ಎಲ್ಲ ಸವಾಲು ಮೆಟ್ಟಿನಿಂತು ಪಕ್ಷ ಕಟ್ಟುತ್ತೇವೆ: ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಗುಡುಗಿದ ದೇವೇಗೌಡ

Kannadaprabha News, Ravi Janekal |   | Kannada Prabha
Published : Nov 22, 2025, 12:14 PM IST
JDS party meeting Bengaluru

ಸಾರಾಂಶ

HD Kumaraswamy on Siddaramaiah: ಹಲವು ಕಠಿಣ ಸವಾಲುಗಳ ನಡುವೆಯೂ ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಮರುಕಟ್ಟುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದರು.

 ಬೆಂಗಳೂರು (ನ.22): ಅದೆಷ್ಟೋ ಕಠಿಣ ಸವಾಲುಗಳನ್ನು ಎದುರಿಸಿ ನಾವು ಜೆಡಿಎಸ್ ಪಕ್ಷವನ್ನು ಕಟ್ಟಿದ್ದೇವೆ. ಮುಂದೆಯೂ ಇಂತಹ ಸವಾಲುಗಳನ್ನು ಮೆಟ್ಟಿನಿಂತು ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತೇವೆ. ಯಾರಿಗೂ ಯಾವ ರೀತಿಯ ಅನುಮಾನ ಬೇಕಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಜೆಡಿಎಸ್ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆ:

ಶುಕ್ರವಾರ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷವನ್ನು ಬಹಳಷ್ಟು ನಾಯಕರು ಬಿಟ್ಟು ಹೋಗಿದ್ದಾರೆ. ಈಗಿನ ಕರ್ನಾಟಕದ ಮುಖ್ಯಮಂತ್ರಿ ಸೇರಿ. ನಮ್ಮ ಪಕ್ಷದಿಂದಲೇ ರಾಜಕೀಯ ಬದುಕು ಕಂಡುಕೊಂಡು ಸರ್ವರೀತಿಯಲ್ಲಿಯೂ ಶಕ್ತಿ ತುಂಬಿಕೊಂಡು ಬಿಟ್ಟು ಹೋದರು. ಆದರೂ ಬಹಳ ಸವಾಲಿನ ನಡುವೆ ಪಕ್ಷವನ್ನು ಕಟ್ಟಿ ಬೆಳೆಸಿಕೊಂಡು ಬಂದಿದ್ದೇವೆ ಎಂದು ಹೇಳಿದರು.

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಜೆಡಿಎಸ್ ಗಟ್ಟಿಯಾಗಿದೆ:

ನಮ್ಮ ಪಕ್ಷದ ರಾಜ್ಯ ಮತ್ತು ರಾಜ್ಯ ಮಟ್ಟದಲ್ಲಿ ಹಲವಾರು ಸಲ ಇಬ್ಭಾಗವಾಗಿದೆ. ನಮ್ಮ ಪಕ್ಷಕ್ಕೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಗಟ್ಟಿ ನೆಲೆ ಇದೆ. ಬಲಿಷ್ಠವಾಗಿ ಕಟ್ಟಬಹುದು. ಯಾವುದೇ ಅಂಜಿಕೆ ಇಲ್ಲದೆ ನಾವು ಪಕ್ಷವನ್ನು ಕಟ್ಟುತ್ತಾ ಹೋಗುತ್ತೇವೆ ಎಂದು ಅವರು ಶಪಥ ಮಾಡಿದರು.

ನಾವು ಕೆಲವು ವರ್ಷಗಳಿಂದ ವಿವಿಧ ಪಕ್ಷಗಳ ಜತೆ ಅಧಿಕಾರ ಹಂಚಿಕೊಂಡಿದ್ದಾರೆ. ಕುಮಾರಸ್ವಾಮಿ ಅವರು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಜತೆ ಸೇರಿ ಕರ್ನಾಟಕದಲ್ಲಿ ಅಧಿಕಾರ ನಡೆಸಿದ್ದಾರೆ. ಅವರು ಎರಡು ಸಲ ಮುಖ್ಯಮಂತ್ರಿ ಆಗಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಅವರು ಸಾಲಮನ್ನಾ ಸೇರಿದಂತೆ ಅನೇಕ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಕುಮಾರಸ್ವಾಮಿ ಅವರಿಗೆ ಆಡಳಿತದಲ್ಲಿ ಅಗಾಧವಾದ ಅನುಭವ ಇದೆ. ಈಗ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ದೇವೇಗೌಡರು ಹೇಳಿದರು.

ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ: ಎಚ್ಡಿಕೆ

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮಾತನಾಡಿ, ದೇವೇಗೌಡರು ಈ ರಾಜ್ಯಕ್ಕೆ, ರಾಷ್ಟ್ರಕ್ಕೆ ಎಷ್ಟು ಕೊಡುಗೆ ನೀಡಿದ್ದಾರೆ ಎನ್ನುವುದು ಜನರಿಗೆ ಗೊತ್ತಿದೆ. ಹಾಗೆಯೇ ಎಷ್ಟು ಜನ ನಾಯಕರನ್ನು ಬೆಳೆಸಿದರು, ಎಷ್ಟು ಸಮುದಾಯಗಳಿಗೆ ಶಕ್ತಿ ತುಂಬಿದರು ಎಂಬ ಇತಿಹಾಸವನ್ನು ಅಳಿಸಲು ಯಾರಿಂದಲೂ ಸಾಧ್ಯ ಇಲ್ಲ ಎಂದರು.

ಈ ಪಕ್ಷದಲ್ಲಿ ರಾಜಕೀಯ ಜನ್ಮ ಪಡೆದು ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿ ಬೇರೆ ಪಕ್ಷಕ್ಕೆ ಜಂಪ್ ಮಾಡಿದ ವ್ಯಕ್ತಿ, ನನ್ನ ರಾಜಕೀಯ ಉದ್ಧಾರಕ್ಕೆ ಮತ್ತೊಬ್ಬರು ಕಾರಣರು ಅಂತ ಕೋಲಾರದಲ್ಲಿ ಹೇಳಿದ್ದರು. ನಿನ್ನೆ ಚಾಮರಾಜನಗರದಲ್ಲಿ ಇದೇ ವ್ಯಕ್ತಿ ನಾನು ಜೆಡಿಎಸ್‌ನಲ್ಲಿ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಎರಡು ಸಲ ಡಿಸಿಎಂ ಮಾಡಿದ್ದು ಯಾರು? ನಾವು ಅವರನ್ನು ಡಿಸಿಎಂ ಮಾಡದೇ ಇಲ್ಲದಿದ್ದರೆ ಕಾಂಗ್ರೆಸ್ ಮೂಸಿ ನೋಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಪ್ರಸ್ತಾಪಿಸದೇ ಟೀಕಿಸಿದರು.

PREV
Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ