬಗಳ ನಡುವೆ ಮಾತುಕತೆ ನಡೆದು ವಿವಾಹ ತೀರ್ಮಾನಿಸಲಾಗಿತ್ತು. ಇತ್ತೀಚೆಗೆ ಆರ್ಟ್ ಆಫ್ ಲಿವಿಂಗ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಶಿವಶ್ರೀ ಅವರು ಗಾಯನವಲ್ಲದೆ ಭರತನಾಟ್ಯ ಕಲಾವಿದೆ ಕೂಡ ಹೌದು. ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಪದವಿಯನ್ನೂ ಗಳಿಸಿದ್ದಾರೆ. ಆಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಶಿವಶ್ರೀ ಅವರು ಹಾಡಿದ ರಾಮನ ಕುರಿತ ಗೀತೆಯನ್ನು ಮೆಚ್ಚಿ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಅಲ್ಲದೇ ಇತ್ತೀಚೆಗೆ ಆರ್ಟ್ ಲಿವಿಂಗ್ ಆಶ್ರಮಕ್ಕೆ ತೆರಳಿದ ಈ ಜೋಡಿ ಒಟ್ಟಿಗೆ ಶ್ರೀ ರವಿಶಂಕರ್ ಗುರೂಜಿಯವರ ಆಶೀರ್ವಾದ ಪಡೆದಿದ್ದರೆ. ಅಷ್ಟೇ ಅಲ್ಲ, ಬೆಂಗಳೂರಲ್ಲಿ ನಡೆದ ಏರೋ ಶೋಗೂ ಸಹ ಭಾವೀ ಪತ್ನಿಯೊಂದಿಗೆ ತೆರಳಿದ ಬೆಂಗಳರೂ ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿದ್ದರು. 

ವಿವಾಹ ವದಂತಿ ನಡುವೆ ಒಟ್ಟಿಗೆ ರವಿಶಂಕರ ಗುರೂಜಿ ಆಶೀರ್ವಾದ ಪಡೆದ ತೇಜಸ್ವಿ ಸೂರ್ಯ, ಗಾಯಕಿ ಶಿವಶ್ರೀ

ಸಂಸದ ತೇಜಸ್ವಿ ಸೂರ್ಯ, ಸಿಂಗರ್ ಸಿವಶ್ರಿ ಭೇಟಿಯಾಗಿದ್ದೆಲ್ಲಿ? ಇನ್‌ಸ್ಟಾಗ್ರಾಂ ಹೇಳಿದ ಕತೆ!

PREV
Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ