ರಾಜ್ಯದಲ್ಲಿ 48 ಗಂಟೆಯಲ್ಲಿ ಭಾರಿ ಮಳೆ : ಬೆಂಗಳೂರಿಗೆ ‘ಎಲ್ಲೋ ಅಲರ್ಟ್‌’?

Published : Oct 09, 2019, 08:41 AM IST
ರಾಜ್ಯದಲ್ಲಿ 48 ಗಂಟೆಯಲ್ಲಿ ಭಾರಿ ಮಳೆ  : ಬೆಂಗಳೂರಿಗೆ ‘ಎಲ್ಲೋ ಅಲರ್ಟ್‌’?

ಸಾರಾಂಶ

ರಾಜ್ಯದಲ್ಲಿ ಹಲವೆಡೆ ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇನ್ನು ಬೆಂಗಳೂರಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 

ಬೆಂಗಳೂರು [ಅ.09]:  ಮುಂದಿನ 48 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಹಾಗೂ ತುಮಕೂರು, ಮಲೆನಾಡು ಭಾಗದ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ 65ರಿಂದ 115 ಮಿ.ಮೀ. ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ‘ಎಲ್ಲೋ ಅಲರ್ಟ್‌’ಎಚ್ಚರಿಕೆ ನೀಡಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜ್ಯದ ಹಲವೆಡೆ ಈಗಾಗಲೇ ಅಕ್ಟೋಬರ್ ಮಳೆ ಸುರಿಯುತ್ತಿದ್ದು, ಜನಜೀವನಕ್ಕೆ ಸಮಸ್ಯೆ ತಂದೊಡ್ಡಿದೆ. ಇನ್ನು ವಿಜಯ ದಶಮಿ ಸಂಭ್ರಮಕ್ಕೂ   ಕೂಡ ರಾಜ್ಯದ ಹಲವೆಡೆ ಮಳೆ ಅಡ್ಡಿಯುಂಟು ಮಾಡಿತ್ತು.

PREV
click me!

Recommended Stories

ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!
ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!