
ಬೆಂಗಳೂರು (ಅ.10) ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ ಹಾಗೂ ಪ್ರವಾಹ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಭೂಕುಸಿತದ ಪರಿಣಾಮ ಮನೆಗಳು, ಗ್ರಾಮಗಳೇ ನಾಶವಾಗಿದೆ. ಇತ್ತ ಸೇತುವೆ ಕೊಚ್ಚಿ ಹೋಗಿದೆ. ಕಾಣೆಯಾದವರ ಸಂಖ್ಯೆಯೂ ಹೆಚ್ಚಾಗಿದೆ. ರಕ್ಷಣಾ ಕಾರ್ಯಗಳು ಭರದಿಂದ ಸಾಗಿದೆ. ಭಾರತದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಕರ್ನಾಟಕಕ್ಕೂ ಎಚ್ಚರಿಕೆ ನೀಡಿದೆ. ಅಕ್ಟೋಬರ್ 11ರ ವರೆಗೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಬಾರಿ ಮಳೆಯಾಗಲಿದೆ ಎಂದಿದೆ. ಇದೇ ವೇಳೆ ಬೆಂಗಳೂರು ಮಳೆ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 11ರ ವರೆಗೆ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಸಂಜೆಯಾಗುತ್ತಿದ್ದಂತೆ ಮಳೆಯಾಗಲಿದೆ. ಈ ಪೈಕಿ ಕೆಲ ದಿನ ಮಳೆ ಪ್ರಮಾಣ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇತ್ತ ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಅಕ್ಟೋಬರ್ 4ರ ರಾತ್ರಿ ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದೆ. ಇಂದು (ಅ.05) ಕೂಡ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹವಾಮಾನ ಇಲಾಖೆ ಸೂಚನೆ ಪ್ರಕಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದಿದೆ. ಈ ಪೈಕಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರುಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇತ್ತ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಭಾಗದಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದೆಲ್ಲೆಡೆ ಭಾರಿ ಮಳೆಯಾಗಿದೆ. ಇತ್ತ ಬೆಂಗಳೂರಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ. ಆದರೆ ಒಟ್ಟು ಮಳೆ ಪ್ರಮಾಣದಲ್ಲಿ ಈ ಬಾರಿ ಕುಸಿತವಾಗಿದೆ. ಬೆಂಗಳೂರಿನಲ್ಲಿ ಜೂನ್ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳವರೆಗೆ ಸರಾಸರಿ 452.4 ಎಂಎಂ ಮಳೆಯಾಗುತ್ತದೆ. ಆದರೆ ಈ ಬಾರಿ ಈ ಅವಧಿಯಲ್ಲಿ 396.5 ಎಂಎಂ ಮಳೆಯಾಗಿದೆ. ಅಂದರೆ ಈ ವರ್ಷ ಶೇಕಡಾ 12ರಷ್ಟು ಮಳೆ ಕೊರತೆಯಾಗಿದೆ. ಆದರೆ ಈ ವರ್ಷ ಮೇ ಅಂತ್ಯದಲ್ಲೇ ಭಾರಿ ಮಳೆಯಾಗಿದೆ. ಜೂನ್‌ನಿಂದ ಸೆಪ್ಟೆಂಬರ್ ವರೆಗಿನ ಉತ್ತಮ ಮಳೆ ಅಂತರ್ಜಲ ಮಟ್ಟೆ ಏರಿಕೆ ಮಾಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ಹಲೆವೆಡೆ ಮಳೆಯಾಗುತ್ತಿದ್ದರೂ, ಟಂಪರೇಚರ್‌ನಲ್ಲಿ ಭಾರಿ ವ್ಯತ್ಯಸವಾಗಿಲ್ಲ
ಅಕ್ಟೋಬರ್ 15ರ ಬಳಿಕ ಬೆಂಗಳೂರಿನಲ್ಲಿ ಒಣ ಹವೆ ಮುಂದುವರಿಯಲಿದೆ. ಬಿಸಿಲಿನ ತಾಪ ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ ಹಾಗೂ ಪ್ರವಾಹಕ್ಕೆ 14 ಮಂದಿ ಬಲಿಯಾಗಿದ್ದಾರೆ. ಸಾವಿರಾರು ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಡಾರ್ಜಲಿಂಗ್ ಭಾರಿ ಪ್ರವಾಹ ಹಾಗೂ ಭೂಕುಸಿತಕ್ಕೆ ತತ್ತರಿಸಿದೆ. ಹಲವು ಮನೆಗಳು ಭೂಕುಸಿತದಿಂದ ಮಣ್ಣಿನಡಿ ಸಿಲುಕಿದೆ.