Bengaluru: ಆದಾಯ ಮೀರಿ ಆಸ್ತಿ ಗಳಿಕೆ; ಗ್ರಾಪಂ ಕಾರ್ಯದರ್ಶಿಗೆ 6 ವರ್ಷ ಜೈಲು, 90 ಲಕ್ಷ ದಂಡ

Published : Nov 24, 2026, 09:40 AM IST
court

ಸಾರಾಂಶ

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿ ವೀರೇಗೌಡ ಅವರಿಗೆ ನ್ಯಾಯಾಲಯ 6 ವರ್ಷ ಜೈಲು ಶಿಕ್ಷೆ ಹಾಗೂ 91.88 ಲಕ್ಷ ದಂಡ ವಿಧಿಸಿದೆ. ಮತ್ತೊಂದೆಡೆ, ಬಾಗಲೂರು ಮುಖ್ಯರಸ್ತೆಯಲ್ಲಿ ಬೈಕ್‌ನಿಂದ ಆಯ ತಪ್ಪಿ ಬಿದ್ದು ಸಾಫ್ಟ್‌ವೇರ್‌ ಇಂಜಿನಿಯರ್‌ ಕದಿರೇಶನ್‌ ಮೃತಪಟ್ಟಿದ್ದಾರೆ.

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಯೊಬ್ಬರಿಗೆ ನಗರದ 79ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ 6 ವರ್ಷ ಜೈಲು ಶಿಕ್ಷೆ ಹಾಗೂ 91.88 ಲಕ್ಷ ರು. ದಂಡ ವಿಧಿಸಿ ಸೋಮವಾರ ಆದೇಶಿಸಿದೆ.

ಬೆಂಗಳೂರಿನಲ್ಲಿ ಭ್ರಷ್ಟ ಅಧಿಕಾರಿಗೆ ಜೈಲು

ಬೆಂಗಳೂರು ಪೂರ್ವ ತಾಲೂಕು ಮಂದೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್‌-3 ವೀರೇಗೌಡ ಶಿಕ್ಷೆಗೆ ಗುರಿಯಾದ ಸರ್ಕಾರಿ ಅಧಿಕಾರಿ. ಇವರು ಈ ಹಿಂದೆ ಬೆಂಗಳೂರು ಉತ್ತರ ತಾಲೂಕು ರಾಜಾನುಕುಂಟೆ ಗ್ರಾಮ ಪಂಚಾಯಿತಿ ಗ್ರಾಮ ಲೆಕ್ಕಾಧಿಕಾರಿ ಆಗಿದ್ದರು. ಈ ಅವಧಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಬೆಂಗಳೂರು ನಗರ ಪೊಲೀಸ್‌ ಠಾಣೆಯಲ್ಲಿ 2008ರಲ್ಲಿ ಪ್ರಕರಣ ದಾಖಲಾಗಿತ್ತು.

ವೀರೇಗೌಡ ಶಿಕ್ಷೆಗೆ ಗುರಿಯಾದ ಸರ್ಕಾರಿ ಅಧಿಕಾರಿ

ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು 2011ರಲ್ಲಿ ನ್ಯಾಯಾಲಯಕ್ಕೆ ವೀರೇಗೌಡ ಅವರ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆರೋಪಿ ವೀರೇಗೌಡರ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಅಪರಾಧಿಯು ದಂಡ ಪಾವತಿಸಲು ವಿಫಲವಾದರೆ, 1 ವರ್ಷ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣದಲ್ಲಿ ಲೋಕಾಯುಕ್ತ ಪರ ಬದರೀನಾಥ್‌ ಅವರು ವಾದ ಮಂಡಿಸಿದ್ದರು ಎಂದು ಲೋಕಾಯುಕ್ತ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಬೈಕಿನಿಂದ ಆಯ ತಪ್ಪಿ ಬಿದ್ದು ಟೆಕ್ಕಿಯ ಸಾವು

ಬೈಕ್‌ನಿಂದ ಆಯ ತಪ್ಪಿ ಬಿದ್ದು ಸಾಫ್ಟ್‌ವೇರ್‌ ಇಂಜಿನಿಯರ್‌ ಮೃತಪಟ್ಟಿರುವ ಘಟನೆ ಬಾಗಲೂರು ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಬಾಗಲೂರು ನಿವಾಸಿ ಕದಿರೇಶನ್‌ (45) ಮೃತ ದುರ್ದೈವಿ. ಬಾಗಲೂರಿನ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಅವರು, ನಗರದಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು.

ಸ್ನೇಹಿತರನ್ನು ಭೇಟಿಯಾಗಲು ಬೈಕ್‌ನಲ್ಲಿ ಭಾನುವಾರ ರಾತ್ರಿ ಹೋಗುವಾಗ ಈ ಅವಘಡ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅತಿವೇಗದಲ್ಲಿ ಬೈಕ್‌ ಚಾಲನೆ ಮಾಡುತ್ತಿದ್ದ ಕದಿರೇಶನ್‌, ಬಾಗಲೂರು ಮುಖ್ಯರಸ್ತೆಯಲ್ಲಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಮೃತಪಟ್ಟರು. ಚಿಕ್ಕಜಾಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Read more Articles on
click me!

Recommended Stories

ಹೈಕೋರ್ಟ್‌ನಲ್ಲಿ ವಕೀಲರ ಗದ್ದಲ: ಬೇಷರತ್ ಕ್ಷಮಾಪಣೆ ಹಿನ್ನೆಲೆ ಹೈಕೋರ್ಟ್‌ನಿಂದ ನ್ಯಾಯಾಂಗ ನಿಂದನೆ ಕೇಸ್ ಕ್ಲೋಸ್, ಏನಿದು ಪ್ರಕರಣ?
ಕೆಂಪೇಗೌಡ ಬಡಾವಣೆಯಲ್ಲೀಗ ಕಳ್ಳರ ಕಾಟ, 150+ ಮನೆಗಳಲ್ಲಿ ಕಟ್ಟಡ ಸಾಮಗ್ರಿಗಳು, ಯಂತ್ರೋಪಕರಣ, ತಾಮ್ರದ ವೈರ್‌ ಕಳ್ಳತನ