ಉಪ ಚುನಾವಣೆ ಶಿವಾಜಿನಗರಕ್ಕೆ ಸರವಣ ಬಿಜೆಪಿ ಅಭ್ಯರ್ಥಿ ?

Published : Nov 14, 2019, 09:08 AM IST
ಉಪ ಚುನಾವಣೆ ಶಿವಾಜಿನಗರಕ್ಕೆ ಸರವಣ ಬಿಜೆಪಿ ಅಭ್ಯರ್ಥಿ ?

ಸಾರಾಂಶ

ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಶಿವಾಜಿನಗರಕ್ಕೆ ಈಗಾಗಲೇ ಬಿಜೆಪಿ ಅಭ್ಯರ್ಥಿ ಫಿಕ್ಸ್ ಆಗಿದ್ದಾರೆ. 

ಬೆಂಗಳೂರು (ನ. 14): ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಡಿಸೆಂಬರ್ 5 ರಂದು ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ವಿವಿಧ ಪಕ್ಷಗಳು ಬ್ಯುಸಿಯಾಗಿವೆ. 

ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಗೆಲುವಿಗಾಗಿ ಕಸರತ್ತು ನಡೆಸುತ್ತಿವೆ. ಇನ್ನು ರೋಷನ್ ಬೇಗ್ ಅನರ್ಹತೆಯಿಂದ ತೆರವಾದ   ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾಗಿ ಮುಖಂಡ ಸರವಣ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

ಐಎಂಎ ಪ್ರಕರಣದ ಆರೋಪದ ಹಿನ್ನೆಲೆ ಯಲ್ಲಿ ಅನರ್ಹ ಶಾಸಕ ರೋಷನ್ ಬೇಗ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ನಿರಾಕರಿಸಿದ್ದರಿಂದ ಅಲ್ಲಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.  ಈ ನಿಟ್ಟಿನಲ್ಲಿ ಸರವಣ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬುಧವಾರವಷ್ಟೇ ಸುಪ್ರೀಂ ಕೋರ್ಟ್ ತೀರ್ಪು ನೀಡಿ ರಾಜ್ಯದ 17 ಶಾಸಕರ ಅನರ್ಹತೆಯನ್ನು ಎತ್ತಿಹಿಡಿದ್ದು, ಉಪ ಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ. 

ರಾಜ್ಯದ ಒಟ್ಟು 15 ಕ್ಷೇತ್ರಗಗಳಿಗೆ ಡಿಸೆಂಬರ್ 5 ರಂದು ಉಪ ಚುಣಾವಣೆ ನಡೆಯಲಿದ್ದು, ಡಿಸೆಂಬರ್ 9ಕ್ಕೆ ಫಲಿತಾಂಶ ಪ್ರಕಟವಾಗಿದೆ.

PREV
click me!

Recommended Stories

ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!
ಆತಂಕದ ವಿಷಯ: ಬೆಂಗಳೂರಿನಲ್ಲಿ 11 ವರ್ಷದ ಮಕ್ಕಳಿಗೂ ಡ್ರಗ್ಸ್‌ ಚಟ!