Bengaluru: ಮನೆಯಿಂದ ಹೊರಬರುವ ಮುನ್ನ ಹುಷಾರ್; ಈ ಮಾರ್ಗದಲ್ಲಿ ಸಂಚಾರ ಬಂದ್, ಪಾರ್ಕಿಂಗ್ ಬ್ಯಾನ್!

Published : Oct 17, 2026, 01:00 PM IST
Bengaluru Traffic

ಸಾರಾಂಶ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ನಿರ್ಣಾಯಕ ಟಿ20 ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತಲಿನ ಸಂಚಾರ ಮಾರ್ಗ ಮತ್ತು ಪಾರ್ಕಿಂಗ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಅಲ್ಲದೆ, ಕ್ರಿಕೆಟ್ ಅಭಿಮಾನಿಗಳ ಅನುಕೂಲಕ್ಕಾಗಿ ನಮ್ಮ ಮೆಟ್ರೋ ರೈಲು ಸಂಚಾರದ ಸಮಯವನ್ನು ತಡರಾತ್ರಿಯವರೆಗೆ ವಿಸ್ತರಿಸಲಾಗಿದೆ.

ಬೆಂಗಳೂರು: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಅಂತಿಮ ಪಂದ್ಯ ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯಲ್ಲಿ 2-2 ಸಮಬಲ ಸಾಧಿಸಿದ್ದು, ಇಂದಿನ ಪಂದ್ಯ ಭಾರೀ ಕುತೂಹಲ ಮೂಡಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಹಿನ್ನೆಲೆ, ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ಮಾರ್ಗ ಮತ್ತು ಪಾರ್ಕಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು

  • ​ಕ್ವೀನ್ಸ್ ರಸ್ತೆಯ ಎರಡು ಬದಿಯಲ್ಲಿ, ಬಾಲೇಕ್ಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ಮತ್ತು ಕ್ವೀನ್ಸ್ ವೃತ್ತದಿಂದ ಸಿ.ಟಿ.ಓ ಜಂಕ್ಷನ್ ವರೆಗೆ
  • ​ಎಂ.ಜಿ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ಅನಿಲ್‌ಕುಂಬ್ಳೆ ವೃತ್ತದವರೆಗೆ ಮತ್ತು ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ.
  • ​ಲಿಂಕ್ ರಸ್ತೆ – ಎಂ.ಜಿ ರಸ್ತೆಯಿಂದ ಕ್ವೀನ್ಸ್ ರಸ್ತೆ ವರೆಗೆ.
  • ​ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ.
  • ​ಸೆಂಟ್ರಲ್ ಸ್ಕ್ವೇರ್ ರಸ್ತೆಯಲ್ಲಿ ರಸ್ತೆಯ ಎರಡೂ ಕಡೆ.
  • ​ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ. ವೃತ್ತದಿಂದ ಮಣಿಪಾಲ್ ವೃತ್ತದವರೆಗೆ ಎರಡೂ ಕಡೆ,
  • ಕಾಮರಾಜ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಡಿಕನ್ಸನ್ ಜಂಕ್ಷನ್ ವರೆಗೆ.
  • ​ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಆಶೀರ್ವಾದಂ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ,
  • ಎಸ್.ಬಿ.ಐ ಜಂಕ್ಷನ್‌ನಿಂದ ಕ್ಯಾಶ್ ಫಾರ್ಮಸಿ ಜಂಕ್ಷನ್‌ವರೆಗೆ.
  • ​ಮ್ಯೂಸಿಯಂ ಕ್ರಾಸ್ ರಸ್ತೆ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ.
  • ​ಕಸ್ತೂರಬಾ ರಸ್ತೆಯಲ್ಲಿ, ಹಡ್ಡನ್‌ ವೃತ್ತ ದಿಂದ ಕ್ವೀನ್ಸ್‌ವೃತ್ತದವರೆಗೆ.
  • ​ಕಬ್ಬನ್‌ಪಾರ್ಕ್ ಒಳಗಿನಗಿನ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಜಲಭವನ ಮುಂಭಾಗ, ಫೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ.
  • ​ಲಾವೆಲ್ಲಿ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ ವಾಹನಗಳ ನಿಲುಗಡೆ ನಿಷೇಧ
  • ​ವಿಠಲ್ ಮಲ್ಯ ರಸ್ತೆ, ಎ) ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ ಬಿ) ಸಿದ್ದಲಿಂಗಯ್ಯ ವೃತ್ತದಿಂದ ಆರ್‌.ಆರ್.ಎಂ.ಆರ್ ವೃತ್ತದವರೆಗೆ.

ವಾಹನ ನಿಲುಗಡೆ ಅವಕಾಶ ಕಲ್ಪಿಸಿರುವ ಸ್ಥಳಗಳು (ಬೆಳಿಗ್ಗೆ 11-00 ರಿಂದ ರಾತ್ರಿ 09-00)

  • ​ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಮತ್ತು ಯು.ಬಿ.ಸಿಟಿ ನಿಲುಗಡೆ ಸ್ಥಳ
  • ​ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿ
  • ​ಫ್ರೀಡಂ ಪಾರ್ಕ್ ಎಂ.ಎಲ್.ಸಿ.ಪಿ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ..
  • ​ಸೆಂಟ್ ಜೋಸೆಫ್ (ಯುರೋಪಿಯನ್) ಬಾಲಕರ ಶಾಲೆ ಮೈದಾನ (ಮ್ಯೂಸಿಯಂ ರಸ್ತೆ) ನಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ..
  • ​ಬಂದೋ ಬಸ್ತ್ ನಿಯೋಜನೆ ಮಾಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವಾಹನಗಳನ್ನು
  • ಕಬ್ಬನ್‌ಪಾರ್ಕ್ ಒಳಗಿನಗಿನ ಟೆನ್ನಿಸ್ ಕ್ಲಬ್ ರಸ್ತೆಯಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
  • ಚಿನ್ನಸ್ವಾಮಿ ಕ್ರೀಡಾಂಗಣ ಪ್ರವೇಶಿಸಲು ಹಾಗೂ ಹೊರಗೆ ಹೋಗಲು ಅವಕಾಶ ಕಲ್ಪಿಸಿರುವ ಸ್ಥಳಗಳು
  • ​ಗೇಟ್ ನಂ-1 ರಿಂದ ಗೇಟ್ ನಂ-3 ಮತ್ತು ಗೇಟ್ ನಂ ಇ-18, ಇ-19, ಇ-22 ಹಾಗೂ ಇ-23 ಕಬ್ಬನ್ ರಸ್ತೆಯಲ್ಲಿದ್ದು, ಈ ಗೇಟ್‌ಗಳ ಮುಖಾಂತರ ಪ್ರವೇಶಿಸಬಹುದಾಗಿದೆ.
  • ​ಗೇಟ್ ನಂ. ಇ-11 ರಿಂದ ಗೇಟ್ ನಂ ಇ-17 ರವರೆಗೆ ಲಿಂಕ್ ರಸ್ತೆಯಲ್ಲಿದ್ದು ಅನಿಲ್ ಕುಂಬ್ಳೆ ವೃತ್ತ ಮತ್ತು ಬಿ.ಆರ್.ವಿ. ವೃತ್ತದ ಕಡೆಯಿಂದ ಪ್ರವೇಶಿಸಬಹುದಾಗಿದೆ.
  • ​ಕ್ವೀನ್ಸ್ ರಸ್ತೆಯಲ್ಲಿ ಗೇಟ್ ನಂ. ಇ-07 ಮತ್ತು ಇ-08 ರಲ್ಲಿ ಪ್ರವೇಶಿಸದ್ದು, ಗೇಟ್ ನಂ- ಇ-09, ಇ-9ಎ ಗೇಟ್‌ನಲ್ಲಿ ನಿರ್ಗಮಿಸಲು ಮಾತ್ರ ಅವಕಾಶವಿರುತ್ತದೆ.
  • ​ಕ್ವೀನ್ಸ್ ರಸ್ತೆಯ ಗೇಟ್ ನಂ-210 ರಲ್ಲಿ ಆಟಗಾರರು, ಸಹ ಆಟಗಾರರು ಹಾಗೂ ಸ್ಟೇಡಿಯಂ ಅಧಿಕಾರಿಗಳು ಬಿ.ಸಿ.ಸಿ ಐ ರವರಿಗೆ ಅವಕಾಶವಿರುತ್ತದೆ.

ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್‌ಗಳು ಪಿಕ್ ಅಪ್ ಮತ್ತು ಡ್ರಾಪ್ ಮಾಡುವ ಸ್ಥಳಗಳು

  • ಪಿಕ್ ಅಪ್ - BRV GROUND, ಡ್ರಾಪ್ - GATE NO 6

ಕ್ರಿಕೆಟ್ ಪ್ರೇಮಿಗಳಿಗೆ ನಮ್ಮ ಮೆಟ್ರೋದಿಂದ ಗುಡ್ ನ್ಯೂಸ್

ಬೆಂಗಳೂರಿನಲ್ಲಿ ಇಂದು ಕ್ರಿಕೆಟ್ ಪಂದ್ಯ ಇರುವ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ ಮೆಟ್ರೋ ರೈಲು ಸೇವೆಯನ್ನು ವಿಸ್ತರಣೆ ಮಾಡಿದೆ. ಮುಂಜಾನೆ 1.15 ರವರೆಗೂ ಮೆಟ್ರೋ ಲಭ್ಯವಾಗಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ತಡರಾತ್ರಿವರೆಗೂ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲುಗಳ ಸಂಚಾರ ಸಮಯ ವಿಸ್ತರಣೆ ಮಾಡಲಾಗಿದೆ. ಆರ್.ವಿ. ರಸ್ತೆಯಿಂದ ರಾತ್ರಿ 1:30ಕ್ಕೆ ಕೊನೆಯ ರೈಲು ಸಂಚಾರ ನಡೆಯಲಿದೆ. ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಗೆ ರಾತ್ರಿ 1 ಗಂಟೆಗೆ ಕೊನೆಯ ರೈಲು ಸಂಚಾರ ನಡೆಸಲಿದೆ. BMRCL ನಿಂದ ಪತ್ರಿಕಾ ಪ್ರಕಟಣೆ ನೀಡಿದ್ದು, ಎರಡು ದಿಕ್ಕಿನ ಮೆಟ್ರೋ ಪ್ರಯಾಣಕ್ಕೆ QR ಕೋಡ್ ವ್ಯವಸ್ಥೆ ಮಾಡಲಾಗಿದೆ. ನಮ್ಮ ಮೆಟ್ರೋ ಪ್ರಯಾಣ ಸುಗಮಗೊಳಿಸಲು QR ಕೋಡ್ ಟಿಕೆಟ್ ನೀಡಲಾಗಿದೆ.

PREV
Read more Articles on
click me!

Recommended Stories

ಎಐ ಆಧಾರಿತ ಉದ್ಯೋಗ ಕೌಶಲ್ಯ: ಬೆಂಗಳೂರಿನಲ್ಲಿ 'ಪ್ರಾಜೆಕ್ಟ್ ಹೆಲಿಕ್ಸ್' ಅನಾವರಣಗೊಳಿಸಿದ ಕೋರ್ಸೆರಾ, ಐಐಎಂ-ಬಿ ಜೊತೆ ಒಪ್ಪಂದ
2 ವರ್ಷವಾದರೂ ಸಿಗದ ಕೆಲಸ… ಬೆಂಗಳೂರಿನ ಮನೆ, ಆಸ್ತಿ ಮಾರಿ ಮಾಡಿದ್ದೇನು 40ರ ಟೆಕ್ಕಿ!