ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯ ಎಂ. ಸತ್ಯವರ ಗ್ರಾಮದ ಬಳಿ ಶುಕ್ರವಾರ ನಸುಕಿನ ಜಾವ 4:50ಕ್ಕೆ ಸಂಭವಿಸಿದ ಸರಣಿ ಅಪಘಾತ ಹಲವು ಕುಟುಂಬಗಳ ಕನಸನ್ನು ಕಸಿದಿದೆ. ಬೈಕ್, ಎಕ್ಸ್‌ಯುವಿ 700 ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಬಲಿಯಾಗಿದ್ದು, ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಅಪಘಾತದ ವೇಳೆ ಒಪನ್ ಆಗಿದ್ದ ಏರ್ ಬ್ಯಾಗ್‌ಗಳು ಕೂಡ ಸ್ಫೋಟಗೊಂಡಿವೆ. ಮೃತರೆಲ್ಲರೂ ಎಳೆ ಪ್ರಾಯದ ತರುಣರೇ ಆಗಿದ್ದಾರೆ. ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ನಸುಕಿನ ಜಾವವೇ ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

12:04 PM (IST) Feb 13
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ಶುಕ್ರವಾರ ನಡೆದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ಯಾಂಟರ್, ಬೈಕ್ ಮತ್ತು ಎಕ್ಸ್‌ಯುವಿ ಕಾರಿನ ನಡುವೆ ನಡೆದ ಈ ದುರಂತದಲ್ಲಿ ಮೃತಪಟ್ಟವರಲ್ಲಿ ಆರು ವಿದ್ಯಾರ್ಥಿಗಳು ಮತ್ತು ಓರ್ವ ಬೈಕ್ ಸವಾರ ಸೇರಿದ್ದಾರೆ.
12:03 PM (IST) Feb 13
ಕೊಪ್ಪಳ ಜಿಲ್ಲೆಯ ಕುಷ್ಟಗಿ ಮತ್ತು ಕನಕಗಿರಿ ತಾಲೂಕುಗಳಲ್ಲಿ ಚಿರತೆ ಹಾಗೂ ಕರಡಿಗಳ ಹಾವಳಿ ಹೆಚ್ಚಾಗಿದ್ದು, ಜನವಸತಿ ಪ್ರದೇಶಗಳಲ್ಲಿ ಆತಂಕ ಸೃಷ್ಟಿಸಿದೆ. ಚಿರತೆಯೊಂದು ಕಾಡುಹಂದಿಯನ್ನು ಬಲಿ ಪಡೆದರೆ, ಆಹಾರ ಅರಸಿ ಕರಡಿಯೊಂದು ಗ್ರಾಮಕ್ಕೆ ನುಗ್ಗಿದ್ದು, ಅರಣ್ಯ ಇಲಾಖೆ ಜನರಿಗೆ ಎಚ್ಚರಿಕೆ ನೀಡಿದೆ.
12:03 PM (IST) Feb 13
Hoskote Highway Tragedy: 7 Dead in XUV 700 and Bike Collision ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಆರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ.
12:03 PM (IST) Feb 13
Tragic Hoskote Accident: 7 Dead in XUV and Bike Serial Collision ಹೊಸಕೋಟೆ ಬಳಿ ನಡೆದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿವೇಗವಾಗಿ ಬಂದ ಎಕ್ಸ್‌ಯುವಿ ಕಾರು ನಿಯಂತ್ರಣ ತಪ್ಪಿ ಬೈಕ್ ಹಾಗೂ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ.
12:02 PM (IST) Feb 13
ಹೊಸಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಆರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿವೇಗವಾಗಿ ಬಂದ ಕಾರು ಬೈಕ್ ಹಾಗೂ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ.