
ಬೆಂಗಳೂರು (ಆ.25): ಬೆಂಗಳೂರಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಆಯೋಜಿಸಲಾಗಿರುವ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 26ರವರೆಗೆ ವಿಸ್ತರಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಆದೇಶ ಹೊರಡಿಸಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ಸಮಾಜದ ಆಸ್ತಿಯಾಗಿದ್ದು, ಅವರ ಸಾಧನೆಯನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಬೆಂಗಳೂರು ಜಿಲ್ಲಾ ಪಂಚಾಯತ್ ಸಂಯುಕ್ತವಾಗಿ ಈ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ.
ಬೆಂಗಳೂರು ವ್ಯಾಪ್ತಿಯಲ್ಲಿ ನೆಲೆಸಿರುವ ಈ ಕೆಳಗಿನ ಶೈಕ್ಷಣಿಕ ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು:
ಜಿಬಿಎ (GBA) ಅಧಿಕೃತ ವೆಬ್‌ಸೈಟ್ ಅಥವಾ ನಿಗದಿತ ಲಿಂಕ್/ಕ್ಯೂಆರ್ ಕೋಡ್ ಮೂಲಕ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಅರ್ಜಿಯಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಗೆ ಸಂಬಂಧಪಟ್ಟ ಶಾಲೆ ಅಥವಾ ಕಾಲೇಜಿನ ಮುಖ್ಯಸ್ಥರಿಂದ (Principal/Headmaster) ದೃಢೀಕರಣ (Attestation) ಪಡೆಯುವುದು ಕಡ್ಡಾಯವಾಗಿದೆ. ವಿದ್ಯಾರ್ಥಿಗಳು ಅಥವಾ ಅವರ ಪೋಷಕರು ಆಗಸ್ಟ್ 26ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿದಾರರು ತಮ್ಮ ದಾಖಲೆಗಳನ್ನು ನೇರವಾಗಿ ಕಚೇರಿಗೆ ಸಲ್ಲಿಸಬಹುದು ಅಥವಾ ಇಮೇಲ್ ಮೂಲಕವೂ ಕಳುಹಿಸಬಹುದಾಗಿದೆ:
ಅರ್ಜಿ ಸಲ್ಲಿಸಿದ ಅರ್ಹ ಸಾಧಕ ವಿದ್ಯಾರ್ಥಿಗಳಿಗೆ ಆಗಸ್ಟ್ 29ರಂದು ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ 'ನಮ್ಮೂರ ಹೆಮ್ಮೆ' ಪೌರ ಸನ್ಮಾನ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬೆಂಗಳೂರಿನ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಪೋಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.