ಮಕ್ಕಳನ್ನು ಶಾಲೆಗೆ ಸೇರಿಸೋ ವಿಚಾರದಲ್ಲಿ ಸರ್ಕಾರದ ನಿರಾಸಕ್ತಿ: ಕೋರ್ಟ್ ತರಾಟೆ

By Kannadaprabha NewsFirst Published Nov 7, 2019, 9:37 AM IST
Highlights

ಮಕ್ಕಳನ್ನು ಶಾಲೆಗೆ ಸೇರಿಸುವಲ್ಲಿ ರಾಜ್ಯ ಸರ್ಕಾರ ಆಸಕ್ತಿ ವಹಿಸಿಲ್ಲ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ಬುಧವಾರ ನಡೆದಿದೆ.

ಬೆಂಗಳೂರು(ನ.07): ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮರಳಿಗೆ ಶಾಲೆಗೆ ಕರೆತರುವಲ್ಲಿ ಸರ್ಕಾರ ಕೊಂಚವೂ ಕಾಳಜಿ ವಹಿಸುತ್ತಿಲ್ಲ ಎಂದು ಹೈಕೋರ್ಟ್ ಬುಧವಾರ ಅಸಮಾಧಾನ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ವಿಚಾರ ಸಂಬಂಧ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸರ್ಕಾರದ ನಡೆಗೆ ಅತೃಪ್ತಿ ವ್ಯಕ್ತಪಡಿಸಿತು.

ಚೊಚ್ಚಲ ಕೃತಿಗೆ ಜೆಸಿಬಿ ಸಾಹಿತ್ಯ ಪ್ರಶಸ್ತಿ ಪಡೆದ ಬೆಂಗಳೂರಿನ ಮಾಧುರಿ

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ನಿಟ್ಟಿನಲ್ಲಿ ಅಗತ್ಯ ಯೋಜನೆ ರೂಪಿಸಿ ಅನುಷ್ಠಾನ ಮಾಡುವಲ್ಲಿ ಸರ್ಕಾರ ಬೇಕಂತಲೇ ವಿಳಂಬ ನೀತಿ ಅನುಸರಿಸುತ್ತಿದೆ. ಶಾಲೆಯಿಂ ದ ಹೊರಗುಳಿದ ಮಕ್ಕಳ ಬಗ್ಗೆ ಕೊಂಚವೂ ಕಾಳಜಿಯಿಲ್ಲ. ಕರ್ನಾಟಕದ ಕೆಲ ಭಾಗಗಳಲ್ಲಿ ಶಾಲೆ ಬಿಟ್ಟ ಮಕ್ಕಳ ಪ್ರಮಾಣ ಹೆಚ್ಚಿದೆ ಎಂದು ಅತೃಪ್ತಿ ವ್ಯಕ್ತಪಡಿಸಿತು.

ವೆಬ್‌ಸೈಟ್‌ನಲ್ಲಿ ದಾಖಲೆ ತಿದ್ದಿ 155 ಸೈಟ್‌ ಮಾರಿದ..!

click me!