ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲ ಡಾ. ನಂಜುಂಡಾ ರೆಡ್ಡಿ ಇನ್ನಿಲ್ಲ..

Published : Mar 10, 2023, 03:08 PM ISTUpdated : Mar 10, 2023, 03:10 PM IST
ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲ ಡಾ. ನಂಜುಂಡಾ ರೆಡ್ಡಿ  ಇನ್ನಿಲ್ಲ..

ಸಾರಾಂಶ

ಕರ್ನಾಟಕ ನ್ಯಾಯಾಲಯದ ಹಿರಿಯ ವಕೀಲರಾದ ಡಾ. ನಂಜುಂಡ ರೆಡ್ಡಿ ನಿಧನರಾಗಿದ್ದಾರೆ.  

ಬೆಂಗಳೂರು: ಕರ್ನಾಟಕ ನ್ಯಾಯಾಲಯದ ಹಿರಿಯ ವಕೀಲರಾದ ಡಾ. ನಂಜುಂಡ ರೆಡ್ಡಿ ನಿಧನರಾಗಿದ್ದಾರೆ.  ವಕೀಲರಾಗಿ ಸುಮಾರು ನಾಲ್ಕು ದಶಕಗಳ ಅನುಭವ ಹೊಂದಿರುವ ರೆಡ್ಡಿ ಅವರು ಸಾಂವಿಧಾನಿಕ ಕಾನೂನು, ನಾಗರಿಕ ವಿಚಾರಗಳು ಹಾಗೂ ಕ್ರಿಮಿನಲ್ ವಿಚಾರ ಹಾಗೂ ಚುನಾವಣಾ ವಿಷಯಗಳಲ್ಲಿ ಪರಿಣತರಾಗಿದ್ದರು. ನಿನ್ನೆ ನಿಧನರಾದ ಅವರ ಪಾರ್ಥಿವ ಶರೀರವನ್ನು  ಅವರ ಹುಟ್ಟೂರು ಗಡಿದಂ ಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು.  ಮೂಲತಃ  ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗಡಿದಂ ಗ್ರಾಮದವರಾದ ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವಕೀಲಿಕೆಯ ಅನುಭವ ಹೊಂದಿದ್ದು,  ಕರ್ನಾಟಕ ಹೈಕೋರ್ಟ್‌ ವಕೀಲರಾಗಿದ್ದರು. 

ವೃದ್ಧನ ಶಿಕ್ಷೆಯನ್ನು ಕಡಿತಗೊಳಿಸಿ, ಅಂಗನವಾಡಿಯಲ್ಲಿ ಉಚಿತ ಸೇವೆ ಸಲ್ಲಿಸುವಂತೆ ವಿಭಿನ್ನ ಶಿಕ್ಷೆ ನೀಡಿದ ಹೈಕೋರ್ಟ್!

ಹಲವು ವರ್ಷಗಳ ಹಿಂದೆ ಆಯುಧಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ ಪ್ರಕರಣದ ಆರೋಪಿಯ ಶಿಕ್ಷೆಯನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಿ ಕರ್ನಾಟಕ ಹೈಕೋರ್ಟ್ (Karnataka High coourt) ವಿಭಿನ್ನ ರೀತಿಯಲ್ಲಿ ಶಿಕ್ಷೆ ವಿಧಿಸಿರುವ ಅಪರೂಪದ ಪ್ರಸಂಗ ನಡೆದಿದೆ. 2008ರಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwala) ತಾಲೂಕಿನ ಐತಪ್ಪ ನಾಯ್ಕ (81) ಎಂಬಾತನಿಗೆ  ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ 2 ವರ್ಷ ಶಿಕ್ಷೆ ವಿಧಿಸಿತ್ತು. ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಮೂರು ದಿನಗಳಿಗೆ ಇಳಿಸಿ ಒಂದು ವರ್ಷ ಅಂಗನವಾಡಿಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುವಂತೆ ಆದೇಶ ನೀಡಿದೆ.

ಲೋಕಾಯುಕ್ತ ವಿಚಾರಣೆಗೆ ಮಾಡಾಳು ಅಸಹಕಾರ: ಸಮರ್ಪಕ ಉತ್ತರ ನೀಡದ ಶಾಸಕ

2008ರಲ್ಲಿ ವಯೋವೃದ್ಧ ಐತಪ್ಪ ನಾಯ್ಕ ವ್ಯಕ್ತಿಯೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಐತಪ್ಪನನ್ನು ಪೊಲೀಸರು ಬಂಧಿಸಿದ್ದರು. ಅದರಂತೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆದರೆ ಮಕ್ಕಳಿಲ್ಲದ ಕಾರಣ ಪತ್ನಿಯನ್ನು ನೋಡಿಕೊಳ್ಳಬೇಕಾದ ಕಾರಣ ವೃದ್ಧ ಐತಪ್ಪ ನಾಯ್ಕ ಶಿಕ್ಷೆ ಕಡಿತಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್​ನಲ್ಲಿ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ಪೀಠ, ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡಿತು. ಆರೋಪಿ ಪರ ವಕೀಲ ದಿನೇಶ್ ಕುಮಾರ್ ಕೆ.ರಾವ್ ವಾದ ಮಂಡಿಸಿದರು.  ನ್ಯಾಯಾಧೀಶರ ಮುಂದೆ ವಾದ ಮಂಡಿಸಿದ ವಕೀಲ ದಿನೇಶ್ ಕುಮಾರ್ ಆರೋಪಿ   ತಮ್ಮ ತಪ್ಪನ್ನು ಒಪ್ಪಿಕೊಳ್ಳಲು ಮತ್ತು ಸಮಾಜ ಸೇವೆ ಮಾಡಲು ಸಿದ್ಧರಾಗಿದ್ದಾರೆ. ಹಾಗಾಗಿ ಶಿಕ್ಷೆಯನ್ನು ಕಡಿಮೆ ಮಾಡುವಂತೆ ಮನವಿ ಮಾಡಿದರು.  

ನಟಿ ಸನ್ನಿ ಲಿಯೋನ್​ಗೆ ಅನಗತ್ಯ ಕಿರುಕುಳ ನೀಡಲಾಗುತ್ತಿದೆ: ಕೇರಳ ಹೈ ಕೋರ್ಟ್​

ವಕೀಲರ ವಾದವನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಧೀಶರು ಆರೋಪಿ ಐತಪ್ಪ ನಾಯ್ಕಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ವಿಧಿಸಿದ್ದ ಎರಡು ವರ್ಷಗಳ ಶಿಕ್ಷೆಯನ್ನು ಮೂರು ದಿನಗಳಿಗೆ ಇಳಿಸಿತು. ಜೊತೆಗೆ 2023ರ ಫೆ.20ರಿಂದ ಮಿತನಡ್ಕ ಅಂಗನವಾಡಿಯಲ್ಲಿ ಒಂದು ವರ್ಷ ಉಚಿತವಾಗಿ ಸೇವೆ ಸಲ್ಲಿಸಬೇಕು ಎಂದು ಆದೇಶಿಸಿತು. ಈ ಮೂಲಕ ವಿನೂತನ ರೀತಿಯಲ್ಲಿ ಶಿಕ್ಷೆ ನೀಡಿತು.

PREV
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್